ದೊಡ್ಡಬಳ್ಳಾಪುರ, (ಆಗಸ್ಟ್.10): ತಾಲೂಕಿನ ಹಿರಿಯ ರಾಜಕೀಯ ಮುತ್ಸದ್ದಿ ಪುರಸಭೆ ಮಾಜಿ ಸದಸ್ಯ ಎಸ್.ವಿ.ಕೃಷ್ಣಮೂರ್ತಿ ಅನಾರೋಗ್ಯದಿಂದ ಶನಿವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 97 ವರ್ಷ ವಯಸ್ಸಾಗಿತ್ತು.
ಮೃತರು ಪುತ್ರ, ಪುತ್ರಿ, ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ನಗರದ ಹೊರವಲಯದ ಮುಕ್ತಿಧಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಎಸ್.ವಿ.ಕೃಷ್ಣಮೂರ್ತಿ ಅವರು ಹಲವು ಬಾರಿ ಪುರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ದೇವಾಂಗ ಮಂಡಲಿ ಉಪಾಧ್ಯಕ್ಷರಾಗಿ ಹಾಗೂ ಕಾರ್‍ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ನೇಕಾರರ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ದನಿ ಎತ್ತುತ್ತಿದ್ದ ಅವರು, ಆರ್ಟ್ ಮತ್ತು ಪ್ಯೂರ್ ಸಿಲ್ಕ್ ವೀವರ್‍ಸ್ ಕೋ ಆಪರೇಟೀವ್ ಸೊಸೈಟಿ ಹಾಲಿ ಅಧ್ಯಕ್ಷರಾಗಿದ್ದರು. ಕರ್ನಾಟಕ ರಾಜ್ಯ ರೇಷ್ಮೆ ಫೆಡರೇಷನ್‌ನ ಉಪಾಧ್ಯಕ್ಷರಾಗಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….