ಪ್ರತಿ ಶಾಸಕರೂ ಜನರ ಧ್ವನಿಯಾದಾಗ ಮಾತ್ರ ಪರಿಣಾಮಕಾರಿಯಾಗಿ ಕೆಲಸ ಮಾಡಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಜುಲೈ.18): 2021- 22 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕ ಎಸ್ ಆರ್.ಪಾಟೀಲರಿಗೆ ಹಾಗೂ 2022 – 23 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯ  ಶ್ರೀಕಂಠೇಗೌಡರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು  ಅಭಿನಂದಿಸಿ ಮಾತನಾಡಿದರು.

ಶಾಸಕರು ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು: ಭಾರತ ಸಂವಿಧಾನ ಕೇವಲ ವಕೀಲರ ದಾಖಲೆಯಲ್ಲ. ಅದು ಜೀವನ್ಮುಖಿಯದುದ್ದು. ಅದರ ಚೈತನ್ಯ ನಿರಂತರವಾದುದು. ನಮ್ಮ ಸಮಾಜ ಹೇಗಿರಬೇಕೆಂದು, ಹೇಗೆ ಆಳಿಸಿಕೊಳ್ಳಬೇಕೆಂದು ಅಂಬೇಡ್ಕರ್ ಅವರು ಸಂವಿಧಾನ ರಚಿಸಿದರು. ಸರ್ಕಾರ, ಮೇಲ್ಮನೆ, ಕೆಳಮನೆ ಶಾಸಕರು ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಸಾಮಾಜಿಕ ಬದ್ಧತೆ ನಮ್ಮ ಮುಖ್ಯ ಗುರಿಯಾಗಿರಬೇಕು. ಆಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಎಂದರು. 

ಜನಪರ ಕಾಳಜಿ ಅಗತ್ಯ: ಸಂಸತ್ತು, ವಿಧಾನಸಭೆಯನ್ನು  ದೇವರು ಎಂದು ಕರೆಯುತ್ತೇವೆ. ಎಲ್ಲರಿಗೂ ಒಳಿತು ಮಾಡು ಎಂದು ಕೇಳಿಕೊಂಡರೆ ಒಳಿತಾಗುತ್ತದೆ. ನಾವು ಇಲ್ಲಿಗೆ ಬರುವುದು ದೇಗುಲಕ್ಕೆ ಬಂದಂತೆ. ನಾವು ಜನಸೇವಕರು. ಇಬ್ಬರೂ ಜನಪರ ಕಾಳಜಿ ಇಟ್ಟು ಕೊಂಡು ಜನರ ಧ್ವನಿಯಾಗಿ ಕೆಲಸ ಮಾಡಿದ್ದಾರೆ. ಪ್ರತಿಯೊಬ್ಬರೂ ಜನರ ಧ್ವನಿಯಾದಾಗ ಮಾತ್ರ ಸರ್ಕಾರ ಪರಿಣಾಮಕಾರಿಯಾಗಿ ಕೆಲಸ ಮಾಡಬಹುದು. ಶಾಸಕರಾದವರಿಗೆ ಅಧ್ಯಯನ ಬಹಳ ಮುಖ್ಯ ಎಂದರು. 

ಜನರ ಧ್ವನಿಯಾಗಿದ್ದಾರೆ: ಸಮಾಜಕ್ಕೆ ಸಂಬಂಧಿಸಿದಂತೆ ಮಾತನಾಡಬೇಕು. ಜನರ ಸಮಸ್ಯೆಗಳು, ಜನರ ಧ್ವನಿಯಾಗಿ ಮಾತನಾಡುವುದು ಮುಖ್ಯ. ಸದನದ ಇತರರಿಗೆ ಅವರ ಭಾಷಣ, ವಿಚಾರಗಳು ಮಾದರಿಯಾಗಿವೆ ಎಂದರು.

ಮೇಲ್ಪಂಕ್ತಿಯನ್ನು ಹಾಕಿದ್ದಾರೆ: ಎಲ್ಲಾ ಶಾಸಕರು ಉತ್ತಮರೇ ಎಂದು ಭಾವಿಸಿದ್ದೇನೆ.  ಇವರಿಬ್ಬರೂ  ಅತ್ಯುತ್ತಮ ಶಾಸಕರು.  ಜನರ ಧ್ವನಿಯಾಗಲು ಮೇಲ್ಪಂಕ್ತಿಯನ್ನು ಬಿಟ್ಟುಹೋಗಿದ್ದಾರೆ. ಎಸ್.ಆರ್.ಪಾಟೀಲರು ಆಡು ಮುಟ್ಟದ ಸೊಪ್ಪಿಲ್ಲದಂತೆ ಎಲ್ಲಾ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿದ್ದಾರೆ. ವಿರೋಧ ಪಕ್ಷದ ನಾಯಕರಾಗಿ ಸದನದಲ್ಲಿ ಬಹಳ ಮಾತನಾಡಿದ್ದಾರೆ. ಕೃಷ್ಣಾ ಮೂರನೇ ಹಂತ ಆಗಬೇಕೆಂದು ಬಲವಾಗಿ ವಾದ ಮಾಡಿದ್ದಾರೆ.  ಸಮಾಜದ ಎಲ್ಲಾ ವರ್ಗದ ಜನ, ಅವಕಾಶ ವಂಚಿತರ ಬಗ್ಗೆ ಧ್ವನಿಯಾಗಿ ಕೆಲಸ ಮಾಡುವಲ್ಲಿ ಇತರರಿಗಿಂತ ಮುಂದೆ ಹೋಗಿದ್ದಾರೆ. ಇನ್ನಷ್ಟು ಹೆಚ್ಚು ಜವಾಬ್ದಾರಿಯಿಂದ   ಕೆಲಸ ಮಾಡುವಂತಾಗಲಿ ಎಂದು ಮುಖ್ಯ ಮಂತ್ರಿಗಳು ಹಾರೈಸಿದರು.

ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ,  ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸಚಿವರಾದ ಹೆಚ್.ಕೆ ಪಾಟೀಲ್ ಹಾಗೂ ಎನ್.ಎಸ್. ಬೋಸ ರಾಜು, ಪರಿಷತ್ ಸದಸ್ಯರಾದ ಭೋಜೇಗೌಡ, ಟಿ. ಎ. ಶರವಣ, ಮುಖ್ಯ ಸಚೇತಕ ಸಲೀಂ ಅಹ್ಮದ್, ವೈ.ಎ. ನಾರಾಯಣಸ್ವಾಮಿ, ಶಾಸಕ ಕೋಟ ಶ್ರೀನಿವಾಸ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!