ಚಿಕ್ಕಬಳ್ಳಾಪುರ, (ಸೆ.18): ಉದ್ಯೋಗ ಕೊಡುವುದಾಗಿ ನಂಬಿಸಿದ ವ್ಯಕ್ತಿಯೊಬ್ಬ ಸ್ನಾತಕೋತ್ತರ ವಿದ್ಯಾರ್ಥಿನಿಯಿಂದ 4.21 ಲಕ್ಷ ರೂಪಾಯಿಗಳನ್ನು ಪಡೆದು ವಂಚಿಸಿರುವ ಪ್ರಕರಣ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ.
ಚಿಂತಾಮಣಿ ತಾಲೂಕಿನ ಎನ್.ಕೊತ್ತೂರು ಗ್ರಾಮದ ನಿವಾಸಿ ಕೆ.ಎನ್.ಸುಮಾ ಶಿಡ್ಲಘಟ್ಟ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಎಂ.ಕಾಂ ವ್ಯಾಸಂಗ ಮಾಡುತ್ತಿದ್ದಾರೆ.
ಜೂ.24ರಂದು ಬಿ.ಎ.ವಿಶ್ವನಾಥ್ ಎಂಬುವವರು ದೂರವಾಣಿ ಕರೆ ಮಾಡಿ, ಶಿಡ್ಲಘಟ್ಟದ ಕಂದಾಯ ಕಚೇರಿಯಲ್ಲಿ ಕೆಲಸಮಾಡುತ್ತಿದ್ದು, ಮೆರಿಟ್ ಆಧಾರದ ಮೇಲೆ ಎಸ್.ಎಸ್.ಟೆಲಿಕಮ್ಯೂನಿಕೇಷನ್ ಪ್ರೈವೇಟ್ ಲಿಮಿಟೆಡ್ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 6,100 ರೂ ಶುಲ್ಕ ನೀಡಬೇಕು ಎಂದು ತಿಳಿಸಿದ್ದಾರೆ.
ಅದನ್ನು ನಂಬಿದ ಕೆ.ಎನ್.ಸುಮಾ 6,100 ರೂ ಪೋನ್ ಪೇ ಮೂಲಕ ಅವರು ತಿಳಿಸಿದ ನಂಬರ್ಗೆ ವರ್ಗಾಯಿಸಿದ್ದಾರೆ. ಬಳಿಕ ಪ್ರತಿದಿನ ಫೋನ್ ಮಾಡಿ ಜು. 20 ರವರೆಗೂ ಒಟ್ಟಾರೆ ರೂ.4,21,135 ರೂ ಗಳನ್ನು ಪಡೆದಿದ್ದಾರೆ. ಮತ್ತೇ 50,000 ರೂ.ಗಳಿಗೆ ಬೇಡಿಕೆ ಇಟ್ಟಿದ್ದಾರೆ. ಆದರೆ ಇದಕ್ಕೆ ಒಪ್ಪದ ಸುಮಾ ಚಿಂತಾಮಣಿ ಗ್ರಾಮಾಂತರ ಠಾಣೆ ಪೋಲಿಸರಿಗೆ ದೂರು ನೀಡಿದ ಹಿನ್ನೆಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….