ದೊಡ್ಡಬಳ್ಳಾಪುರ| ನಕಲಿ ದಾಖಲೆ ಸೃಷ್ಟಿಸಿ ಭೂಕಬಳಿಕೆ ಆರೋಪ; ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರ ಪ್ರತಿಭಟನೆ

ದೊಡ್ಡಬಳ್ಳಾಪುರ, (ಜುಲೈ.04); ತಾಲ್ಲೂಕಿನ ಸಾಸಲು ಹೋಬಳಿಯ ಬೈಯ್ಯಪ್ಪನ ಗ್ರಾಮದಲ್ಲಿ ನಕಲಿ ದಾಖಲೆ ಸೃಷ್ಠಿಸಿ ನೂರಾರು ಎಕರೆ ಭೂಮಿ ಕಬಳಿಸಿರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಕ್ರಿಮಿನಲ್ ದೂರು ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಗುರುವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ವಿಜಯಕುಮಾರ್, ಉಪಾಧ್ಯಕ್ಷ ಮುನಿರಾಜಪ್ಪ, ಗೌರವ ಅಧ್ಯಕ್ಷ ಶಿವಣ್ಣ, ಜಿಲ್ಲಾ ಮುಖಂಡ ಸಿ.ಎಚ್.ರಾಮಕೃಷ್ಣ, ಬೈಯ್ಯಪ್ಪನಹಳ್ಳಿ ಗ್ರಾಮದಲ್ಲಿ ರೈತರು ಐದಾರು ದಶಕಗಳಿಂದಲು ಉಳುಮೆ ಮಾಡಿಕೊಂಡು ಬರುತ್ತಿದ್ದ ಕೃಷಿ ಜಮೀನಿಗೆ ಭೂ ಮಾಫಿಯಾದವರು ನಕಲಿ ದಾಖಲೆಗಳನ್ನು ಸೃಷ್ಠಿಸಿ ಕಬಳಿಸಲು ಮುಂದಾಗಿದ್ದಾರೆ. ನಕಲಿ ದಾನಪತ್ರ ಮಾಡಿಕೊಟ್ಟಿರುವ ವ್ಯಕ್ತಿಯ ವಿಳಾಸ, ದಾನಪತ್ರ ಮಾಡಿಕೊಟ್ಟಿರುವ ವ್ಯಕ್ತಿಯ ಸಂಬಂಧಿಗಳು ಎಲ್ಲರೂ ನಕಲಿಯೇ ಆಗಿದ್ದಾರೆ.

ದಾನ ಪತ್ರ ನೋಂದಣಿ ಮಾಡಿಕೊಟ್ಟಿರುವ ವ್ಯಕ್ತಿಯು ದಾನ ಪತ್ರ ಮಾಡಿಕೊಟ್ಟ ಮೂರೇ ದಿನದಲ್ಲಿ ಮೃತಪಟ್ಟಿದ್ದಾರೆ ಎನ್ನುವ ಸುಳ್ಳನ್ನು ಸಹ ಸೃಷ್ಠಿಸಲಾಗಿದೆ ಎಂದು ದೂರಿದರು.  

ರೈತರ ಮನವಿ ಸ್ವೀಕರಿಸಿದ ತಹಶೀಲ್ದಾರ್ ವಿಭಾವಿದ್ಯಾರಾಥೋಡ್ ಶನಿವಾರ ಈ ವಿವಾದ ಕುರಿತಂತೆ ರೈತರ ಸಭೆ ನಡೆಸಲಾಗುವುದು. ಮನವಿ ಪತ್ರದೊಂದಿಗೆ ನೀಡಲಾಗಿರುವ ಎಲ್ಲಾ ದಾಖಲೆಗಳನ್ನು ಪರಿಶೀಲನೆ ನಡೆಸಿ ನಕಲಿ ಮಾಡಿರುವುದು ಸಾಭೀತಾದರೆ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಲಾಗುವುದು ಎಂದರು.

ಪತ್ರಿಭಟನೆಯಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ, ಬೆಳವಂಗಲ ಪ್ರಭಾ ಸೇರಿದಂತೆ ವಂಚನೆಗೆ ಒಳಗಾಗಿರುವ ರೈತರು ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು (JDS) ಏನೇ ಹೇಳಿದರೂ ಮಾತಾಡಬೇಡಿ ಎಂದು ನಮ್ಮವರಿಗೆ ಹೇಳಿದ್ದೇನೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H.D. Kumaraswamy) ಮಾತನಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ತಿಳಿಸಿದರು.

[ccc_my_favorite_select_button post_id="119469"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಗೀತಂ ವಿಶ್ವವಿದ್ಯಾಲಯದಲ್ಲಿ (Geetham University) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ (Suicide) ಪ್ರಕರಣಗಳಿಗೆ ಕೊನೆ ಇಲ್ಲವೇ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದ್ದು, ವಿದ್ಯಾರ್ಥಿಗಳ ಆಕಸ್ಮಿಕ ಸಾವು, ಆತ್ಮಹತ್ಯೆ ಕುರಿತಂತೆ ಪದೇ ಪದೇ ದೂರು ದಾಖಲಾಗುತ್ತಿದೆ.

[ccc_my_favorite_select_button post_id="119472"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!