ನವದೆಹಲಿ, (ಜೂ.08): ಕಾಂಗ್ರೆಸ್ನ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮತ್ತೊಮ್ಮೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನವದೆಹಲಿಯ ಸಂಸತ್ ಭವನದ ಸೆಂಟ್ರಲ್ ಹಾಲ್ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಸೋನಿಯಾ ಗಾಂಧಿ ಅವರನ್ನು ನೇಮಕ ಮಾಡಲಾಗಿದೆ.
ಈ ಸಭೆಯಲ್ಲಿ ಸೋನಿಯಾ ಗಾಂಧಿ ಅವರ ಹೆಸರನ್ನು ಪಕ್ಷದ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಪ್ರಸ್ತಾಪಿಸಿದ್ದನ್ನು ಗೌರವ್ ಗೋಗಯ್, ತಾರಿಕ್ ಅನ್ವರ್, ಕೆ.ಸುಧಾಕರ್ ಅನುಮೋದನೆಯನ್ನು ನೀಡಿದ್ದಾರೆಂದು ತಿಳಿದುಬಂದಿದೆ.
ಉಳಿದ ಎಲ್ಲಾ ಸದಸ್ಯರೂ ಸೋನಿಯಾ ಗಾಂಧಿ ಅವರ ಹೆಸರು ಸೂಚಿಸಿದಕ್ಕೆ ಒಕ್ಕೊರಲ ಒಪ್ಪಿಗೆಯನ್ನೂ ಸೂಚಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….