ಬಿಜೆಪಿಗೆ ಸಿಂಹಸ್ವಪ್ನವಾದ ಜಗದೀಶ್ ಶೆಟ್ಟರ್..!: ಕೇಸರಿ ಪಡೆಯ ಮತ್ತೆರಡು ವಿಕೆಟ್ ಪತ‌ನ

ಬೆಂಗಳೂರು, (ಅ.12): ಬಿಜೆಪಿಯ ಮಾಜಿ ಶಾಸಕರಾದ ಮೂಡಿಗೆರೆಯ ಕುಮಾರಸ್ವಾಮಿ ಮತ್ತು ಶಿರಹಟ್ಟಿಯ ರಾಮಪ್ಪ ಲಮಾಣಿ ಅವರು ಬುಧವಾರ ರಾತ್ರಿ ಮಾಜಿ ಸಿಎಂ ಜಗದೀಶ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿಯಲ್ಲಿ ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಕಾಂಗ್ರೆಸ್​​ ಸೋಲಿಸಲು ಪಣ ತೊಟ್ಟಿವೆ. ಅದರೆ ಮೈತ್ರಿ ಕುರಿತಂತೆ ಎರಡೂ ಪಕ್ಷಗಳಲ್ಲಿ ಭಿನ್ನಮತ ಶುರುವಾಗಿದ್ದು, ಅನೇಕ ನಾಯಕರು ಪಕ್ಷ ತೊರೆಯುತ್ತಿದ್ದಾರೆ. 

ಇತ್ತೀಚಿಗಷ್ಟೆ ಹಿರಿಯೂರು ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಸಿಎಂ ಅವರನ್ನು ಭೇಟಿಯಾಗಿದ್ದು ಅಂತೆಯೇ ಶಿರಹಟ್ಟಿಯ ರಾಮಪ್ಪ ಲಮಾಣಿ ಕೂಡ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಇನ್ನೊಂದೆಡೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದ ಮೂಡಿಗೆರೆ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ಸಹ ಕಾಂಗ್ರೆಸ್​ ಸೇರಲಿದ್ದಾರೆ. ಆ ಮೂಲಕ ಬಿಜೆಪಿಯ ಎರಡು ಹಾಗೂ ಜೆಡಿಎಸ್​ನ ಒಂದು ವಿಕೆಟ್ ಪತನವಾದಂತಾಗಿದೆ.

ಬಿಜೆಪಿಗೆ ಸಿಂಹಸ್ವಪ್ನವಾದ ಜಗದೀಶ್ ಶೆಟ್ಟರ್: ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್​ ನೀಡದೇ ಅಗೌರವ ರೀತಿಯಿಂದ ನಡೆಸಿಕೊಂಡಿದ್ದಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗಿರುವ. ಮಾಜಿ ಮಖ್ಯಮಂತ್ರಿ ಜಗದೀಶ್ ಶೆಟ್ಟರ್​, ಆಪರೇಷನ್ ಹಸ್ತದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. 

ಹಿರಿಯ ನಾಯಕ ಎನ್ನದೇ ಅಗೌರವದಿಂದ ಕಂಡಿದ್ದಾರೆ ಎಂದು ಬಿಜೆಪಿ ಹೈಕಮಾಂಡ್​ ವಿರುದ್ಧ ತೊಡೆ ತಟ್ಟಿರುವ ಶೆಟ್ಟರ್​, ಒಬ್ಬೊಬ್ಬರನ್ನೇ ಕಾಂಗ್ರೆಸ್​ಗೆ ಕರೆದುಕೊಂಡು ಬರುತ್ತಿದ್ದಾರೆ. ಈಗಾಗಲೇ ರಾಮಪ್ಪ ಲಮಾಣಿ, ಎಂಪಿ ಕುಮಾರಸ್ವಾಮಿ ಅವರನ್ನು ತಮ್ಮ ಮಧ್ಯಸ್ಥಿಕೆ ಮೇಲೆ ಕಾಂಗ್ರೆಸ್​ಗೆ ಕರೆದುಕೊಂಡು ಬಂದಿದ್ದಾರೆ. ಈ ಇಬ್ಬರು ನಾಯಕರನ್ನು ಸಿದ್ದರಾಮಯ್ಯ ಬಳಿ ಕಡೆದುಕೊಂಡು ಹೋಗಿ ಮಾತುಕತೆಕೂಡ ನಡೆಸಿದ್ದಾರೆ. 

ಮತ್ತೊಂದೆಡೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಂಬಂಧಿ ಚಿಕ್ಕನಗೌಡರ್​ ಅವರ ಜೊತೆ ಸಹ ಶೆಟ್ಟರ್ ಮಾತುಕತೆ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಮತ್ತಷ್ಟು ಬಿಜೆಪಿ ನಾಯಕರಿಗೆ ಅವರು ಗಾಳ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಾರೆ ಪಕ್ಷದ ವರಿಷ್ಠರಿಂದ ಅವಮಾನಿತರಾದ ಶೆಟ್ಟರ್ ಸೈಲೆಂಟ್ ಕಿಲ್ಲರ್ ರೀತಿ ಬಿಜೆಪಿಗೆ ಸಿಂಹಸ್ವಪ್ನವಾಗಿ ಕಾಡುತ್ತಿದ್ದಾರೆ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

error: Content is protected !!