ಗ್ಯಾರಂಟಿ ಬಜೆಟ್: ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ

ಬೆಂಗಳೂರು, (ಫೆ‌‌.16); ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ವಿಧಾನಸೌದದಲ್ಲಿ ಮಂಡಿಸುತ್ತಿರುವ ಬಜೆಟ್ ನಲ್ಲಿ ಮಾತನಾಡಿರುವ ಅವರು,  ಪೌರಾಣಿಕ ಹಾಗೂ ಐತಿಹಾಸಿಕವಾಗಿ ಪ್ರಖ್ಯಾತಿ ಹೊಂದಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ಒದಗಿಸಲಾಗುವುದು. 

ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ಹಿನ್ನೀರಿನಲ್ಲಿ ಮತ್ತು ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು. 

ಸಾಹಸ ಪ್ರವಾಸೋದ್ಯವನ್ನು ಉತ್ತೇಜಿಸಲು ರಾಜ್ಯದ ಪ್ರಮುಖ 10 ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೇಬಲ್‌ ಕಾರ್‌/ ರೋಪ್‌ ವೇ ಸೌಲಭ್ಯ ಅಭಿವೃದ್ಧಿಪಡಿಸಲಾಗುವುದು.

ಗೋಕಾಕ ಜಲಪಾತವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುವುದು.ರಾಜ್ಯದ 530 ಸಂರಕ್ಷಿತ ಸ್ಮಾರಕಗಳನ್ನು 3ಡಿ ಲೇಸರ್‌ ಸ್ಕ್ಯಾನಿಂಗ್‌ ಮೂಲಕ ಡಿಜಿಟಲ್ ದಾಖಲೀಕರಣ ಮಾಡಲಾಗಿದೆ. 

ಈ ಕಾರ್ಯವನ್ನು ದೇಶದಲ್ಲಿಯೇ ಪ್ರಥಮವಾಗಿ ಕೈಗೊಂಡಿರುವ ಶ್ರೇಯಸ್ಸು ನಮ್ಮ ರಾಜ್ಯದ್ದಾಗಿದೆ. ಈ ಡಿಜಿಟಲ್‌ ಮಾಹಿತಿಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮತ್ತು ಸಂವಾದಾತ್ಮಕವಾಗಿ ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುವುದು. 

ರಾಷ್ಟ್ರಕೂಟರ ಕಾಲದಲ್ಲಿ ಕರ್ನಾಟಕದ ಮೊಟ್ಟ ಮೊದಲ ವಿಶ್ವವಿದ್ಯಾಲಯವನ್ನು ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲ್ಲೂಕಿನ ನಾಗಾವಿಯಲ್ಲಿ ಸ್ಥಾಪಿಸಲಾಗಿತ್ತು ಎಂಬುದು ಸ್ಥಳೀಯರ ನಂಬಿಕೆ. ಅಲ್ಲಿನ ಪ್ರಾಚ್ಯಾವೇಶಗಳ ಸಂಶೋಧನೆ ಮತ್ತು ಸಂರಕ್ಷಣೆಗಾಗಿ ನೆರವು ನೀಡಲು Archaeological Survey of India (ASI) ಗೆ ಶಿಫಾರಸ್ಸು ಮಾಡಲಾಗುವುದು. 

ಕೆ.ಎಸ್.‌ಟಿ.ಡಿ.ಸಿ ವತಿಯಿಂದ ಬಾಗಲಕೋಟೆಯ ಐಹೊಳೆಯಲ್ಲಿ ಸುಸಜ್ಜಿತವಾದ ಹೋಟೆಲ್‌ ನಿರ್ಮಿಸಲಾಗುವುದು ಹಾಗೂ ರೋರಿಚ್ ಮತ್ತು ದೇವಿಕಾರಾಣಿ ಎಸ್ಟೇಟ್‌ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು. 

ಬೀದರ್‌ ಹಾಗೂ ವಿಜಯಪುರದಲ್ಲಿ ಕರೇಜ್‌ ಎಂದು ಪ್ರಸಿದ್ಧವಾಗಿರುವ ಪುರಾತನ ನೀರು ಸರಬರಾಜು ವ್ಯವಸ್ಥೆಯನ್ನು ನುರಿತ ಸಂಸ್ಥೆಗಳ ತಾಂತ್ರಿಕ ನೆರವಿನೊಂದಿಗೆ 15 ಕೋಟಿ ರೂ. ವೆಚ್ಚದಲ್ಲಿ ಪುನಶ್ಚೇತನಗೊಳಿಸಲಾಗುವುದು. 

ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬಂಡೀಪುರ, ದಾಂಡೇಲಿ ಮತ್ತು ಕಬಿನಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಇಂಟರ್‌ಪ್ರಿಟೇಷನ್‌ ಸೆಂಟರ್‌ಗಳನ್ನು ಜೆ.ಎಲ್.ಆರ್‌ ಸಂಸ್ಥೆಯ ಮೂಲಕ ನಿರ್ಮಾಣ ಮಾಡಲಾಗುವುದು.

ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು. 

ಶ್ರೀ ಕ್ಷೇತ್ರ ರೇಣುಕಾ ಯಲ್ಲಮ್ಮನ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸಂರಕ್ಷಿಸಿ ಅಭಿವೃದ್ಧಿಗೊಳಿಸಲು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯನ್ನು ರಚಿಸಿ ಅಧಿಸೂಚನೆ ಹೊರಡಿಸಲಾಗಿದೆ.

ಧಾರ್ಮಿಕ ದತ್ತಿ; ಹೊರ ರಾಜ್ಯಗಳಲ್ಲಿನ ಪವಿತ್ರ ಪುಣ್ಯಕ್ಷೇತ್ರಗಳಾದ ತಿರುಮಲ, ಶ್ರೀಶೈಲ, ವಾರಣಾಸಿ ಮತ್ತು ಗುಡ್ಡಾಪುರಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತಾಧಿಗಳ ಅನುಕೂಲಕ್ಕಾಗಿ ಸುಸಜ್ಜಿತ ವಸತಿ ಸಂಕೀರ್ಣಗಳನ್ನು ನಿರ್ಮಿಸಲಾಗುತ್ತಿದೆ. ತಿರುಮಲದಲ್ಲಿ 200 ಕೋಟಿ ರೂ.ಗಳ ಕಾಮಗಾರಿ ಅಂತಿಮ ಹಂತದಲ್ಲಿದೆ. ಶ್ರೀಶೈಲದಲ್ಲಿ 85 ಕೋಟಿ ರೂ. ವೆಚ್ಚದಲ್ಲಿ ಮತ್ತು ಗುಡ್ಡಾಪುರದಲ್ಲಿ 11 ಕೋಟಿ ರೂ. ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಸಕ್ತ ಸಾಲಿನಲ್ಲಿ ವಾರಣಾಸಿಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.

ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ರಾಯಚೂರಿನ ಚಿಕ್ಕಮಂಚಾಲಿ ಗ್ರಾಮದ ಬಳಿ ಬ್ರಿಡ್ಜ್-ಕಂ-ಬ್ಯಾರೇಜ್ ಅನ್ನು ಲೋಕೋಪಯೋಗಿ ಇಲಾಖೆ ವತಿಯಿಂದ 158 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರಗಳನ್ನು ರಚಿಸಲಾಗುವುದು.

ಯಾವುದೇ ಆದಾಯವಿಲ್ಲದ 34,165 ʻಸಿʼ ವರ್ಗದ ಐತಿಹಾಸಿಕ ದೇವಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಮಾಜದ ಗಣ್ಯರು ಮತ್ತು ಸಂಬಂಧಪಟ್ಟ ಇಲಾಖೆಗಳ ಪ್ರತಿನಿಧಿಗಳನ್ನೊಳಗೊಂಡ Vision Group ರಚಿಸಲಾಗುವುದು.  

ಇನಾಂ/ಇನಾಂಯೇತರ ಜಮೀನು ಕಳೆದುಕೊಂಡಂತಹ 29,523 ʻಸಿʼ ವರ್ಗದ ದೇವಾಲಯಗಳ ಅರ್ಚಕರುಗಳಿಗೆ ಇನ್ನು ಮುಂದೆ ತಸ್ತಿಕ್ ಮೊತ್ತವನ್ನು ಅರ್ಚಕರುಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!