ಮಾಗಡಿ, (ಫೆ.18); ನಮ್ಮ ತೆರಿಗೆ ಹಣವನ್ನು ನಮಗೆ ಕೊಡಿ ಎಂದು ನಾನು ಕೇಳಿದರೆ ನನ್ನನ್ನು ವಿಲನ್ ರೀತಿ ನೋಡ್ತೀರಾ? ನೀವು ತೆರಿಗೆ ಹಣ ವಾಪಸ್ ಕೊಟ್ಟಿದ್ದೇ ಆದರೆ ಮಹಿಳೆಯರಿಗೆ ಈಗಿರುವ ಮಾಸಿಕ ಎರಡು ಸಾವಿರದ ಜೊತೆಗೆ ಮತ್ತೆರೆಡು ಸಾವಿರ ರುಪಾಯಿ ಕೊಡುತ್ತೇವೆ ಎಂದು ಸಂಸದ ಡಿಕೆ ಸುರೇಶ್ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.
ಮಾಗಡಿ ವಿಧಾನಸಭಾ ಕ್ಷೇತ್ರದ ಕುದೂರು, ತಿಪ್ಪಸಂದ್ರ ಕಾಳಾರಿ ಕಾವಲ್ ವ್ಯಾಪ್ತಿಯ ಗ್ರಾಮದಲ್ಲಿ ಕಾಂಗ್ರೆಸ್ ಏರ್ಪಡಿಸಿದ್ದ ಹೋಬಳಿಗಳ ಗೃಹಲಕ್ಷ್ಮಿ ಯೋಜನಾ ಫಲಾನುಭವಿಗಳ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ರಾಜ್ಯದ ತೆರಿಗೆ ಹಣವನ್ನು ಉತ್ತರಪ್ರದೇಶ, ಬಿಹಾರ, ಒರಿಸ್ಸಾಗೆ ತೆಗೆದುಕೊಂಡು ಹೋದರೆ ನಮ್ಮಗಳ ಗತಿಯೇನು? ನಮ್ಮ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಿಂದ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ.
ಇದರಿಂದಾಗಿ ಮಹಿಳೆಯರು ಗಂಡಂದಿರಿಗೆ ಊಟ ಹಾಕದೆ ತಿರುಗಾಡುತ್ತಾರೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಟೀಕಿಸಿದರು. ಆದರೆ ಇದುವರೆಗೂ ಯಾವೊಬ್ಬ ಗಂಡಸು ನನ್ನ ಹೆಂಡತಿ ನನಗೆ ಊಟ ಹಾಕುತ್ತಿಲ್ಲ ಎಂದು ಪೊಲೀಸ್ ಠಾಣೆಗೆ ದೂರು ಕೊಟ್ಟ ಉದಾಹರಣೆ ಇಲ್ಲ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….