ರಾಮನಗರ, (ಫೆ.05); ಬಿಜೆಪಿ ಸಂಸದರೆಲ್ಲಾ ಶೋ ಪೀಸ್ ಗಳು. ಕೇವಲ ದೆಹಲಿಗೆ ಹೋಗೋದು ಟಿಎ-ಡಿಎ ತಕೊಂಡು ಬರೋದು ಅಷ್ಟೇ ಇವರ ಕೆಲಸ. ಬಿಜೆಪಿ ಎಂಪಿಗಳು, ಮಂತ್ರಿಗಳು ರಾಜ್ಯದ ಧ್ವನಿ ಎತ್ತಿಲ್ಲ. ಹಾಗಾಗಿ ನಾವು ದೆಹಲಿಯಲ್ಲಿ ಹೋರಾಟ ಮಾಡುತ್ತಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.
ನಾಗರಕಲ್ಲುದೊಡ್ಡಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಹೋರಾಟ ನೋಡಿಯಾದರೂ ಬಿಜೆಪಿಯ ಗಂಡಸರು ಹೋರಾಟ ಮಾಡುತ್ತಾರಾ ನೋಡೋಣ.. ಇದರ ಅರ್ಥ ಬಿಜೆಪಿಯಲ್ಲಿ ಯಾರು ಗಂಡಸರು ಇಲ್ಲ ಅಂತ. ಈಗಿರುವ ಬಿಜೆಪಿ ಎಂಪಿಗಳು ಯಾರು ಗಂಡಸರಲ್ಲ ಎಂದು ಅರ್ಥ ಎಂದು ಬಿಜೆಪಿ ಸಂಸದರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದರು.
ಹೆಚ್ಚು ಟ್ಯಾಕ್ಸ್ ಕಟ್ಟುವ ಎರಡನೇ ರಾಜ್ಯ ನಮ್ಮದು. ನಮಗೆ ಕೊಡಬೇಕಾದ ಅನಯದಾನವನ್ನ ನಮಗೆ ಕೊಡುತ್ತಿಲ್ಲ. ಬಿಜೆಪಿಯ ಸಂಸದರು ನರೇಂದ್ರ ಮೋದಿ ಮುಂದೆ ಕೂರೋದು ಇಲ್ಲ, ಏಳೋದು ಇಲ್ಲ. ಕೇವಲ ಮೋದಿ ಹೆಸರಲ್ಲಿ ಗೆಲ್ಲುತ್ತಾರೆ. ಆದರೆ ವೈಯಕ್ತಿಕ ವರ್ಚಸ್ಸು ಇಲ್ಲ. ಪಕ್ಕದ ತಮಿಳುನಾಡು ತನ್ನ ಹಕ್ಕಿಗಾಗಿ ಮಾಡುವ ಹೋರಾಟವನ್ನ ನೋಡಿ ಕಲಿಯಲಿ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….