ವರಮಹಾಲಕ್ಷ್ಮೀ ವ್ರತದ ಹಿನ್ನೆಲೆ; ಹಬ್ಬದ ಆಚರಣೆ ಹೇಗಿರುತ್ತೆ.?

ಲಕ್ಷ್ಮೀದೇವಿ ಸಮುದ್ರಮಂಥನದಿಂದಲೇ ಆವಿರ್ಭವಿಸಿದ್ದು, ಕ್ಷೀರಸಾಗರದಿಂದ ಅವತರಿಸಿದಳೆಂದು ಹೇಳಲಾಗಿದೆ. ಹಾಗಾಗಿಯೇ ಲಕ್ಷ್ಮೀಯನ್ನು ಕ್ಷೀರಸಾಗರತನಯೆ ಎಂದೂ ಹೇಳಲಾಗುತ್ತದೆ. ಇಂದು ಹಬ್ಬ ಆಗಿರುವುದರಿಂದ ಈ ವ್ರತೆದ ಹಿನ್ನೆಲೆಯನ್ನು ತಿಳಿದುಕೊಳ್ಳಿ.

ಶ್ರಾವಣ ಮಾಸದ ಎರಡನೇ ಶುಕ್ರವಾರ ವರಮಹಾಲಕ್ಷ್ಮಿ ವ್ರತವನ್ನು ಆಚರಿಸಲಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಈ ದಿನ ಪೂಜಿಸಿದರೆ, ಅಷ್ಟ ಐಶ್ವರ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳಲಾಗಿದೆ. ಈ ಹಿನ್ನೆಲೆ ವರಮಹಾಲಕ್ಷ್ಮೀ ಹಬ್ಬವನ್ನು ಇಂದು (ಶುಕ್ರವಾರ) ಎಲ್ಲೆಡೆ ಆಚರಿಸಲಾಗುತ್ತಿದೆ.

ಲಕ್ಷ್ಮೀದೇವಿಯನ್ನು ಎಂಟು ರೂಪಗಳ ಸಂಪತ್ತಿಗೆ ಹೋಲಿಕೆ ಮಾಡಲಾಗಿದ್ದು, ಜ್ಞಾನ, ಐಶ್ವರ್ಯ, ಸುಖ, ಆರೋಗ್ಯ, ಧನ, ಧಾನ್ಯ, ಜಯ, ವಿಜಯ ಇವುಗಳನ್ನು ಲಕ್ಷ್ಮೀಯ ಲಕ್ಷಣಗಳೆಂದು ಹೇಳಲಾಗಿದ್ದು ವರಮಹಾಲಕ್ಷ್ಮಿ ವ್ರತವನ್ನಾಚರಿಸಿದರೆ ಜ್ಞಾನ, ಐಶ್ವರ್ಯ, ಸುಖ, ಆರೋಗ್ಯ, ಧನ, ಧಾನ್ಯ, ಜಯ, ವಿಜಯಗಳೆಂಬ ಅಷ್ಟ ಐಶ್ವರ್ಯ ಪ್ರಾಪ್ತಿಯಾಗುತ್ತದೆ ಎಂಬುದು ನಂಬಿಕೆ.

ವರಗಳನ್ನು ದಯಪಾಲಿಸುವುದರಿಂದ ಮತ್ತು ಶ್ರೇಷ್ಠಳಾಗಿರುವುದರಿಂದ ಆಕೆಯು ವರಮಹಾಲಕ್ಷ್ಮೀ. ಒಮ್ಮೆ ದೂರ್ವಾಸ ಮಹರ್ಷಿಗಳ ಶಾಪದಿಂದ ಇಂದ್ರನು ರಾಜ್ಯಭ್ರಷ್ಟನಾಗಲು, ಸ್ವರ್ಗಲಕ್ಷ್ಮಿಯೂ ಸಹ ಸ್ವರ್ಗವನ್ನು ಬಿಟ್ಟು ವೈಕುಂಠವನ್ನು ಸೇರಿದಳು.

ಆಗ ಪರಮ ದುಃಖ ಕ್ರಾಂತ ರಾದ ದೇವತೆಗಳೆಲ್ಲರೂ ಚತುರ್ಮುಖ ಬ್ರಹ್ಮನನ್ನು ಮುಂದಿಟ್ಟುಕೊಂಡು ವೈಕುಂಠ ದಲ್ಲಿ ಪರಮಾತ್ಮನನ್ನು ಶರಣುಹೊಂದಿ ದರು. ಪರಮದಯಾಳುವಾದ ವಿಷ್ಣುವಿನ ಆಜ್ಞೆಯಂತೆ ದೇವತೆಗಳು ದಾನವರೊಡನೆ ಅಮೃತಕ್ಕಾಗಿ ಕ್ಷೀರಸಮುದ್ರವನ್ನು ಮಥಿಸಲು,ಮಹಾಲಕ್ಷ್ಮಿಯು ಅಲ್ಲಿ ಆವಿರ್ಭವಿಸಿ, ದೇವತೆಗಳಿಗೆ ವರವನ್ನು ಅನುಗ್ರಹಿಸಿದಳು ಹಾಗೂ ಮಹಾವಿಷ್ಣುವಿನ ಪಾಣಿಗ್ರಹಣ ಮಾಡಿದಳು(ವಿವಾಹವಾದಳು).

ಕ್ಷೀರಸಾಗರದಲ್ಲಿ ಶ್ವೇತವರ್ಣದಲ್ಲಿ ಅವತರಿಸಿದ್ದರಿಂದ ವರಮಹಾಲಕ್ಷ್ಮಿ ವ್ರತದಂದು ಲಕ್ಷ್ಮೀಗೆ ಶ್ವೇತ ವರ್ಣದ ಕೆಂಪು ಅಂಚಿನ ಸೀರೆಯನ್ನುಡಿಸುವ ಪದ್ಧತಿ ಇದೆ. ಕುಂಕುಮಾರ್ಚನೆ ಮಾಡುವುದರೊಂದಿಗೆ ಲಕ್ಷ್ಮಿದೇವಿಯನ್ನು ಆವಾಹನೆ ಮಾಡಿ 12ಗಂಟಿನ ದಾರವನ್ನು ದೇವರ ಮುಂದಿಟ್ಟು ಪೂಜಿಸಿ ಸುಮಂಗಲಿಯರು ಅದನ್ನು ಕೈಗೆ ಕಟ್ಟಿಕೊಳ್ಳುತ್ತಾರೆ.

ನಿತ್ಯ ಶುದ್ಧ-ಬುದ್ಧ-ಮುಕ್ತಸ್ವರೂಪಳೂ, ನಿತ್ಯಸಿದ್ಧಳೂ ಆದ ಈ ಮಂಗಲದೇವತೆ ಯ ಮಹಿಮೆಯನ್ನು ವರ್ಣಿಸುವ ಶಾಸ್ತ್ರಗಳಲ್ಲೇ ಆಕೆಯನ್ನು ಕ್ಷೀರಸಮುದ್ರಸಂಭವೆ, ಸಮುದ್ರರಾಜನ ಪುತ್ರಿ, ಚಂದ್ರನತಂಗಿ, ಯಜ್ಞಕುಂಡದಲ್ಲಿ ಉದ್ಭವವಾದವಳು, ಕಮಲದಲ್ಲಿ ಆವಿರ್ಭವಿಸಿದವಳು ಇತ್ಯಾದಿ ಅಭಿಪ್ರಾಯಗಳನ್ನು ಕಾಣುತ್ತೇವೆ.

ವರಮಹಾಲಕ್ಷ್ಮೀ ವ್ರತವನ್ನು ಅತ್ಯಂತ ಮಹತ್ವದ ಮತ್ತು ಶಕ್ತಿಯುತವಾದ ಆಚರಣೆಯೆಂದು ಪರಿಗಣಿಸಲಾಗಿದೆ. ಏಕೆಂದರೆ ಶಿವನು ಪಾರ್ವತಿ ದೇವಿಗೆ ಈ ವ್ರತ ಮಾಡಲು ಇದರ ಪ್ರಾಮುಖ್ಯತೆ ಬಗ್ಗೆ ಹೇಳಿದ್ದಾನೆ.

ವರಮಹಾಲಕ್ಷ್ಮೀ ವ್ರತವನ್ನು ಮಾಡುವ ಜನರು ಎಲ್ಲಾ ರೀತಿಯ ನೋವು ಮತ್ತು ದುಃಖಗಳಿಂದ ಮುಕ್ತರಾಗುತ್ತಾರೆ ಮತ್ತು ವಿಷಯವನ್ನು ಅನುಭವಿಸುತ್ತಾರೆ. ಅಲ್ಲದೆ, ಭಕ್ತರ ಜೀವನ ಮತ್ತು ಮನೆಯಲ್ಲಿ ಸಾಮರಸ್ಯ ಮತ್ತು ಶಾಂತಿ ಮೇಲುಗೈ ಸಾಧಿಸುತ್ತದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಅಕ್ಕ-ತಮ್ಮನ ಸ್ಥಿತಿ ಚಿಂತಾಜನಕ..!

ದೊಡ್ಡಬಳ್ಳಾಪುರ: ಅಪಘಾತ.. ಅಕ್ಕ-ತಮ್ಮನ ಸ್ಥಿತಿ ಚಿಂತಾಜನಕ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ (Accident) ಅಕ್ಕ ಮತ್ತು ತಮ್ಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಎಪಿಎಂಸಿ

[ccc_my_favorite_select_button post_id="115491"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!