ದರ್ಶನ್ ಪ್ರಕರಣ.. ಮಾಧ್ಯಮಗಳ ಆಸೆಗೆ ತಣ್ಣೀರೆರೆಚುದ್ರ ಗೃಹ ಸಚಿವ ಪರಮೇಶ್ವರ..?; ವಿಡಿಯೋ ನೋಡಿ

ಬೆಂಗಳೂರು, (ಆಗಸ್ಟ್ 27): ಅಶ್ಲೀಲ ಸಂದೇಶ ಕಳುಹಿಸಿದ್ದ ಹಿನ್ನೆಲೆಯಲ್ಲಿ ಕೊಲೆ ಪ್ರಕರಣದ ಆರೋಪದಡಿ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ಮತ್ತು ಇತರ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ವಿಚಾರವನ್ನು ಸರ್ಕಾರ ತೀರ್ಮಾನ ಮಾಡುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಸ್ಪಷ್ಟವಾಗಿ ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂದೀಖಾನೆ ಪ್ರಾಧಿಕಾರವು ಕೋರ್ಟ್‌ನ ನಿರ್ದೇಶನದ ಮೇರೆಗೆ ಆರೋಪಿಗಳನ್ನು ಸ್ಥಳಾಂತರ ಮಾಡಲಿದೆ.‌ ವಿಚಾರಣಾದೀನ ಕೈದಿಯಾಗಿರುವುದರಿಂದ ಕೆಲವು ನಿಯಮಗಳ ಪ್ರಕಾರವೇ ಸ್ಥಳಾಂತರ ಮಾಡಬೇಕಾಗುತ್ತದೆ. ಮುಂದಿನ ಎರಡು ದಿನಗಳಲ್ಲಿ ಸ್ಥಳಾಂತರ ಆಗಬಹುದು ಎಂದರು.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭದ್ರತೆ ದೃಷ್ಟಿಯಿಂದ ಆಂತರಿಕ ಆಡಳಿತದ ಬದಲಾವಣೆ ಮಾಡಬಹುದು. ಆದರೆ, ಮೂರು ಭಾಗ ಮಾಡಲು ಆಗುವುದಿಲ್ಲ. ಬ್ಲಾಕ್ 1, ಬ್ಲಾಕ್ 2 ಬ್ಲಾಕ್ 3 ಇವೆ. ಅದರ ಜೊತೆಗೆ ಬೇರೆ ಬ್ಯಾರಕ್‌ಗಳಿವೆ. ಇದರಲ್ಲಿ ಕೈದಿಗಳನ್ನು ಇರಿಸಲು ಮಾರ್ಪಾಡು ತರಬಹುದು, ಭಾಗ ಮಾಡುವುದಿಲ್ಲ ಎಂದು ತಿಳಿಸಿದರು.

ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಎಂಬುವನಿಗೆ ಒಂದು ಬ್ಯಾರಕ್‌ನಿಂದ ಮತ್ತೊಂದು ಬ್ಯಾರಕ್‌ಗೆ ಹೋಗಲು ಅವಕಾಶ ಕೊಟ್ಟಿದ್ದಾರೆ ಎಂಬುದು ನಿನ್ನೆ ಭೇಟಿ ನೀಡಿದ ವೇಳೆ ಗೊತ್ತಾಗಿದೆ. ಈ ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲಿಯೂ ಸೆರೆಯಾಗಿದೆ‌. ಈ ಹಿನ್ನೆಲೆಯಲ್ಲಿ ನಾವು ಕ್ರಮ ಕೈಗೊಳ್ಳಲು ಸಾಧ್ಯವಾಗಿದೆ. ಈಗಾಗಲೇ 9 ಅಧಿಕಾರಿಗಳನ್ನು ಅಮಾನತು ಮಾಡಿದ್ದೇವೆ. ಜೈಲಿನ ಮುಖ್ಯ ಅಧೀಕ್ಷಕ,  ಅಧೀಕ್ಷಕನನ್ನು ಅಮಾನತು ಮಾಡಿದ್ದೇವೆ.‌ ಈ ಸ್ಥಳಗಳಿಗೆ ಬೇರೆ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದರು.

ಕಾರಾಗೃಹದಲ್ಲಿ ದರ್ಶನ್‌ಗೆ ಯಾರೆಲ್ಲ ಸಹಕಾರ ಕೊಟ್ಟಿದ್ದಾರೋ ಅವರನ್ನು ಅಮಾನತು ಮಾಡಲಾಗಿದೆ.‌ ತನಿಖೆ ಇನ್ನೂ ಮುಂದುವರೆದಿದೆ. ಹೆಚ್ಚಿನ ತನಿಖೆಗಾಗಿ ಒಬ್ಬರು ಹಿರಿಯ ಐಪಿಎಸ್ ಅಧಿಕಾರಿ ನೇಮಕ ಮಾಡುತ್ತೇವೆ. ಇವರು ಕೊಡುವ ವರದಿ ಆಧರಿಸಿ ಶಾಶ್ವತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು‌.

ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ಈ ಹಿಂದೆ ಸಾರ್ವಜನಿಕ‌ ಲೆಕ್ಕ ಪತ್ರ ಸಮಿತಿಯ ಅಧ್ಯಕ್ಷರಾಗಿದ್ದ ವೇಳೆ 2020ರಲ್ಲಿ ಜೈಲು ಸುಧಾರಣೆಗೆ, ವರದಿ ನೀಡಿರುವುದು ನಿನ್ನೆ ಗಮನಕ್ಕೆ ಬಂದಿದೆ. ಅದನ್ನು ತರಿಸಿಕೊಂಡು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಮನಮೋಹನ ಸಿಂಗ್ ಅವರು ಪ್ರಧಾನಿಯಾಗಿದ್ದ ವೇಳೆ ರಾಷ್ಟ್ರಮಟ್ಟದಲ್ಲಿ ಪೊಲೀಸ್ ಸುಧಾರಣೆ, ಕಾರಾಗೃಹ ಸುಧಾರಣೆಗೆ ವರದಿ ನೀಡಲಾಗಿತ್ತು. ಆ ವರದಿಯನ್ನು ತರಿಸಿಕೊಳ್ಳಲಾಗುವುದು. ಈಗಿನ ವ್ಯವಸ್ಥೆಯನ್ನು ಸುಧಾರಣೆ ಮಾಡಲಾಗುವುದು ಎಂದು ಹೇಳಿದರು.

ಪರಪ್ಪನ ಅಗ್ರಹಾರದಲ್ಲಿ ನಡೆದ ಘಟನೆಯನ್ನು ಮಾತ್ರ ತನಿಖೆ ನಡೆಸುತ್ತಿಲ್ಲ. ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ಏನೆಲ್ಲ ನಡೆಯುತ್ತಿದೆ.‌ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ನಡೆಸಲಾಗುವುದು. ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ತರಿಸಿಕೊಳ್ಳಲಾಗುವುದು‌. ಹಿಂಡಲಗಾ ಜೈಲಿಗೆ ಭೇಟಿ ನೀಡಿದಾಗ ಕೆಲವು ಲೋಪದೋಷಗಳು ಕಂಡುಬಂದಿತ್ತು. ಕ್ರಮ ಕೈಗೊಳ್ಳಲಾಗಿತ್ತು. ಶಿವಮೊಗ್ಗ, ಮಂಗಳೂರು‌ ಕಾರಾಗೃಹ ಎಲ್ಲವನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಸಾಕ್ಷಿಗಳನ್ನು ಹೆದರಿಸುವ ನಿಟ್ಟಿನಲ್ಲಿ ಫೋಟೋಗಳನ್ನು ವೈರಲ್ ಮಾಡಲಾಗುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಸಾಕ್ಷಿಗಳನ್ನು ಹೆದರಿಸುವ ಅಗತ್ಯ ನಮಗಿಲ್ಲ. ನ್ಯಾಯಯುತವಾಗಿ ಯಾರಿಗೆ ಏನು ಶಿಕ್ಷೆ ಆಗಬೇಕು. ಯಾರಿಗೆ ನ್ಯಾಯ ಸಿಗಬೇಕು. ನ್ಯಾಯಯುತವಾಗಿ ಕಾನೂನು ಚೌಕಟ್ಟಿನಲ್ಲಿ ಕ್ರಮ‌ಕೈಗೊಳ್ಳುತ್ತೇವೆ. ಇದರಲ್ಲಿ ರಾಜಕೀಯ ಲಾಭ ಪಡೆಯುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಯುದ್ಧದಿಂದ ದೇಶದಲ್ಲಿ ಸಾಕಷ್ಟು ಸಮಸ್ಯೆ; ಪ್ರಧಾನಿಯವರು ಮೌನ ಮುರಿದಿಲ್ಲ – ಡಿ.ಕೆ. ಸುರೇಶ್‌

ಯುದ್ಧದಿಂದ ದೇಶದಲ್ಲಿ ಸಾಕಷ್ಟು ಸಮಸ್ಯೆ; ಪ್ರಧಾನಿಯವರು ಮೌನ ಮುರಿದಿಲ್ಲ – ಡಿ.ಕೆ. ಸುರೇಶ್‌

“ಲೋಕಸಭಾ, ವಿಧಾನಸಭಾ ಕ್ಷೇತ್ರಗಳ ಮರು ವಿಂಗಣೆಯಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕ್ಷೇತ್ರಗಳು ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಮುಗ್ಗಟನ್ನು ಎದುರಿಸಬೇಕಾಗುತ್ತದೆ. ನಮ್ಮ ತೆರಿಗೆಗಳು ಉತ್ತರದ ರಾಜ್ಯಗಳಿಗೆ ಹಂಚಿಕೆಯಾಗಲಿದೆ” ಎಂದು ಬಮೂಲ್‌ ಅಧ್ಯಕ್ಷ ಡಿ.ಕೆ. ಸುರೇಶ್‌ (D.K.

[ccc_my_favorite_select_button post_id="120770"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]