ಇಂದು ಸ್ಯಾಂಡಲ್ವುಡ್ ದಿಗ್ಗಜರ ಜನ್ಮದಿನವಾಗಿದೆ. ಸಾಹಸ ಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಶ್ರುತಿ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಅಭಿಮಾನಿಗಳು ನೆಚ್ಚಿನ ಸ್ಟಾರ್ಗಳ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.
ಸೆಪ್ಟೆಂಬರ್ 18. ಇದು ಡಾ.ವಿಷ್ಣುವರ್ಧನ ಅವರ ಅಭಿಮಾನಿಗಳ ಪಾಲಿಗೆ ಹರ್ಷದ ದಿನ. ಯಾಕೆಂದರೆ, ಇಂದು (ಸೆ.18) ವಿಷ್ಣುವರ್ಧನ್ ಅವರ ಜನ್ಮದಿನ. ಹೀಗಾಗಿ ಅವರ ಸಂಭ್ರಮಕ್ಕೆ ಪಾರವೇ ಇಲ್ಲ. ಪ್ರತಿ ವರ್ಷದಂತೆ ಈ ವರ್ಷವೂ ಸಹ ಡಾ.ವಿಷ್ಣುವರ್ಧನ್ ಅವರ ಹುಟ್ಟುಹಬ್ಬವನ್ನು ಅವರ ಕುಟುಂಬ ವರ್ಗ, ಅಭಿಮಾನಿವರ್ಗ ಪ್ರೀತಿಯಿಂದ ಅದ್ಧೂರಿಯಾಗಿ ಆಚರಿಸುತ್ತಿದೆ.
ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟಿಗೊಬ್ಬ, ಕಲಾದೈವ, ಮೈಸೂರು ರತ್ನ ಎಂಬ ಬಿರುದುಗಳಿಂದ ಜನಪ್ರಿಯತೆ ಪಡೆದವರು ಡಾ.ವಿಷ್ಣುವರ್ಧನ್. ‘ದಿ ಫೀನಿಕ್ಸ್ ಆಫ್ ಇಂಡಿಯನ್ ಸಿನಿಮಾ’ ಅಂತಲೇ ಖ್ಯಾತಿ ಪಡೆದಿದ್ದ ಡಾ.ವಿಷ್ಣುವರ್ಧನ್ ಪ್ರೀತಿಯ ಅಭಿಮಾನಿಗಳಿಂದ ‘ಹೃದಯವಂತ’ ಅಂತಲೇ ಕರೆಯಿಸಿಕೊಂಡವರು. ಇಂತಿಪ್ಪ ಡಾ.ವಿಷ್ಣುವರ್ಧನ್ ಅವರ ಜನ್ಮದಿನೋತ್ಸವ ಇಂದು.
ಅಭಿಮಾನಿಗಳ ಪ್ರೀತಿಯ ‘ಯಜಮಾನ’ ಇಂದು ನಮ್ಮೊಂದಿಗೆ ಇದ್ದಿದ್ದರೆ ತಮ್ಮ 73ನೇ ಜನ್ಮದಿನವನ್ನು ಇಂದು ಆಚರಿಸಿಕೊಳ್ಳುತ್ತಿದ್ದರು. ಆದರೆ, ದುರಾದೃಷ್ಟವಶಾತ್ ಡಾ.ವಿಷ್ಣುವರ್ಧನ್ ಇಂದು ನಮ್ಮ ಜೊತೆ ಇಲ್ಲ. ದೈಹಿಕವಾಗಿ ಡಾ.ವಿಷ್ಣುವರ್ಧನ್ ನಮ್ಮೊಂದಿಗೆ ಇಲ್ಲದಿದ್ದರೂ, ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ಡಾ.ವಿಷ್ಣುವರ್ಧನ್ ಅಜರಾಮರ.
ಡಾ.ವಿಷ್ಣುವರ್ಧನ್ ಅವರ ಜನ್ಮದಿನವಾದ ಇಂದು ಅಭಿಮಾನಿಗಳು ಅವರ ಸ್ಮರಣೆ ಮಾಡುತ್ತಿದ್ದಾರೆ. ಡಾ.ವಿಷ್ಣುವರ್ಧನ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಿಸುತ್ತಿದ್ದಾರೆ. ಡಾ.ವಿಷ್ಣುವರ್ಧನ್ ಅವರ ಜನ್ಮದಿನವಾದ ಇಂದು ಕುಟುಂಬಸ್ಥರು ‘ಸಿರಿವಂತ’ನಿಗೆ ಪೂಜೆ ಸಲ್ಲಿಸಿ, ನಮನ ಸಲ್ಲಿಸಿದ್ದಾರೆ.
ಶೃತಿ: ಎವರ್ ಗ್ರೀನ್ ನಟಿ ಶೃತಿ ಕನ್ನಡ ಸಿನಿಮಾರಂಗದಲ್ಲಿ ಒಳ್ಳೆ ಹೆಸರು ಪಡೆದಿದ್ದಾರೆ. ಶ್ರುತಿ ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟ ಶ್ರುತಿ ಮತ್ತೆ ತಿರುಗಿ ನೋಡಲೇ ಇಲ್ಲ. ಕನ್ನಡ ಸೇರಿದಂತೆ ತಮಿಳು, ಮಲಯಾಳಂ, ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.
ತಾಯಿ ಇಲ್ಲದ ತವರು, ವೀರಪ್ಪ ನಾಯಕ, ಗೌರಿ ಗಣೇಶ, ಬೊಂಬಾಟ್ ಹೆಂಡ್ತಿ ಸೇರಿದಂತೆ ಇನ್ನು ಹಲವು ಸಿನಿಮಾಗಳಲ್ಲಿ ನಟಿಸಿರುವ ಇವರು ಕನ್ನಡ ಚಿತ್ರರಂಗದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಉಪೇಂದ್ರ: ನಿರ್ದೇಶಕರಾಗಿ ಕನ್ನಡ ಇಂಡಸ್ಟ್ರಿಗೆ ಕಾಲಿಟ್ಟ ನಟ ಉಪೇಂದ್ರ ತನ್ನದೇ ಟ್ರೆಂಡ್ ಕ್ರಿಯೇಟ್ ಮಾಡಿದ್ರು. ನಾನು ಅಂದ್ರೆ ನಾನು, ನನ್ನದು ಡಿಫರೆಂಟ್ ಸ್ಟೈಲ್ ಎನ್ನುತಲೇ ಉಪ್ಪಿ ಯುವ ಜನರ ಹೃದಯ ಗೆದ್ದರು, ಈಗಲೂ ತಮ್ಮದೇ ಸ್ಟೈಲ್ನಲ್ಲಿ ಸಿನಿಮಾ ಮಾಡುತ್ತಿದ್ದಾರೆ. ನಟ ಉಪೇಂದ್ರ ತರ್ಲೆನನ್ಮಗ, ಶ್ ಹಾಗೂ ಶಿವಣ್ಣ ಓಂ ಸಿನಿಮಾವನ್ನು ಉಪ್ಪಿ ನಿರ್ದೇಶಿಸಿದ್ದಾರೆ.
ನಿರ್ದೇಶನದ ಜೊತೆಗೆ ನಟಯಲ್ಲೂ ಉಪೇಂದ್ರ ಸೈ ಎನಿಸಿಕೊಂಡಿದ್ದಾರೆ. ಎ ಸಿನಿಮಾ ಮೂಲಕ ನಾಯಕ ನಟನಾಗಿ ಎಂಟ್ರಿ ಕೊಟ್ಟ ಉಪ್ಪಿ, ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಇನ್ನು ಅನೇಕ ಸಿನಿಮಾಗಳು ಉಪ್ಪಿ ಕೈಯಲ್ಲಿದೆ. ಬಹು ನಿರೀಕ್ಷಿತ ಸಿನಿಮಾ UI ಚಿತ್ರಕ್ಕಾಗಿ ಅಭಿಮಾನಿಗಳು ಕಾಯ್ತಿದ್ದು ಭರ್ಜರಿಯಾಗಿ 55ನೇ ವರ್ಷದ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….