ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ: ಬಿಜೆಪಿ ಸಭೆ

ಬೆಂಗಳೂರು, (ಜುಲೈ 10): ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಿದ್ದು, ಸದನದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು. 

ಬಿಜೆಪಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಭಾಗಿಯಾದ ಮುಡಾ ಹಗರಣದ ಬಗ್ಗೆ ಮಾತನಾಡಲು ಸದನದಲ್ಲಿ ಬಿಜೆಪಿಯಿಂದ ನಿಲುವಳಿ ಸೂಚನೆ ಮಂಡಿಸಲಾಗುವುದು. ಜುಲೈ 15 ರಿಂದ ನಡೆಯಲಿರುವ ಸದನವನ್ನು ಇನ್ನೂ ಒಂದು ವಾರ ವಿಸ್ತರಣೆ ಮಾಡಬೇಕೆಂದು ಆಗ್ರಹಿಸಲಾಗುವುದು ಎಂದರು.

ಝೀಕಾ ವೈರಸ್‌, ಡೆಂಘೀ ರೋಗಗಳು ಹೆಚ್ಚಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಬೇಕೆಂದು ಆಗ್ರಹಿಸಿದ್ದರೂ ಅದರ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಂಡಿಲ್ಲ. ದರಗಳ ಏರಿಕೆಯಿಂದಾಗಿ ರೈತರ ಆತ್ಮಹತ್ಯೆ ಹೆಚ್ಚಿದೆ. ಹಿಂದೂಗಳ ಮೇಲೆ ಹಲ್ಲೆಗಳು ನಡೆಯುತ್ತಿದೆ. ಇಲಾಖೆಗಳ ಅನುದಾನ ಕಡಿತ, 700 ಕೋಟಿ ರೂ. ಹಾಲು ಪ್ರೋತ್ಸಾಹಧನ ಬಾಕಿ ಮೊದಲಾದ ಸಮಸ್ಯೆಗಳು ಕಂಡುಬಂದಿದೆ. ಒಂದೇ ವರ್ಷದಲ್ಲಿ ಕಾಂಗ್ರೆಸ್‌ ಶಿಶುಪಾಲನಂತೆ ನೂರು ತಪ್ಪುಗಳನ್ನು ಮಾಡಿದೆ ಎಂದು ದೂರಿದರು. 

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಯಾರೂ ಭಾಗಿಯಾಗಿಲ್ಲ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ. ಆದರೀಗ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಎಸ್‌ಐಟಿ ಮೂಲಕ ಎಲ್ಲರಿಗೂ ಕ್ಲೀನ್‌ ಚಿಟ್‌ ನೀಡುವ ಪ್ರಯತ್ನ ನಡೆದಿದೆ. ಇದರಲ್ಲಿ ಇನ್ನೂ ಮೂವರು ಸಚಿವರು ಶಾಮೀಲಾಗಿದ್ದಾರೆ. ನಿಗಮದ ಅಧ್ಯಕ್ಷರೇ ಶಾಂಗ್ರೀಲಾ ಹೋಟೆಲ್‌ನಲ್ಲಿ ಸಭೆ ಸೇರಿದ್ದರ ಬಗ್ಗೆ ಹೇಳಿದ್ದಾರೆ. ಈ ಕುರಿತು ಬಿಡುಗಡೆಯಾದ ಆಡಿಯೋದಲ್ಲಿ ಎಲ್ಲವೂ ಹೊರಬಂದಿದೆ ಎಂದರು. 

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಲೂಟಿಯಾದ 187 ಕೋಟಿ ರೂ. ಹಣ ದಲಿತ ಕಾಲೋನಿಗೆ ರಸ್ತೆ ನಿರ್ಮಿಸಲು, ಮನೆ ನಿರ್ಮಿಸಲು ಮೀಸಲಾಗಿತ್ತು. ಜೊತೆಗೆ, ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ಬಳಸಿದ್ದು, ಇದು ದೊಡ್ಡ ಲೂಟಿಯ ಪ್ರಯತ್ನ. ಇದರ ವಿರುದ್ಧವೂ ಹೋರಾಟ ನಡೆಸಲಾಗುವುದು ಎಂದರು. 

ಕಾಂಗ್ರೆಸ್‌ಗೆ ಹೆಸರು ಬದಲಿಸುವ ಹಕ್ಕಿಲ್ಲ: ರಾಮನಗರ ಜಿಲ್ಲೆಗೆ ಸ್ಥಳ ಮಹಿಮೆ ಇದೆ. ಈ ಹೆಸರನ್ನು ಕಾಂಗ್ರೆಸ್‌ ನಾಯಕರು ಇಟ್ಟಿಲ್ಲ ಅಂದ ಮೇಲೆ ಅದನ್ನು ತೆಗೆಯಲು ಅವರಿಗೆ ಯಾವುದೇ ಹಕ್ಕು ಇಲ್ಲ. ಕರ್ನಾಟಕದಲ್ಲಿ ರಾಮ-ಕೃಷ್ಣ ಎಂದಿರುವ ಊರುಗಳ ಹೆಸರುಗಳನ್ನು ಬದಲಾಯಿಸುತ್ತಾರಾ? ಶೋಲೆ ಸಿನಿಮಾ ಚಿತ್ರೀಕರಣವಾದಾಗಲೂ ಅಲ್ಲಿ ರಾಮಗಢ ಎಂಬ ಹೆಸರನ್ನೇ ಇಟ್ಟಿದ್ದರು.

ಹೆಸರು ಬದಲಾಯಿಸುವ ಬದಲು ಬೆಂಗಳೂರು ನಗರದ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಲಿ. ರಾಮನ ಮೇಲೆ ದ್ವೇಷ ಇದ್ದರೆ ಬೇರೆ ದಾರಿ ನೋಡಿಕೊಳ್ಳಲಿ. ಆಯಾಯ ಜಿಲ್ಲೆಗೆ ಅದರದ್ದೇ ಆದ ಘನತೆ ಇದೆ. ಹುಚ್ಚರಂತೆ, ತುಘಲಕ್‌ರಂತೆ ಎಲ್ಲವನ್ನೂ ಬೆಂಗಳೂರಿಗೆ ಸೇರಿಸಬಾರದು ಎಂದು ಎಚ್ಚರಿಕೆ ನೀಡಿದರು. 

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದ್ದೇನೆ. ಜೆಡಿಎಸ್‌-ಬಿಜೆಪಿಯಲ್ಲಿ ಸಮನ್ವಯದ ಕೊರತೆ ಇಲ್ಲ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆ.ಐ.ಎ.ಡಿ.ಬಿ.ಯ ರೂ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗಾಗಿ ಸಿಎಂ ಸಿದ್ದರಾಮಯ್ಯ (Cmsiddaramaiah) ಹಸ್ತಾಂತರಿಸಿದರು.

[ccc_my_favorite_select_button post_id="117055"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!