ದೊಡ್ಡಬಳ್ಳಾಪುರ, (ನ.26): ನಗರದ ರೈಲ್ವೆ ನಿಲ್ದಾಣದ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ಬುಧವಾರ ರಾತ್ರಿ ಪೃಥ್ವಿರಾಜ್ ಎಂಬಾತನ ಮೇಲೆ ಮಚ್ಚು, ಲಾಂಗುಗಳಿಂದ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಉಲ್ಲಾಸ್, ಮಧು ಎಂಬುವವರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಎ.ಅಮರೇಶಗೌಡ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬಂಧಿತ ಆರೋಪಿಗಳನ್ನು ವಿಚಾರಣೆ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದೇ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳ ಬಂಧನಕ್ಕು ಪ್ರಯತ್ನಗಳು ನಡೆದಿವೆ ಎಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….