ಕನ್ನಡಿಗರಿಗೆ ಉದ್ಯೋಗ ನೀಡಲು ಆಕ್ಷೇಪ..!: phonepe ಅನ್ಇನ್ಸ್ಟಾಲ್ ಮಾಡಿ ಕನ್ನಡಿಗರ ಶಕ್ತಿ ತೋರಿಸಲು ಕರೆ

ಬೆಂಗಳೂರು, (ಜುಲೈ.19); ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕುರಿತಂತೆ ನಾಲಿಗೆ ಹರಿಬಿಟ್ಟಿರುವ ಫೋನ್‌ಪೇ ಸಿಇಒ ಮತ್ತು ಸಹ-ಸಂಸ್ಥಾಪಕ ಸಮೀರ್ ನಿಗಮ್ ವಿರುದ್ಧ ಕನ್ನಡಿಗರು ರೊಚ್ಚಿಗೆದ್ದಿದ್ದಾರೆ.

ಈ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅನ್ಇನ್ಸ್ಟಾಲ್ ಫೋನ್ ಪೇ ಟ್ರೆಂಡ್ ಆಗಿದ್ದು ಕನ್ನಡಿಗರ ಶಕ್ತಿ ಪ್ರದರ್ಶನಕ್ಕೆ ಕರೆ ನೀಡಲಾಗಿದೆ.

ಖಾಸಗಿ ಕಂಪನಿಗಳಲ್ಲಿನ ಎಲ್ಲಾ ನಿರ್ವಹಣಾ ಹುದ್ದೆಗಳಲ್ಲಿ 50% ಮತ್ತು ಎಲ್ಲಾ ನಿರ್ವಹಣೇತರ ಹುದ್ದೆಗಳಲ್ಲಿ 70% ಸ್ಥಳೀಯ ನಿವಾಸಿಗಳಿಗೆ ಮೀಸಲಿಡಬೇಕು ಎಂಬ  ಮಸೂದೆಯನ್ನು ಈ ರೀತಿಯ ಖಾಸಗಿ ಕಂಪನಿಗಳ ಬೆದರಿಕೆಗೆ ಮಣಿದು ಕರ್ನಾಟಕ ಸರ್ಕಾರ ತಾತ್ಕಾಲಿಕವಾಗಿ ತಡೆಹಿಡಿದಿದೆ.

ಆದರೆ ರಾಜ್ಯ ಸರ್ಕಾರ ಮಸೂದೆಯ ಅನುಷ್ಠಾನವನ್ನು ತಡೆಹಿಡಿಯುವ ನಿರ್ಧರಿಸುವುದಕ್ಕೂ ಮುನ್ನವೇ ಫೋನ್‌ಪೇ ನಿಗಮ್ ಅವರು ಈ ಮಸೂದೆಯನ್ನು ಟೀಕಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಆತ, “ನನಗೆ 46 ವರ್ಷ. 15 ಕ್ಕೂ ಹೆಚ್ಚು ವರ್ಷಗಳ ಕಾಲ ನಾನು ರಾಜ್ಯದಲ್ಲಿ ಎಂದಿಗೂ ವಾಸಿಸಿಲ್ಲ. ನನ್ನ ತಂದೆ ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ದೇಶದಾದ್ಯಂತ ಕೆಲಸ ಮಾಡಿದ್ದಾರೆ. ಈಗ ಅವರ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ? ನಾನು ಕಂಪನಿಗಳನ್ನು ನಿರ್ಮಿಸುತ್ತೇನೆ. ಭಾರತದಾದ್ಯಂತ 25,000 ಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಿದ್ದೇನೆ! ನನ್ನ ಮಕ್ಕಳು ತಮ್ಮ ತವರು ನಗರದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ? ಈ ವಿಚಾರ ನಾಚಿಕೆ ಎನಿಸಿದೆ” ಎಂದಿದ್ದಾರೆ.

ನಿಗಮ್ ಅವರ ಪೋಸ್ಟ್ ವೈರಲ್ ಆಗಿದ್ದು, ಇದಕ್ಕೆ ನೆಟ್ಟಿಗರು ಹಲವಾರು ಕಾಮೆಂಟ್‌ಗಳನ್ನು ಮಾಡಿದ್ದಾರೆ. ಕರ್ನಾಟಕದಲ್ಲಿ ನೀವು ಉದ್ಯೋಗಕ್ಕೆ ಅರ್ಹರಲ್ಲ ಎಂದು ಯಾರೂ ಹೇಳಿಲ್ಲ. ನೀವು ಮಾಡಬೇಕಾಗಿರುವುದು ಭಾಷೆಯನ್ನು ಕಲಿಯುವುದು ಮಾತ್ರ ಎಂದು ಒಬ್ಬರು ಬರೆದಿದ್ದಾರೆ. 

ಕರ್ನಾಟಕದಲ್ಲಿ ಕನ್ನಡ ಮಾತನಾಡಬೇಕು ಎಂಬುದು ಇಲ್ಲಿನ ಬೇಡಿಕೆ. ಅದನ್ನು ಪಡೆಯಿರಿ. ನಾನು ಭಾರತದಲ್ಲಿ ಎಲ್ಲಿ ಬೇಕಾದರೂ ಕೆಲಸ ಮಾಡಬಹುದು, ನಾನು ಬಯಸುವ ಯಾವುದೇ ಭಾಷೆಯನ್ನು ಕಲಿಯಬಹುದು. ಭಾರತದ ಸಂವಿಧಾನ ನನಗೆ ಈ ಹಕ್ಕುಗಳನ್ನು ನೀಡಿದೆ. ಇದು ನನ್ನ ಆಯ್ಕೆಯಾಗಿದೆ ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ.

ಇದರೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಅನ್ ಇನ್ಸಾಲ್ ಫೋನ್ ಪೇ ಹಾಗೂ ಬಾಯ್ಕಾಟ್ ಫೋನ್ ಪೇ ಟ್ರೆಂಡ್ ಆಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಶಾಕ್ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಶಾಕ್ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ (D.K.Shivakumar) ಮಂಗಳವಾರ ಪ್ರತಿಕ್ರಿಯೆ ನೀಡಿದರು.

[ccc_my_favorite_select_button post_id="110364"]
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಆದ್ಯತೆ; ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="110133"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!