ದೊಡ್ಡಬಳ್ಳಾಪುರ, (ಆಗಸ್ಟ್.04): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೋಟಿಸ್ ಜಾರಿ ಮಾಡಿರುವುದನ್ನು ವಿರೋಧಿಸಿ ಆಗಸ್ಟ್ 5ರಂದು ನಗರದ ಟಿಬಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅಹಿಂದ ಸಂಘಟನೆಗಳ ಮುಖಂಡರಾದ ಜಿ.ಲಕ್ಷ್ಮೀಪತಿ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ” ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಪಾರ್ವತಿ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆನ್ನಲಾದ ಸೈಟ್ ವಿಚಾರವಾಗಿ ಅಪರಾಧ ಹಿನ್ನೆಲೆಯ ಆರ್‌ಟಿಐ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಮನವಿ ಮೇರೆಗೆ ರಾಜ್ಯಪಾಲರು ಕೂಲಂಕುಷವಾಗಿ ಪರಿಶೀಲಿಸದೇ ನೋಟಿಸ್ ನೀಡಿದ್ದಾರೆ. ಇದು ಹಿಂದುಳಿದ ವರ್ಗದ ನೇತಾರನನ್ನು ತುಳಿಯುವ ಹುನ್ನಾರ’ ಎಂದು ದೂರಿದರು.
ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಹಿಂದ ಸಂಘಟನೆಗಳ ಒಕ್ಕೂಟ, ಜಿಲ್ಲಾ ಶೋಷಿತ ಸಮುದಾಯಗಳ ಒಕ್ಕೂಟ ಜಂಟಿ ಸಹಭಾಗಿತ್ವದಲ್ಲಿ ಸೋಮವಾರ ಬೆಳಗ್ಗೆ 10.30ಕ್ಕೆ ನಗರದ ಟಿಬಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಈ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕಿನ ಎರಡು ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿ.ಲಕ್ಷ್ಮೀಪತಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….