ಲಕ್ಷ್ಮೇಶ್ವರ (ಜ.08); ತಾಲೂಕಿನ ಸೂರಣಗಿ ಗ್ರಾಮಕ್ಕೆ ಆಗಮಿಸಿದ ನಟ ಯಶ್ ಮೃತ ಅಭಿಮಾನಿಗಳಾದ ಮುರಳಿ ನಡುವಿನಮನಿ (20 ವರ್ಷ), ಹನುಮಂತ ಹರಿಜನ (21 ವರ್ಷ), ನವೀನ್ ಗಾಜಿ (19 ವರ್ಷ) ಅವರ ನಿವಾಸಕ್ಕೆ ತೆರಳಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಮೃತ ಅಭಿಮಾನಿಗಳ ಕುಟುಂಬದವರ ದುಃಖ ಕಂಡು ಯಶ್ ಕೂಡ ಭಾವುಕರಾಗಿದ್ದು, ಕಂಡುಬಂತು.
ಯಶ್ ಸೂರಣಗಿ ಗ್ರಾಮಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಗ್ರಾಮದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬ್ಯಾರಿಕೇಡ್ ಅಳವಡಿಸಿ ಪೊಲೀಸರು ಭದ್ರತೆ ಕೈಗೊಂಡಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….