ಮೈಸೂರು, (ಅ.12): ಒಕ್ಕಲಿಗ ಯುವ ಬ್ರಿಗೇಡ್ ಹಾಗೂ NRI ಒಕ್ಕಲಿಗರ ಬ್ರಿಗೇಡ್ ವತಿಯಿಂದ ನವೆಂಬರ್ 19ರಂದು ಅನ್ನದಾತರ ಮಕ್ಕಳಿಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಕಳೆದ ವರ್ಷ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಈ ಮೇಳವನ್ನು, ಈ ವರ್ಷ ಮೈಸೂರಿನ ಹೆಬ್ಬಾಳದ ಬಳಿಯಿರುವ ಬಿಜಿಎಸ್ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್, ಪಿಜಿ, ಎನ್‌ಟಿಟಿ, ಬಿ.ಎಡ್, ಎಂ.ಎಡ್ ಮಾಡಿರುವ ವಿದ್ಯಾರ್ಥಿಗಳು ಇದರ ಸೌಲಭ್ಯ ಪಡೆಯಬಹುದಾಗಿದೆ ಎಂದು ಸಂಘದ ಸಂಸ್ಥಾಪಕ ನಂಜೇಗೌಡ ನಂಜುಂಡ ಅವರು ತಿಳಿಸಿದ್ದಾರೆ.
ಆಸಕ್ತರು: 9686564192, 9886943810, 8660569173 ಸಂಪರ್ಕಿಸಬಹುದಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….