ಕಾವೇರಿ ನೀರು ಹಂಚಿಕೆ: ಕೇಂದ್ರ ಜಲ ಶಕ್ತಿ ಸಚಿವರ ಪ್ರತಿಕ್ರಿಯೆ ಸಕಾರಾತ್ಮಕ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಸೆ.21): ಕಾವೇರಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ಜತೆ ಸಭೆ ನಡೆಸಿದ್ದೇವೆ. ಸದ್ಯಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು  ಮತ್ತು ಜಲ ಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು. 

ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ಜತೆಗಿನ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 

ನಮ್ಮ ಸಂಕಷ್ಟದ ಪರಿಸ್ಥಿತಿಯನ್ನು ಕೇಂದ್ರ ಸಚಿವರಿಗೆ ಸಮರ್ಥವಾಗಿ ತಿಳಿಸಿದ್ದೇವೆ. ಅವರ ಸ್ಪಂದನೆ ಸಕಾರಾತ್ಮಕವಾಗಿತ್ತು. ಸುಪ್ರೀಂಕೋರ್ಟ್ ನಲ್ಲೂ ನಮ್ಮ ಮನವಿ ವಿಚಾರಣೆಗೆ ಬರಲಿದೆ. ಸುಪ್ರೀಂಕೋರ್ಟ್ ನಮ್ಮ ಮನವಿಯನ್ನು ಪುರಸ್ಕರಿಸಿ CWMC ಆದೇಶಕ್ಕೆ ತಡೆಯಾಜ್ಞೆ ನೀಡುವ ಭರವಸೆ ಇದೆ. ಹೀಗಾಗಿ ನಾವು ಸುಪ್ರೀಂಕೋರ್ಟ್ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಬಳಿಕ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ವಿವರಿಸಿದರು. 

ನಾವು ಪ್ರಧಾನಿ ಅವರ ಸಮಯವನ್ನೂ ಕೇಳಿದ್ದೇವೆ. ಸಮಯ ಸಿಕ್ಕರೆ ಭೇಟಿ ಆಗುತ್ತೇವೆ. ನಾಲ್ಕೂ ರಾಜ್ಯದವರನ್ನು ಕರೆಸಿ ಮಾತನಾಡಲು ಮಧ್ಯ ಪ್ರವೇಶಿಸಿ ಎಂದು ಪ್ರಧಾನಿಗೆ ಮನವಿ ಮಾಡುತ್ತೇವೆ. 

ಗೋಷ್ಠಿಯ ಇತರೆ ಹೈಲೈಟ್ಸ್: ನಮಗೆ ಬೆಳೆ ರಕ್ಷಣೆ, ಕುಡಿಯುವ ನೀರು ಮತ್ತು ಕೈಗಾರಿಕೆಗಳಿಗೆ 106 ಟಿಎಂಸಿ ನೀರು ಅಗತ್ಯವಿದೆ . ಆದರೆ ನಮ್ಮ ನಾಲ್ಕೂ ಜಲಾಶಯಗಳಿಂದ ಕೇವಲ 51 ಟಿಎಂಸಿ ನೀರು ಇದೆ ಎನ್ನುವುದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ್ದೇವೆ.

123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಬಿದ್ದು ಜಲಾಶಯಗಳ ಒಳ ಹರಿವು ಇಲ್ಲವಾಗಿದೆ ಎಂದು ಸಚಿವರ ಗಮನ ಸೆಳೆದಿದ್ದೇವೆ.

ನಮ್ಮ ರೈತರು ಮತ್ತು ನಾನಾ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಬಿಡುವುದಕ್ಕೆ ನಮ್ಮ ಬಳಿ ನೀರೇ ಇಲ್ಲ ಎಂದೂ ಹೇಳಿದ್ದೇವೆ.

ಸುಪ್ರೀಂಕೋರ್ಟ್ ಗೂ ನಮ್ಮ ಸಂಕಷ್ಟದ ಪರಿಸ್ಥಿತಿಯನ್ನು ನಮ್ಮ ಲೀಗಲ್ ತಂಡ ಮನವರಿಕೆ ಮಾಡಿಸಲು ಯತ್ನಿಸುತ್ತಿದೆ.

ನಾಲ್ಕೂ ಜಲಾಶಯಗಳ ಒಳ ಹರಿವು 11 ರಿಂದ 8 ಕ್ಯೂಸೆಕ್ಸ್ ಗೆ ಇಳಿದಿದೆ.


ಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್, ಕೃಷಿ ಸಚಿವ ಚಲುವರಾಯಸ್ವಾಮಿ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ, ಪ್ರಕಾಶ್ ಹುಕ್ಕೇರಿ, ಸಂಸದ ಡಿ.ಕೆ.ಸುರೇಶ್ ಮುಂತಾದವರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!