ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ರಾಷ್ಟ್ರ ಪ್ರಶಸ್ತಿ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶಂಸೆ

ದೊಡ್ಡಬಳ್ಳಾಪುರ, (ಜುಲೈ.01); ನವದೆಹಲಿ, (ಜೂ.28); ನಗರದ ಹೊರವಲಯದಲ್ಲಿರುವ ತಾಯಿ ಮಗು ಆಸ್ಪತ್ರೆಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ನೀಡಲಾಗುವ ರಾಷ್ಟ್ರೀಯ ಗುಣಮಟ್ಟದ ಖಾತ್ರಿ ಅವಾರ್ಡ್ (NQAS) ರಾಷ್ಟ್ರ ಮಟ್ಟದ ಪ್ರಶಸ್ತಿ ದೊರೆತಿದೆ.

ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯದ ರಾಜ್ಯ ಸಚಿವ ಪ್ರತಾಪ್ ರಾವ್ ಗಣಪತ್ ರಾವ್ ಜಾದವ್ ಹಾಗೂ ಅನುಪ್ರಿಯ ಪಾಟೀಲ್ ಅವರು ಪ್ರಶಸ್ತಿ ಪ್ರಧಾನ ಮಾಡಿದರು.

ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ರಮೇಶ್, ಡಾ.ಮಂಜುನಾಥ್, ಸಿಸ್ಟರ್ ಭವ್ಯ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಟ್ವಿಟ್ ಮಾಡಿರುವ ಅವರು, ಜೂನ್ 28, 2024 ರಂದು ವಿಜ್ಞಾನ ಭವನದಲ್ಲಿ ನಡೆದ “ಆಯುಷ್ಮಾನ್ ಭಾರತ್, ಗುಣವತ್ ಹೆಲ್ತ್” ಎಂಬ ಥೀಮ್‌ನೊಂದಿಗೆ GOI ಆಯೋಜಿಸಿದ ರಾಷ್ಟ್ರೀಯ ಮಟ್ಟದ ಸಮಾರಂಭದಲ್ಲಿ ಕರ್ನಾಟಕವು ನಾಲ್ಕು NQAS (ರಾಷ್ಟ್ರೀಯ ಗುಣಮಟ್ಟದ ಭರವಸೆ ಮಾನದಂಡಗಳು) ಪ್ರಶಸ್ತಿಗಳನ್ನು ಗೆದ್ದಿದೆ ಎಂದು ಹಂಚಿಕೊಳ್ಳಲು ಹೆಮ್ಮೆಯಿದೆ. 

ಎಂಸಿ ಗನ್ ಜಿಲ್ಲಾ ಆಸ್ಪತ್ರೆ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲೂಕು ಆಸ್ಪತ್ರೆ ದೊಡ್ಡಬಳ್ಳಾಪುರ, ನಗರ ಸಮುದಾಯ ಆರೋಗ್ಯ ಕೇಂದ್ರ (UCHC) ಶ್ರೀರಾಮಪುರಂ, BBMP; ಮತ್ತು ಆಯುಷ್ಮಾನ್ ಆರೋಗ್ಯ ಮಂದಿರ-ಉಪ ಕೇಂದ್ರ ತೊರಡೆವಂಡಹಳ್ಳಿ, ಕೋಲಾರ ಈ ಗಮನಾರ್ಹ ಸಾಧನೆಗಾಗಿ. 

ಅಲ್ಲದೆ, ಕರ್ನಾಟಕದಲ್ಲಿ 855 ಸಾರ್ವಜನಿಕ ಆರೋಗ್ಯ ಸೌಲಭ್ಯಗಳು NQAS ಪ್ರಮಾಣೀಕರಣ NQAS ಪ್ರಶಸ್ತಿಗಳನ್ನು ಸಾಧಿಸಿವೆ, ಇದು ರಾಷ್ಟ್ರೀಯ ಆರೋಗ್ಯ ವ್ಯವಸ್ಥೆಗಳ ಸಂಪನ್ಮೂಲ ಕೇಂದ್ರ (NHSRC) ನಿಗದಿಪಡಿಸಿದ ಕಠಿಣ ಗುಣಮಟ್ಟದ ಮಾನದಂಡಗಳನ್ನು ಪೂರೈಸುವ ಆರೋಗ್ಯ ಸೌಲಭ್ಯಗಳಿಗೆ ನೀಡಲಾಗುತ್ತದೆ.

ಸೇವಾ ನಿಬಂಧನೆ, ರೋಗಿಗಳ ಹಕ್ಕುಗಳು, ಒಳಹರಿವು, ವೈದ್ಯಕೀಯ ಆರೈಕೆ, ಸೋಂಕು ನಿಯಂತ್ರಣ, ಗುಣಮಟ್ಟ ನಿರ್ವಹಣೆ ಮತ್ತು ಫಲಿತಾಂಶ. ಈ ಸಾಧನೆಯು ಅತ್ಯುತ್ತಮ ಆರೋಗ್ಯವನ್ನು ತಲುಪಿಸಲು, ರೋಗಿಗಳ ಸುರಕ್ಷತೆಯನ್ನು ಖಾತ್ರಿಪಡಿಸುವ ಮತ್ತು ಉನ್ನತ ದರ್ಜೆಯ ಮೂಲಸೌಕರ್ಯವನ್ನು ನಿರ್ವಹಿಸುವ ನಮ್ಮ ಬದ್ಧತೆಯನ್ನು ಗುರುತಿಸುತ್ತದೆ. 

ನಮ್ಮ ಸೌಲಭ್ಯಗಳಾದ್ಯಂತ ಆರೋಗ್ಯದ ಗುಣಮಟ್ಟವನ್ನು ಸುಧಾರಿಸಲು ಮತ್ತು ರಾಷ್ಟ್ರೀಯ ಗುಣಮಟ್ಟವನ್ನು ಪರಿಣಾಮಕಾರಿಯಾಗಿ ಪೂರೈಸಲು ನಾವು ನಮ್ಮ ಪ್ರಯತ್ನಗಳನ್ನು ಬಲಪಡಿಸುವುದನ್ನು ಮುಂದುವರಿಸುತ್ತೇವೆ‌ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಕುರಿತು ದೊಡ್ಡಬಳ್ಳಾಪುರ ನಿಕಟ ಪೂರ್ವ ಶಾಸಕ ಟಿ.ವೆಂಕಟರಮಣಯ್ಯ ಪ್ರಶಂಸೆ ವ್ಯಕ್ತಪಡಿಸಿದ್ದು, 2013ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಮತದಾರರು ನನಗೆ ನೀಡಿದ ಶಕ್ತಿಯಿಂದಾಗಿ ಈ ಆಸ್ಪತ್ರೆ ತಾಲೂಕಿನ ಜನರಿಗೆ ಸೇವೆ ಸಲ್ಲಿಸುತ್ತಾ‌. ಜಿಲ್ಲೆ, ರಾಜ್ಯ, ಈಗ ರಾಷ್ಟ್ರ ಮಟ್ಟದಲ್ಲಿಯೂ ಪ್ರಶಸ್ತಿ ಪಡೆಯಲು ಸಾಧ್ಯವಾಗಿದೆ.

ಈ ಪ್ರಶ್ತಿಗೆ ಇಲ್ಲಿನ ಸಿಬ್ಬಂದಿಗಳ ಕಾಳಜಿ ಅಪಾರವಾಗಿದ್ದು, ಆಸ್ಪತ್ರೆ ಆರಂಭವಾದಾಗಿನಿಂದ ಜಿಲ್ಲಾ ಮಟ್ಟದ ಆಸ್ಪತ್ರೆಗೂ ಮೀರಿ ಬರುವ ರೋಗಿಗಳಿಗೆ ಹಗಲಿರುಳು ಸೇವೆ ಸಲ್ಲಿಸುತ್ತಿರುವುದು ಪ್ರಶಂಸನೀಯವಾಗಿದ್ದು, ಅವರಿಗೆಲ್ಲರಿಗೂ ಶುಭಕೋರುತ್ತೇನೆ ಎಂದರು.

ನನ್ನ ಅಧಿಕಾರವಧಿಯಲ್ಲಿ ನಿರ್ಮಾಣಗೊಂಡು ತಾಲೂಕಿನ ಜನತೆಗೆ ವರದಾನವಾಗಿ, ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದಿರುವ ಆಸ್ಪತ್ರೆಯ ಕಡೆಗೆ ಮತ್ತಷ್ಟು ಹೆಚ್ಚಿನ ಗಮನ ಅಧಿಕಾರಿಗಳು ನೀಡಬೇಕಿದೆ. ಬಾಗಿಲು ಮುಚ್ಚಿರುವ ಮೇಕ್ ಶಿಪ್ಟ್ ಆಸ್ಪತ್ರೆಯನ್ನು ಮರು ಬಳಕೆ ಮಾಡಿಕೊಂಡು, ಹಾಸಿಗೆ ಕೊರತೆ ಉಂಟಾಗದಂತೆ ಕಾಳಜಿವಹಿಸುವಂತೆ ಟಿ.ವೆಂಕಟರಮಣಯ್ಯ ಸಲಹೆ ನೀಡಿದ್ದಾರೆ. 

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!