ರಾಜ್ಯದಲ್ಲಿ ರೂ.17,836 ಕೋಟಿ ಮೊತ್ತದ ಬಂಡವಾಳ ಹೂಡಿಕೆ.. 27,067 ಹೊಸ ಉದ್ಯೋಗ ಸೃಷ್ಟಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, (ಮಾರ್ಚ್‌.07): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಇಲ್ಲಿ ನಡೆದ  ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 63ನೇ ಸಭೆಯಲ್ಲಿ, ರಾಜ್ಯದಾದ್ಯಂತ 27,067  ಉದ್ಯೋಗಗಳನ್ನು ಸೃಷ್ಟಿಸುವ  ರೂ.17835.9 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ದೊರೆತಿದ್ದು, ಇದರಲ್ಲಿ  ರೂ.8220.05 ಕೋಟಿ ಮೊತ್ತದ 6 ಹೊಸ ಯೋಜನೆಗಳು ಮತ್ತು ರೂ. 9,615.85 ಕೋಟಿ ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳು ಇವೆ.

ʼಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ  ರೂ. 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

‘ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕೋಲಾರ ಜಿಲ್ಲೆಯ ನರಸಾಪುರ  ಕೈಗಾರಿಕಾ ಪ್ರದೇಶದಲ್ಲಿ ರೂ. 2095 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ಫೋನ್‌ ತಯಾರಿಕಾ ಘಟಕ ಆರಂಭಿಸಲಿದೆ. ಇದರಿಂದ 21723 ಜನರಿಗೆ ಉದ್ಯೋಗಗಳು ದೊರೆಯಲಿವೆʼ ಎಂದು ಅವರು ಮಾಹಿತಿ ನೀಡಿದ್ದಾರೆ. 

ಸಭೆಯಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ  ಎಂ. ಬಿ. ಪಾಟೀಲ, ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು.

ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು:  ರಾಜ್ಯದಲ್ಲಿ ಹೊಸದಾಗಿ ಬಂಡವಾಳ ಹೂಡಿಕೆ ಮಾಡಲಿರುವ ಒಟ್ಟು 6 ಕಂಪನಿಗಳಾದ – ಎಸ್‍ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಐ.ಸಿ.ಟಿ ಸರ್ವಿಸ್ ಮ್ಯಾನೇಜ್‌ಮೆಂಟ್‌ ಸೊಲ್ಯೂಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್, ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್  ಲಿಮಿಟೆಡ್ ಮತ್ತು ಏರ್ ಇಂಡಿಯಾ ಲಿಮಿಟೆಡ್‌ನ ಒಟ್ಟು ₹ 8220.05 ಕೋಟಿ ಮೊತ್ತದ ಬಂಡವಾಳ ಹೂಡಿಕೆಗಳಿಗೆ ಸಮಿತಿಯು ಒಪ್ಪಿಗೆ ನೀಡಿದೆ. ಈ ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 27,067ಹೊಸ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.

ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು : ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕಂಪನಿಗಳ  ಸಾಮರ್ಥ್ಯ  ವಿಸ್ತರಣೆ ಉದ್ದೇಶದ  ಹೆಚ್ಚುವರಿ ಹೂಡಿಕೆಯ  8 ಪ್ರಸ್ತಾವನೆಗಳಿಗೂ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಬಂಡವಾಳ ಹೂಡಿಕೆ ಹೆಚ್ಚಳದ ಪ್ರಸ್ತಾವನೆಗಳಲ್ಲಿ – ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್, ಆರ್‌ಬಿಎಸ್‌ಎಸ್‌ಎನ್‌ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್, ಎಂವಿ ಎನರ್ಜಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ  ಎಂವೆ ಫೋಟೊ ವೋಲ್ಟಾಯಿಕ್ ಪವರ್ ಪ್ರೈವೇಟ್ ಲಿಮಿಟೆಡ್),  ಇಂಡಿಯನ್ ಕೇನ್ ಪವರ್ ಲಿಮಿಟೆಡ್ (ಅಳಗವಾಡಿ ಬೀರೇಶ್ವರ ಷುಗರ್ಸ್ ಘಟಕ ), ಗ್ರೀನ್ಕೊ ಕೆಎ01 ಐಆರ್‍ಇಪಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಗ್ರೀನ್ಕೊ ಸೋಲಾರ್ ಎನರ್ಜಿ ಪ್ರೈವೇಟ್ ಲಿಮಿಟೆಡ್), ಅಥಣಿ ಷುಗರ್ಸ್ ಲಿಮಿಟೆಡ್, ಉಕೆಮ್ ಅಗ್ರಿ ಇನ್‌ಫ್ರಾ ಲಿಮಿಟೆಡ್ ಮತ್ತು ಸ್ನೈಡರ್ ಎಲೆಕ್ಟ್ರಿಕ್ ಐಟಿ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸೇರಿವೆ. ಇವುಗಳ ಹೆಚ್ಚುವರಿ ಹೂಡಿಕೆಯ ಮೊತ್ತವು  ರೂ. 9,615.85 ಕೋಟಿಗಳಷ್ಟಿದೆ.

ಅಭಿವೃದ್ಧಿ ಆಯುಕ್ತೆ  ಶ್ರೀಮತಿ ಡಾ.ಶಾಲಿನಿ ರಜನೀಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ  ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಹೊಸ ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳ ವಿವರ

1. ಎಸ್‍ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ- ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಡೇಟಾ ಸೆಂಟರ್‌ 1352.3 250

2. ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕೋಲಾರ ಜಿಲ್ಲೆ- ನರಸಾಪುರ  ಕೈಗಾರಿಕಾ ಪ್ರದೇಶದಲ್ಲಿ ಸ್ಮಾರ್ಟ್‌ಫೋನ್‌ ತಯಾರಿಕಾ ಘಟಕ 2095 21723

3. ಇಂಡಿಯನ್ ಕೇನ್ ಪವರ್ ಲಿಮಿಟೆಡ್ ವಿಜಯಪುರ ಜಿಲ್ಲೆ- ಕಂಬಾಗಿ ಹಾಗೂ ಶೇಗುಣಶಿ ಗ್ರಾಮಗಳ ವ್ಯಾಪ್ತಿಯಲ್ಲಿ ಸಕ್ಕರೆ ಕಾರ್ಖಾನೆ 1078 309

4. ಐ.ಸಿ.ಟಿ ಸರ್ವಿಸ್ ಮ್ಯಾನೇಜ್‌ಮೆಂಟ್‌ ಸೊಲ್ಯೂಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್’ ಬೆಂಗಳೂರು ಗ್ರಾಮಾಂತರ ಜಿಲ್ಲೆ- ರಕ್ಷಣಾ ಹಾಗೂ ವೈಮಾಂತರಿಕ್ಷ ಪಾರ್ಕ್‌. ಲ್ಯಾಪ್‌ಟಾಪ್‌ ಹಾಗೂ ಎಲೆಕ್ಟ್ರಾನಿಕ್‌ ಉಪಕರಣಗಳ ತಯಾರಿಕಾ ಘಟಕ 1450 2500

5.ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್  ಲಿಮಿಟೆಡ್ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಯರಗಲ್‌. ಸಕ್ಕರೆ ಕಾರ್ಖಾನೆಯ ಸಾಮರ್ಥ್ಯ ವೃದ್ಧಿ 494.75 1085

6. ಏರ್ ಇಂಡಿಯಾ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ- ವಿಮಾನಗಳ ನಿರ್ವಹಣೆ ಹಾಗೂ ದುರಸ್ತಿ ಘಟಕ 1750 1200

ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು

1. ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್ ಕಲಬುರಗಿ ಜಿಲ್ಲೆಯಲ್ಲಿ ಗಣಿಗಾರಿಕೆ 490.38

2. ಆರ್‌ಬಿಎಸ್‌ಎಸ್‌ಎನ್‌ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್. ಬಳ್ಳಾರಿ ಜಿಲ್ಲೆಯಲ್ಲಿ 130 ಮೆಗಾವಾಟ್‌ ವಿದ್ಯುತ್‌ ಘಟಕ 1620.80

3.ಎಂವಿ ಎನರ್ಜಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸೌರಫಲಕಗಳ ತಯಾರಿಕಾ ಘಟಕ 676.28

4. ಇಂಡಿಯನ್ ಕೇನ್ ಪವರ್ ಲಿಮಿಟೆಡ್ ಬೆಳಗಾವಿ ಜಿಲ್ಲೆ. ಅಳಗವಾಡಿ ಬೀರೇಶ್ವರ ಷುಗರ್ಸ್ ಸಕ್ಕರೆ ಕಾರ್ಖಾನೆಯ ಸಾಮರ್ಥ್ಯ ವೃದ್ಧಿ 492.29

5. ಗ್ರೀನ್ಕೊ ಕೆಎ01 ಐಆರ್‍ಇಪಿ ಪ್ರೈವೇಟ್ ಲಿಮಿಟೆಡ್ ಬೆಳಗಾವಿ ಜಿಲ್ಲೆ – ಜಲ ಸಂಗ್ರಹಾಗಾರದ (ಪಂಪ್ಡ್‌ ಸ್ಟೋರೇಜ್‌) ಸಾಮರ್ಥ್ಯ ವೃದ್ಧಿ 5948.06

6. ಅಥಣಿ ಷುಗರ್ಸ್ ಲಿಮಿಟೆಡ್ ಬೆಳಗಾವಿ ಜಿಲ್ಲೆ- ಡಿಸ್ಟಿಲರಿ ಘಟಕದ  ವಿಸ್ತರಣೆ 205.89

7. ಉಕೆಮ್ ಅಗ್ರಿ ಇನ್ಫ್ರಾ ಲಿಮಿಟೆಡ್’ ಕೊಪ್ಪಳ ಜಿಲ್ಲೆ- ಸಕ್ಕರೆ ಕಾರ್ಖಾನೆಯ ಸಾಮರ್ಥ್ಯ ಹೆಚ್ಚಳ 103.55

8. ಸ್ನೈಡರ್ ಇಲೆಕ್ಟ್ರಿಕ್ ಐಟಿ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ನಗರ ಜಿಲ್ಲೆ. ಎಲೆಕ್ಟ್ರಾನಿಕ್‌ ಪರಿಕರಗಳ ತಯಾರಿಕಾ ಘಟಕ 78.60

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!