Kannadiga: ಕನ್ನಡಿಗರಿಗೆ ಮೀಸಲಾತಿ ಬೆನ್ನಲ್ಲೆ ಕಂಪನಿಗಳಿಗೆ ಆಹ್ವಾನ ನೀಡಿದ ಆಂಧ್ರಪ್ರದೇಶ ಸರ್ಕಾರ..!; ದಿಢೀರ್ ಮಸೂದೆ ತಡೆಹಿಡಿದ ಸಿದ್ದರಾಮಯ್ಯ ಸರ್ಕಾರ.!

ಬೆಂಗಳೂರು, (ಜುಲೈ.17): ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ಕರ್ನಾಟಕ ಸರ್ಕಾರ ತಾತ್ಕಾಲಿಕವಾಗಿ ತಡೆಹಿಡಿದಿದೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದು, ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.

ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ. ಅಲ್ಲದ ಕೈಗಾರಿಕಾ ಸಚಿವ ಎಂಬಿ ಪಾಟೀಲ ಟ್ವಿಟ್ ಮಾಡಿದ್ದು, ಮುಖ್ಯಮಂತ್ರಿಗಳು ಸೂಕ್ತ ಗಮನ ಹರಿಸಿದ್ದಾರೆ. ಮುಂದಿನ ಸಮಾಲೋಚನೆಗಳು ಮತ್ತು ಸರಿಯಾದ ಚರ್ಚೆಯವರೆಗೆ ಬಿಲ್ ಅನ್ನು ತಡೆಹಿಡಿಯಲಾಗುತ್ತದೆ. 

ಉದ್ಯಮದ ಮುಖಂಡರು ಭಯಪಡುವ ಅಗತ್ಯವಿಲ್ಲ ಮತ್ತು ಭರವಸೆ ನೀಡಬೇಕಾಗಿಲ್ಲ. ಹೆಚ್ಚು ಸೌಹಾರ್ದಯುತವಾಗಿ ಕನ್ನಡಿಗರಿಗೆ ಮತ್ತಷ್ಟು ಉದ್ಯೋಗಗಳನ್ನು ಸೃಷ್ಟಿಸಲು ಸರ್ಕಾರ ಬದ್ಧವಾಗಿದೆ ಎಂದು ಉದ್ಯಮಿಗಳಿಗೆ ಭರವಸೆ ನೀಡಿದ್ದಾರೆ.

ಉದ್ಯಮಿಗಳ ಮೇಲೆ ಆಂದ್ರದ ಕಣ್ಣು: ಕರ್ನಾಟಕ ಸರ್ಕಾರದ ಈ ಮಸೂದೆಗೆ ಖಾಸಗಿ ಕಂಪನಿಗಳು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ, ನೆರೆ ರಾಜ್ಯ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರ ಪುತ್ರ ಹಾಗೂ ಸಚಿವ ನಾರಾ ಲೋಕೇಶ್ ಉದ್ಯಮಿಗಳನ್ನು ಸೆಳೆಯಲು ಮುಂದಾಗಿದ್ದಾರೆ.

ನಿಮ್ಮ ಐಟಿ ಕಂಪನಿಗಳ ಉದ್ಯಮ ವಿಸ್ತರಣೆ ನಮ್ಮ ರಾಜ್ಯದಲ್ಲಿ ಅವಕಾಶ ನೀಡುತ್ತೇವೆ. ಯಾವುದೇ ನಿರ್ಬಂಧಗಳನ್ನು ಹೇರಲ್ಲ.. ನಿಮಗೆ ಅಗತ್ಯವಿರುವ ಕೌಶಲ್ಯ,ಸೌಲಭ್ಯಗಳನ್ನೂ ಪೂರೈಸುತ್ತೇವೆ. ನಿಮಗೆ ಮುಕ್ತ ಉದ್ಯಮಕ್ಕೆ ಬೆಂಬಲ ನೀಡುತ್ತೇವೆ ಎಂದು ಸ್ವಾಗತಿಸಿದ್ದಾರೆ.

ನಮ್ಮ ರಾಜ್ಯದ ಉದ್ಯಮಿಗಳನ್ನು ತಮ್ಮ ರಾಜ್ಯಕ್ಕೆ ಸೆಳೆಯುವ ಪ್ರಯತ್ನ ಮಾಡುವ ಯತ್ನದಿಂದ ಹೆಚ್ಚೆತ್ತು ರಾಜ್ಯ ಸರ್ಕಾರ ಈ ಕ್ರಮಕೈಗೊಂಡಿದೆ ಎನ್ನಲಾಗುತ್ತಿದೆ‌.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….