ಬಕೆಟ್ ರಾಜಕಾರಣ ಮಾಡಲ್ಲ: ಶಾಸಕ ಪ್ರದೀಪ್ ಈಶ್ವರ್ ಕಿಡಿ ನುಡಿ

ಚಿಕ್ಕಬಳ್ಳಾಪುರ, (ಆಗಸ್ಟ್27): ನಗರಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ 16 ಸದಸ್ಯರು ಪಕ್ಷನಿಷ್ಟೆಗೆ ಬದ್ದರಾಗಿ ಪಕ್ಷ ಸೂಚಿಸುವ ಅಭ್ಯರ್ಥಿಗೆ ತಪ್ಪದೆ ಮತ ಚಲಾಯಿಸಬೇಕು. ಪಕ್ಷನಿಷ್ಟೆ ತೋರಲಿಲ್ಲ ಎಂದವರನ್ನು ಮುಲಾಜಿಲ್ಲದೆ 6 ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವ ದಿಂದ ಉಚ್ಚಾಟನೆ ಮಾಡಲಾಗುವುದು ಎಂದು ಪಕ್ಷದ ಸದಸ್ಯರಿಗೆ ಗಳಿಗೆ ಶಾಸಕ ಪ್ರದೀಪ್ ಈಶ್ವರ್ ಎಚ್ಚರಿಕೆ ಸಂದೇಶ ನೀಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ನಗರಸಭೆ ಚುನಾವಣೆ ಸಂಬಂಧ ಕೇಳಿದ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು.

ನಾನು ಶಾಸಕ ಆಗಿರಬಹುದು ಆದರೆ ನಿಜವಾದ ರಾಜಕಾರಣ ಎಂದರೇನು ಎಂಬುದು ಇಂದಿಗೂ ನನಗೆ ಅರ್ಥವಾಗಿಲ್ಲ. ನನ್ನ ಸ್ಟೈಲ್ ಆಫ್ ರಾಜಕಾರಣ ಅಂದರೆ ಹೀಗೆಯೇ ಇರುತ್ತದೆ. ನಾನು ತಲೆಹಿಡಿದು ರಾಜಕಾರಣ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರತಿ ನಗರಸಭಾ ಸದಸ್ಯರನ್ನು ನಾನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇನೆ. ಆದರೆ ಬ್ಯಾಗ್‌ಗಳಲ್ಲಿ ತುಂಬಿಸಿ ಕೊಡುತ್ತಾರಲ್ಲಾ ಆ ವಿಶ್ವಾಸ ಮಾಡುವುದಿಲ್ಲ. ಯಾವ ಕೌನ್ಸಿಲರ್‌ಗೂ, ನಯಾ ಪೈಸೆ ದುಡ್ಡು ಕೊಡುವುದಿಲ್ಲ. ಟ್ರಿಪ್ ಕಳಿಸುವುದಿಲ್ಲ, ಪಾರ್ಟಿಕೊಡಿಸಲ್ಲ, ಪಕ್ಷದಿಂದ ಟಿಕೆಟ್ ಕೊಟ್ಟು ಗೆಲ್ಲಿಸಿದ್ದೇವೆ. ಪಕ್ಷನಿಷ್ಟೆಯಿದ್ದರೆ ಓಟು ಮಾಡುತ್ತಾರೆ ಚುನಾವಣೆಯಲ್ಲಿ ಕ್ರಾಸ್ ಓಟ್ ಮಾಡಿದರೋ ವಾರಕ್ಕೆ 6 ವರ್ಷಗಳ ಕಾಲ ಡಿಸ್‌ ಕ್ಯಾಲಿಫೈ ಮಾಡಿ ಬಿಸಾಕುತ್ತೇನೆ. ನನಗೆ ಅಧಿಕಾರ ಮುಖ್ಯವಲ್ಲ. ಕಾಂಗ್ರೆಸ್ ಪಕ್ಷವನ್ನು ನಿಯತ್ತಾಗಿ ಚಿಕ್ಕಬಳ್ಳಾಪುರದಲ್ಲಿ ಕಟ್ಟಬೇಕು ಅಷ್ಟೇ ಎಂದರು.

ಬಿಜೆಪಿಯವರು ಏನೋ ಒಂದು ವೋಟಿಗೆ 30 ರಿಂದ 40 ಲಕ್ಷ ಕೊಡುತ್ತಿದ್ದಾರಂತೆ ಕೊಡಲಿ. ನಾವು ಒಂದು ರೂಪಾಯಿ ಕೊಡಲ್ಲ. ಕಾಂಗ್ರೆಸ್ ಪಕ್ಷಕ್ಕೆ ಯಾರು ನಿಷ್ಟೆಯಿಂದ ಇರುತ್ತಾರೋ ಅವರೇ ಅಧ್ಯಕ್ಷ ಉಪಾಧ್ಯಕ್ಷರು.

ಕ್ರಾಸ್ ಓಟ್ ಹಾಕಿರೋರನ್ನು, ಬಿಜೆಪಿ ಪರ ನಿಂತವರನ್ನು ಒಬ್ಬರನ್ನೂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದಲ್ಲಿ ಕೂರಿಸುವುದಿಲ್ಲ. ಅಕಸ್ಮಾತ್ ಆ ಚೇರ್ ಸಿಗಲಿಲ್ಲ ಎಂದರೂ ಚಿಂತೆಯಿಲ್ಲ. ಮುಂದಿನ 12 ತಿಂಗಳಿಗೆ ಚುನಾವಣೆ ಬರುತ್ತದೆ ಅದೇ ನಮ್ಮ ಟಾರ್ಗೆಟ್ ಆಗಿರಲಿದೆ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!