ನವದೆಹಲಿ, (ಜೂ.05); ಕೇಂದ್ರದಲ್ಲಿ ಮೂರನೇ ಅವಧಿಗೆ ಸರ್ಕಾರ ರಚಿಸಲು ಅಂತಿಮ ಕಸರತ್ತು ನಡೆಸಿರುವ ಎನ್‌ಡಿಎ ನಾಯಕರು ಅಂಗೀಕರಿಸಿದ ಪ್ರಸ್ತಾವನೆಯಲ್ಲಿ ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.
ಈ ಸಭೆಯಲ್ಲಿ ಎಲ್ಲ ನಾಯಕರು ಮೋದಿ ಅವರನ್ನೇ ಪ್ರಧಾನಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವುದಾಗಿ ಎನ್‌ಡಿಎ ಪ್ರಕಟಣೆಯ ಮೂಲಕ ತಿಳಿಸಿದೆ.
ನವದೆಹಲಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಹಿರಿಯ ನಾಯಕರು ಸರ್ಕಾರ ರಚನೆ ಬಗ್ಗೆ ಚರ್ಚಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಸಮ್ಮಿಶ್ರ ಸರ್ಕಾರ ಬಹುಮತ ಗಳಿಸಿದ ಒಂದು ದಿನದ ನಂತರ ಈ ಸಭೆ ನಡೆದಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಗೆ ದಾರಿ ಮಾಡಿಕೊಟ್ಟಿದೆ.
ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕರೂ ಉಪಸ್ಥಿತರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….