ಕಮಲ-ದಳ ಮೈತ್ರಿಗೆ ಯಾವುದೇ ಭಂಗವಿಲ್ಲ; ಬಿಎಸ್ ಯಡಿಯೂರಪ್ಪ

ಮೈಸೂರು, (ಮೇ.11); ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ನಡುವೆ ವಿಧಾನ ಪರಿಷತ್ ಚುನಾವಣೆಗೂ ಮೈತ್ರಿ ಮುಂದುವರೆಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಹೇಳಿದರು.

ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಇರುತ್ತದೆ. ವಿಧಾನ ಪರಿಷತ್​​ನ 6 ಸ್ಥಾನಗಳಲ್ಲಿ 2 ಜೆಡಿಎಸ್​ಗೆ ಬಿಟ್ಟುಕೊಟ್ಟು, ನಾವು 4 ಸ್ಥಾನಗಳಲ್ಲಿ ನಾವು ಸ್ಪರ್ಧೆ ಮಾಡುತ್ತೇವೆ. 

ಎಲ್ಲೆಲ್ಲಿ ಬಿಟ್ಟುಕೊಡಬೇಕು ಎಂಬ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಇಂದು ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ತೀರ್ಮಾನ ಮಾಡಲಿದ್ದಾರೆ ಎಂದರು.

ನರೇಂದ್ರ ಮೋದಿ ಅವರು ಮತ್ತೇ 400 ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಮತ್ತೆ ಪ್ರಧಾನಿ ಆಗುತ್ತಾರೆ. ಇದು ಸೂರ್ಯ-ಚಂದ್ರ ಇರುವಷ್ಟೇ ಸತ್ಯ. ಮುಂದೆ ಯಾವ ರೀತಿ ಕೆಲಸ ಮಾಡಬೇಕು ಎಂಬುದರ ಬಗ್ಗೆ ಪ್ರಧಾನಿ ಚಿಂತನೆ ಮಾಡ್ತಾ ಇದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಹೇಳಿಕೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಆಗಿದ್ದರೂ ಕಾಂಗ್ರೆಸ್​ನಲ್ಲಿ ಪ್ರಧಾನಿ ಆಗುವ ಯೋಗ್ಯತೆ ಯಾರಿಗಿದೆ ಎಂದು ಪ್ರಶ್ನೆ ಮಾಡಿದ್ದ ಯಡಿಯೂರಪ್ಪ ವಿಧಾನಸಭೆಯ ಚುನಾವಣೆಯ ರೀತಿಯೇ ಬೇರೆ.. ಆದರೆ ದೇಶದಲ್ಲಿ ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕು ಎಂಬ ಅಭಿಪ್ರಾಯ ಎಲ್ಲರಲೂ ಇದೆ. ಆದ್ದರಿಂದ ರಾಜ್ಯದಲ್ಲಿ ನಾವು ಕನಿಷ್ಠ 24 ರಿಂದ 25 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದರು.

ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದು, ಕೆರೆ-ಕಟ್ಟೆಗಳು ಬತ್ತಿ ಹೋಗಿವೆ. ಬರಗಾಲದಿಂದ ರೈತರು ಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಿ ಅವರಿಗೆ ನೆರವು ಆಗಬೇಕು ಎಂದು ಬಿಎಸ್ ಯಡಿಯೂರಪ್ಪ ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ಮಾಧ್ಯಮದವರು ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದ ಬಿಎಸ್​ವೈ ಶಿವಮೊಗ್ಗದಲ್ಲಿ ರಾಘವೇಂದ್ರ 2.5 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಲ್ಲದೆ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಬೇಕಿದ್ರೆ ಸಿಬಿಐಗೆ ವಹಿಸಬೇಕು. ಬಹುತೇಕ ಜನರ ಅಭಿಪ್ರಾಯ ಇದಾಗಿದ್ದು, ಇದರಿಂದ ಪೆನ್ ಡ್ರೈವ್ ಪ್ರಕರಣವನ್ನ ಸಿಬಿಐಗೆ ವಹಿಸಿದ್ರೆ ಮಾತ್ರ ತನಿಖೆ ಪಾರದರ್ಶಕವಾಗಿ ನಡೆಯುತ್ತದೆ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ; ಹೆಚ್.ಡಿ. ಕುಮಾರಸ್ವಾಮಿ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ

ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="118524"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!