ನಂದಿನಿ ಹಾಲಿನ ಬೆಲೆ ಏರಿಕೆ ಎಂದು ವಿಪಕ್ಷಗಳ ಆಕ್ರೋಶ.. 50‌ ML ಹಾಲು ಜಾಸ್ತಿ ಕೊಡ್ತಿರೋದು ಎಂದು ತಿರುಗೇಟು ಕೊಟ್ಟ ಸಿಎಂ

ಬೆಂಗಳೂರು, (ಜೂ.25); ಹಾಲಿನ ಪೂರೈಕೆ ಹೆಚ್ಚಳದ ಹಿನ್ನಲೆಯಲ್ಲಿ ಕೆಎಂಎಫ್ ನಂದಿನಿ ಹಾಲಿನ ಪ್ಯಾಕೆಟ್‌ಗಳಲ್ಲಿ 50 ಎಂಎಲ್ ಹೆಚ್ಚು ಮಾಡಿದ್ದು, ಅದರ ಅನ್ವಯ ಎರಡು ರೂ ಹಾಲಿನ ಬೆಲೆ ಏರಿಕೆ ಮಾಡಿದೆ.

ಈ ಕುರಿತಂತೆ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ವಿಪಕ್ಷ ನಾಯಕ ಆರ್.ಅಶೋಕ ಟ್ವಿಟ್ ಮಾಡಿ, ತುರ್ತು ಪರಿಸ್ಥಿತಿ ಹೇರಿಕೆಯ ವಾರ್ಷಿಕೋತ್ಸವ ಸಂಭ್ರಮಿಸಲು ಕಾಂಗ್ರೆಸ್ ಸರ್ಕಾರ ನಂದಿನಿ ಹಾಲಿನ ದರವನ್ನ ಲೀಟರ್ ಗೆ ಎರಡು ರೂಪಾಯಿ ಹೆಚ್ಚಳ ಮಾಡಿ ವಿಕೃತ ಸಂತೋಷ ಅನುಭವಿಸುತ್ತಿದೆ.

ಸಿಎಂ ಸಿದ್ದರಾಮಯ್ಯನವರೇ, ತಾವು ಅಧಿಕಾರಕ್ಕೆ ಬಂದ ಮೇಲೆ ಕೇವಲ 13 ತಿಂಗಳಿನಲ್ಲಿ ಹಾಲಿನ ದರವನ್ನ ಎರಡು ಬಾರಿ ಹೆಚ್ಚಿಸಿದ್ದೀರಿ. ಕಳೆದ ವರ್ಷ ಆಗಸ್ಟ್ ನಲ್ಲಿ  3 ರೂಪಾಯಿ ಹೆಚ್ಚಳವಾಗಿದ್ದ ಹಾಲಿನ ಬೆಲೆ ಈಗ ಮತ್ತೊಮ್ಮೆ 2 ರೂಪಾಯಿ ಹೆಚ್ಚಾಗಿದೆ.  

ರಾಜ್ಯದ ಬಡವರು, ಮಾಧ್ಯಮ ವರ್ಗದ ಜನ ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಗಗನಕ್ಕೇರಿರುವ ತರಕಾರಿ ಬೆಲೆಗಳಿಂದ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸಿ ಮತ್ತೊಮ್ಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದೀರಿ. 

ನಿಮಗೆ ಬಡವರು, ಮಾಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ, ಈ ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಿರಿ ಎಂದಿದ್ದಾರೆ.

ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವಿಟ್ ಮಾಡಿ, ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಕಾಂಗ್ರೆಸ್ ಸರ್ಕಾರ ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಮುಂದಾಗಿದೆ.

ಇತ್ತ ಬಡವರಿಗೂ ಉಪಕಾರಿಯಾಗಲ್ಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ, ಇದೀಗ ನಂದಿನಿ ಹಾಲಿನ ದರ ಹೆಚ್ಚಿಸಿ ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ದರವನ್ನು 2 ರೂ 10 ಪೈಸೆ ಹೆಚ್ಚಳ ಮಾಡಲಾಗಿದೆ. 

ಈ ರಾಜ್ಯದ ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದು ಕೊಂಡಿದೆ. ಈ ಜನವಿರೋಧಿ ಸರ್ಕಾರ ಕೆಳಗಿಳಿಸುವವರೆಗೂ ಬಿಜೆಪಿಯ ಜನಪರ ಹೋರಾಟ ನಿರಂತರ ಸಾಗಲಿದೆ ಎಂದಿದ್ದಾರೆ.

ಮತ್ತೊಂದೆಡೆ ಬಿಜೆಪಿ ಮೈತ್ರಿ ಪಕ್ಷವಾದ ಜೆಡಿಎಸ್ ಕೂಡ ರಾಜ್ಯ ಸರ್ಕಾರ ವಿರುದ್ಧ ಟ್ವಿಟ್ ದಾಳಿ ಮಾಡಿದ್ದು, ತುರ್ತು ಪರಿಸ್ಥಿತಿಯ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರ ಜನರಿಗೆ ಬಂಪರ್ ಕೊಡುಗೆ ಕೊಟ್ಟಿದೆ!

ಈ ದರ ಏರಿಕೆ ಲಾಭ ಹಾಲು ಉತ್ಪಾದಕರಿಗೆ ಸಿಗಲಿದೆಯೋ ಅಥವಾ ಕೆಎಂಎಫ್ ಜೋಳಿಗೆ ಹೋಗಲಿದೆಯೋ? ಗ್ಯಾರಂಟಿಯೇ ಬೆಲೆ ಏರಿಕೆಗೆ ಮೂಲ ಎಂದು ವ್ಯಂಗ್ಯವಾಡಿದೆ.

ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ನಂದಿನಿ ಹಾಲಿನ ಪ್ಯಾಕೇಟ್‌ ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್‌ ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅರ್ಧಲೀಟರ್‌ ಹಾಲಿನ ಪ್ಯಾಕೇಟ್‌ ನಲ್ಲಿ ಮುಂದೆ 550 ಎಂಎಲ್‌ ಹಾಲು ಹಾಗೂ ಲೀಟರ್‌ ಪ್ಯಾಕೇಟ್‌ ನಲ್ಲಿ 1,050 ಎಂಎಲ್‌ ಹಾಲು ಸಿಗಲಿದೆ. ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ರೈತರು ಹೆಚ್ಚುವರಿಯಾಗಿ ತರುತ್ತಿರುವ ಹಾಲನ್ನು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಕೆಎಂಎಫ್‌ ಸಂಸ್ಥೆ ಪ್ಯಾಕೇಟ್‌ ಗಳಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ ಎಂದಿದ್ದಾರೆ. 

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ.15 ಹೆಚ್ಚಳವಾಗಿದೆ. ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್‌ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್‌ ಗೆ ಏರಿಕೆಯಾಗಿದೆ. 

ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು, ಯಾವುದೇ ಕಾರಣಕ್ಕೂ ಅವರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಒಂದು ಲೀಟರ್‌ ಹಾಲಿನ ಪ್ಯಾಕೇಟಿಗೆ ಹೆಚ್ಚುವರಿಯಾಗಿ 50 ಮಿ.ಲೀ ಹಾಲನ್ನು ಸೇರಿಸಿ, ಈ ಹೆಚ್ಚುವರಿ ಹಾಲಿನ ಬೆಲೆ 2 ರೂಪಾಯಿಯನ್ನು ಮಾತ್ರ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ. ಹಾಲಿನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರುವುದಿಲ್ಲ.

ಈ ವರೆಗೆ 1,000 ಮಿ.ಲೀ ಹಾಲಿಗೆ ರೂ.42 ಹಾಗೂ 500 ಮಿ.ಲೀ ಹಾಲಿಗೆ ರೂ.22 ದರವನ್ನು ನಿಗದಿಪಡಿಸಲಾಗಿತ್ತು, ಇನ್ನು ಮುಂದೆ 1,050 ಮಿ.ಲೀ ಹಾಗೂ 550 ಮಿ.ಲೀ ಹಾಲಿನ ಪ್ಯಾಕೇಟ್‌ ಗಳನ್ನು ಮಾರಾಟ ಮಾಡಲಾಗುತ್ತಿದ್ದು, ಅದಕ್ಕೆ ಕ್ರಮವಾಗಿ ರೂ.44 ಹಾಗೂ ರೂ.24 ದರ ನಿಗದಿಪಡಿಸಲಾಗುತ್ತದೆ.

ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆ.ಎಂ.ಎಫ್‌ ಸಂಸ್ಥೆಯು ತೆಗೆದುಕೊಂಡ ನಿರ್ಣಯವಾಗಿದ್ದು, ಹೆಚ್ಚುವರಿಯಾಗಿ ಉದ್ಪಾದನೆಯಾಗುತ್ತಿರುವ ಹಾಲನ್ನು ಗ್ರಾಹಕರಿಗೆ ನೇರವಾಗಿ ತಲುಪಿಸುವ ಸದುದ್ದೇಶವನ್ನು ಹೊಂದಿದೆ. 

ಈಗಾಗಲೇ ಗರಿಷ್ಟ ಪ್ರಮಾಣದ ಹಾಲನ್ನು ಹಾಲಿನ ಪೌಡರ್‌ ತಯಾರಿಕೆ ಮಾಡುವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ನಿತ್ಯ ಸುಮಾರು 30 ಲಕ್ಷ ಲೀಟರ್‌ ಹಾಲು ಪೌಡರ್‌ ತಯಾರಿಕೆಗಾಗಿ ಬಳಸಲ್ಪಡುತ್ತಿದ್ದು, 250 ಮೆಟ್ರಿಕ್‌ ಟನ್‌ ಹಾಲಿನ ಪೌಡರ್‌ ತಯಾರಿಸಲಾಗುತ್ತಿದೆ. ಇದು ಹಾಲಿನ ಪೌಡರ್‌ ಗೆ ಇರುವ ಬೇಡಿಕೆಗೆ ಅನುಗುಣವಾಗಿದೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ರಾಜ್ಯದಲ್ಲಿ ನಿತ್ಯ ಸರಾಸರಿ 72 ಲಕ್ಷ ಲೀಟರ್‌ ಗಳಷ್ಟು ಹಾಲು ಸಂಗ್ರಹವಾಗುತ್ತಿತ್ತು. ಈ ಹಿಂದೆ ಹಾಲಿನ ಬೆಲೆಯಲ್ಲಿ ರೂ.3 ಹೆಚ್ಚಳ ಮಾಡಿ ಆ ಹೆಚ್ಚುವರಿ ಹಣವನ್ನು ರೈತರಿಗೆ ನೇರವಾಗಿ ವರ್ಗಾಯಿಸುವ ಪ್ರೋತ್ಸಾಹದಾಯಕ ಕ್ರಮ ಕೈಗೊಂಡಿದ್ದರಿಂದ ಹೈನೋದ್ಯಮವು ಹಿಂದಿಗಿಂತ ಲಾಭ ತಂದುಕೊಡುವ ಉದ್ಯೋಗವಾಯಿತು. ಜೊತೆಗೆ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಜಾನುವಾರುಗಳಿಗೆ ಹಸಿರು ಮೇವು ಲಭ್ಯವಾಗುತ್ತಿದೆ. ಈ ಎರಡು ಕಾರಣಗಳಿಂದಾಗಿ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಇಂದು ನಿತ್ಯ ಸರಿಸುಮಾರು 1 ಕೋಟಿ ಲೀಟರ್‌ ತಲುಪುವ ಹಂತಕ್ಕೆ ಬಂದಿದೆ. 

ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತಿರುವ ಹಾಲನ್ನು ರೈತರಿಂದ ಖರೀದಿಸಿ, ಗ್ರಾಹಕರಿಗೂ ಹೊರೆಯಾಗದ ರೀತಿಯಲ್ಲಿ ಮಾರಾಟ ಮಾಡುವ ಸಲುವಾಗಿ ಕೆ.ಎಂ.ಎಫ್‌ ಸಂಸ್ಥೆ ಈ ನಿರ್ಧಾರ ಕೈಗೊಂಡಿದೆ ಎಂದು ತಿರುಗೇಟು ನೀಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಾರಿಗೆ ನೌಕರರ ಮುಷ್ಕರ; ಕೂಡಲೇ ಪರಿಹಾರ ನೀಡುವಂತೆ ಬಿ.ವೈ.ವಿಜಯೇಂದ್ರ ಆಗ್ರಹ

ಸಾರಿಗೆ ನೌಕರರ ಮುಷ್ಕರ; ಕೂಡಲೇ ಪರಿಹಾರ ನೀಡುವಂತೆ ಬಿ.ವೈ.ವಿಜಯೇಂದ್ರ ಆಗ್ರಹ

ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112132"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕಣ್ಣೀರು ತರಿಸುವ  ನವವಿವಾಹಿತೆಯ ಸೂಸೈಡ್ ನೋಟ್..!

ಕಣ್ಣೀರು ತರಿಸುವ ನವವಿವಾಹಿತೆಯ ಸೂಸೈಡ್ ನೋಟ್..!

ಅಣ್ಣಾ, ಈ ಬಾರಿ ನಾನು ನಿನಗೆ ರಾಖಿ ಕಟ್ಟಲು ಸಾಧ್ಯವಾಗದಿರಬಹುದು ಎಂದು ಸುಸೈಡ್ ನೋಟ್ ಬರೆದಿರುವ ಸಹೋದರಿಯೋರ್ವಳು ಗಂಡನ ಕಿರುಕುಳದಿಂದ ಬೇಸತ್ತು ಮದುವೆಯಾದ ಆರು ತಿಂಗಳಲ್ಲಿಯೇ suicide

[ccc_my_favorite_select_button post_id="112128"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!