ರೈತರ ಗಮನಕ್ಕೆ: ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಮೇ.30): ರಾಜ್ಯದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ 2023-24ನೇ ಸಾಲಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು 2024 ರ ಜುಲೈ 01 ರಿಂದ 2025 ಮಾರ್ಚ್ 31ರ ವರೆಗೆ ಆಯೋಜಿಸುವ ಸಂಬಂಧ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ 2024 ಜೂನ್ 03 ರಂದು ಸಂಜೆ 5.30 ರ ವರೆಗೆ ಅರ್ಜಿಯನ್ನು ಸ್ವೀಕರಿಸಲಾಗುತ್ತಿದೆ 

ಸಂದರ್ಶನದ ದಿನಾಂಕ: 06 ಜೂನ್ 2024 ಆಗಿರುತ್ತದೆ, ಆದುದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಇಲಾಖೆಯ ವೆಬ್ ಸೈಟ್ https://horticulturedir.karnataka.gov.in ನಲ್ಲಿ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ತೋಟಗಾರಿಕೆ ಉಪನಿರ್ದೇಶಕರ ಕಛೇರಿ (ಜಿಪಂ), ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರ ಕಛೇರಿಗೆ ನಿಗದಿತ ದಿನಾಂಕದೊಳಗಾಗಿ ಸಲ್ಲಿಸಲು ತಿಳಿಸಿದೆ.

ವಿದ್ಯಾರ್ಹತೆ: ಕನ್ನಡ ವಿಷಯಗಳೊಂದಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ವಯೋಮಿತಿ: ಪರಿಶಿಷ್ಟ ಜಾತಿ/ಪಂಗಡ/ಅಂಗವಿಕಲ ರಿಗೆ ಕನಿಷ್ಠ 18 ವರ್ಷ ಮತ್ತು ಮಾಜಿ ಸೈನಿಕರಿಗೆ 33 ವರ್ಷ, ಮಾಜಿ ಸೈನಿಕರಿಗೆ 33 ರಿಂದ ಗರಿಷ್ಠ 65 ವರ್ಷ ಹಾಗೂ ಇತರರಿಗೆ ಕನಿಷ್ಠ 18 ವರ್ಷ ದಿಂದ ಗರಿಷ್ಠ 30 ವರ್ಷ.

ಈ ತರಬೇತಿಯು ರೈತರ ಮಕ್ಕಳಿಗಾಗಿ ಇರುವುದರಿಂದ ಅಭ್ಯರ್ಥಿಯ ತಂದೆ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು.

ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 1750/-ಗಳ ಮಾಸಿಕ ಶಿಷ್ಯವೇತನ (ಮಾಜಿ ಸೈನಿಕರನ್ನು ಹೊರತುಪಡಿಸಿ)ವನ್ನು ನೀಡಲಾಗುವುದು. ಶಿಷ್ಯವೇತನ/Stipend ವನ್ನು ಅಭ್ಯರ್ಥಿಗಳ ಖಾತೆಗೆ ನೇರವಾಗಿ ಜಮೆ ಮಾಡುವುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಈ ಕೆಳಕಂಡ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು. 

1) ಗೋಪಾಲ್ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೋ. 8660733025

2) ಶಿವಕುಮಾರ್, ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೋ. 9844229157 ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಟಗಾರಿಕೆ ಉಪನಿರ್ದೇಶಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!