ರೌಡಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ನೆಮ್ಮದಿ ಹಾಳು; ಮಾದರಿ ಜೀವನ ನಡೆಸಿದರೆ, ರೌಡಿಶೀಟರ್ ಬಂದ್‌ – ಅಮರೇಶ್ ಗೌಡ

ದೊಡ್ಡಬಳ್ಳಾಪುರ, (ನ.26); ರೌಡಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರವಾಗಿ, ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ, ಕಾನೂನು ಬಾಹಿರ ಚಟುವಟಿಕೆಗಳನ್ನು ಸಂಪೂರ್ಣ ತ್ಯಜಿಸಬೇಕು ಎಂದು ನಗರ ಠಾಣೆ ಇನ್ಸ್‌ಪೆಕ್ಟರ್ ಅಮರೇಶ್ ಗೌಡ ಹೇಳಿದರು.

ನಗರದ ಪೊಲೀಸ್ ಠಾಣಾ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರೌ‍ಡಿ ಶೀಟರ್‌ಗಳ ಪರೇಡ್‌ನಲ್ಲಿ ಈ ಕುರಿತಂತೆ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ರೌಡಿಸಂ ಜೀವನವನ್ನು ಹಾಳು ಮಾಡುವುದಲ್ಲದೆ, ಜೀವನ ಪರ್ಯಂತ ರೌಡಿಶೀಟರ್ ಮುಕಿ ಪಟ್ಟಕಟ್ಟಿಕೊಂಡು ಬದುಕಬೇಕಾಗುತ್ತದೆ. ಆದರೆ,ನೆಮ್ಮದಿ ಜೀವನಕ್ಕಾಗಿ ಕೂಲಿ ಕೆಲಸ ಮಾಡಿದರೂ ಪರವಾಗಿಲ್ಲ, ಕುಟುಂಬದೊಂದಿಗೆ ಖುಷಿಯಿಂದ ಜೀವನ ಸಾಗಿಸಬಹುದು, ರೌಡಿ ಚಟುವಟಿಕೆ, ಕಾನೂನು ಬಾಹಿರ ಕೆಲಸಗಳು, ಹೀಗೆ ಮುಂದುವರೆದರೆ, ಗಡಿಪಾರು ಮಾಡಲಾಗುವುದು. 

ಹತ್ತು, ಇಪ್ಪತ್ತು ವರ್ಷಗಳಾದರೂ ರೌ‍ಡಿಶೀಟರ್ ಪಟ್ಟ – ಹೋಗುವುದಿಲ್ಲ. ಕಳ್ಳತನ, ಕೊಲೆ, ದೌರ್ಜನ್ಯ ಮಾಡಿದರೆ, ತಪ್ಪಿಸಿಕೊಳ್ಳಲು – ಆಗುವುದಿಲ್ಲ. ಕಾನೂನು ಬಿಗಿಯಾಗಿದೆ. ಕುಟುಂಬಸ್ಥರು ಗೌರವ ನೀಡುವಷ್ಟು, ರೀತಿಯಲ್ಲಿಯಾದರೂ ಜೀವನ ಮಾಡಿ, ಪೊಲೀಸರಿಗೆ ತಿಳಿಯದಂತೆ ಸ್ಥಳ, ಫೋನ್ ನಂಬರ್ ಬದಲಾವಣೆ ಮಾಡಬಾರದು. ಕಾನೂನಿಗೆ ಬೆಲೆಕೊಟ್ಟು ಸಮಾಜದಲ್ಲಿ ಒಳ್ಳೆಯವರಾಗಿ ಬದುಕಿ, ಮಾದರಿ ಜೀವನ ನಡೆಸಿದರೆ, ರೌಡಿಶೀಟರ್ ಬಂದ್‌ ಮಾಡಲಾಗುವುದು ಎಂದರು.

ನಗರ ಪೊಲೀಸ್ ಠಾಣೆ ಅಪರಾಧ ವಿಭಾಗದ ಮುಖ್ಯಪೇದೆ ಕರಾರ್ ಹುಸೇನ್, ಸಿಬ್ಬಂದಿಗಳಾದ ಹುಸೇನ್ ಸಾಬ್ ಕಂಕೂರಿ, ರೂಪೇಶ್ ಯಾದವ್, ಅನಂತ್ ಕುಮಾರ್, ಪ್ರಶಾಂತ್

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….