ಡಿ.ಕೆ.ಶಿವಕುಮಾರ್‌ ಪಾಲಿಗೆ ನಾನು ನಾಗರ ಹಾವೇ; ಹೆಚ್.ಡಿ.ಕುಮಾರಸ್ವಾಮಿ

ಮೈಸೂರು, (ಆಗಸ್ಟ್.10); ಲೂಟಿ ಮಾಡುವವರ ಪಾಲಿಗೆ ನಾನು ನಾಗರ ಹಾವೇ ಹಾಗೂ ಡಿ.ಕೆ.ಶಿವಕುಮಾರ್‌ ಪಾಲಿಗೂ ನಾನು ನಾಗರ ಹಾವೇ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿಂದು ನಡೆದ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್‌ ಮೈಸೂರು ಚಲೋ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಹಾಗೂ ನನ್ನ ನಡುವೆ ಬಿರುಕು ಮೂಡಿಸಲು ಡಿಕೆ ಶಿವಕುಮಾರ್ ಶ್ರಮ ಪಟ್ಟು ಕೆಲಸ ಮಾಡುತ್ತಿದ್ದಾರೆ. ನನ್ನನ್ನು, ಯಡಿಯೂರಪ್ಪ ಅಂದು ವಿಧಾನಸಭೆಯಲ್ಲಿ ನಾಗರ ಹಾವು ಅಂದರು. ಆದರೆ ನಾನು ಡಿಕೆಶಿ ಪಾಲಿಗೆ ನಾಗರ ಹಾವೇ. ಲೂಟಿ ಮಾಡುವ ಡಿ.ಕೆ.ಶಿವಕುಮಾರ್​ಗೆ ನಾನು ನಾಗರ ಹಾವು ಇದ್ದ ಹಾಗೆ ಎಂದು ವಿಡಿಯೋ ಪ್ರದರ್ಶಿಸಿ ತಿರುಗೇಟು ನೀಡಿದರು.

ಈ ಬಂಡೆ ಸಿದ್ದರಾಮಯ್ಯನವರ ಜೊತೆ ಇರುತ್ತದೆ ಎಂದು ನಿನ್ನೆ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಇನ್ನು ಮುಂದೆ ಸಿದ್ದರಾಮಯ್ಯನವರ ಕಥೆ ಮುಗಿಯಿತು. ನಾನು ಇವರನ್ನು ನಂಬಿ 2018 ರಲ್ಲಿ ಬಂಡೆಯನ್ನ ನನ್ನ ಮೈಮೇಲೆ ಎಳೆದುಕೊಂಡೆ. ಲೋಕಸಭೆಯಲ್ಲಿ ಕಾಂಗ್ರೆಸ್​ನವರು 9ನೇ ಸ್ಥಾನವನ್ನು ಹೇಗೆ ಗೆದ್ದಿದ್ದಾರೆ ಗೊತ್ತಿದೆ. ಅದಕ್ಕೆ ನಾನು 8 ಸ್ಥಾನ ಎಂದು ಹೇಳುತ್ತೇನೆ. ನನ್ನ ಕಂಡರೆ ಹೊಟ್ಟೆಉರಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಒಳ್ಳೆಯ ಆಡಳಿತ ನೀಡಿದರೆ ನಮಗೆ ಯಾಕೆ ಹೊಟ್ಟೆಉರಿ. ನನ್ನ ಮೇಲೆ ಒಂದು ಕಪ್ಪುಚುಕ್ಕೆ ಇಲ್ಲ ಎಂದು ಸಿಎಂ ಹೇಳಿದ್ದಾರೆ. ಸಿದ್ದರಾಮಯ್ಯ ಹಿಂದುಳಿದ ವರ್ಗದ ಮುಖ್ಯಮಂತ್ರಿ ಅಲ್ಲ, ಆರೂವರೆ ಕೋಟಿ ಜನರ ಮುಖ್ಯಮಂತ್ರಿ ಎಂದರು.

ನಿಮ್ಮ ಅನ್ಯಾಯಗಳನ್ನು, ಅಕ್ರಮಗಳನ್ನು ಪ್ರಶ್ನೆ ಮಾಡುವುದು ತಪ್ಪೇ?. ಮುಡಾ ವಿಚಾರದಲ್ಲಿ ಅಕ್ರಮವಾಗಿ ನಿಮ್ಮ ಪತ್ನಿ ಹೆಸರಿನಲ್ಲಿ 14 ಸೈಟ್‌ ಪಡೆದಿರುವುದು ಅಕ್ರಮವಾಗಿಯೇ. ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ಖಾಕಿ ಚಡ್ಡಿ ಹಾಕಿದ್ದಾರೆಂದು ನನ್ನ ಬಗ್ಗೆ ಹೇಳಿದ್ದಾರೆ. ಆದ್ರೆ, ಸಿದ್ದರಾಮಯ್ಯ ಚಡ್ಡಿಯೆಲ್ಲ ಕಪ್ಪು ಮಾಡಿಕೊಂಡಿದ್ದಾರೆ ಎಂದು ಟೀಕಿಸಿದರು.

ಮುಖ್ಯಮಂತ್ರಿಗಳು ನಾನು ಯಾರಿಗೂ ಜಗ್ಗುವುದಿಲ್ಲ, ಬಗ್ಗುವುದಿಲ್ಲ ಎಂದಿದ್ದಾರೆ. ನಾವು ಸಹ ನಿಮ್ಮ ಯಾವುದೇ ಬೆದರಿಕೆಗಳಿಗೆ ಬಗ್ಗುವುದಿಲ್ಲ, ನಿಮ್ಮ ಸವಾಲುಗಳನ್ನು ಸ್ವೀಕರಿಸಿದ್ದೇವೆ. ನಾವು ಮುಡಾ ಹಗರಣದ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಹೋರಾಟ ಮುಂದುವರೆಸುತ್ತೇವೆ ಎಂದರು.

ಸಿದ್ಧಾರ್ಥ ಸಾವಿಗೆ ಕಾರಣ ಯಾರು?: ಎಸ್​.ಎಂ ಕೃಷ್ಣ ಅವರು, ಕೊತ್ವಾಲ್​ ಜೊತೆಗೆ ಜೀವನ ಮಾಡಿಕೊಂಡಿದ್ದ ನಿಮಗೆ ರಾಜಕೀಯದಲ್ಲಿ ಜನ್ಮ ಕೊಟ್ಟಿದ್ದರೂ, ಆ ಕುಟುಂಬದ ಶ್ರಮಜೀವಿ ಸಿದ್ಧಾರ್ಥ ಸಾವಿಗೆ ಕಾರಣ ಯಾರು? ಎಂದು ಡಿಕೆ ಶಿವಕುಮಾರ್ ಅವರನ್ನು ಇದೇ ವೇಳೆ ಪ್ರಶ್ನಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!