ಕೇಶವಕೃಪದವರು ನೋಡಲಿ ಅಂತ ಡ್ರಾಮಾ ಮಾಡಿದ ಬಿಜೆಪಿ ಶಾಸಕರು: ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ- ಸಂವಿಧಾನ ವಿರೋಧಿ-ಜನ ವಿರೋಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಜುಲೈ.19): ನಾವು ಬಸವಣ್ಣನವರ ಸಂಸ್ಕಾರದಂತೆ ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದನ್ನು ನಾಡಿನ ಜನ ಸ್ವಾಗತಿಸಿದ್ದಾರೆ, ಸಂಭ್ರಮಿಸಿದ್ದಾರೆ. ಇದನ್ನು ಬಿಜೆಪಿ ಯವರಿಗೆ ಸಹಿಸಲು ಆಗುತ್ತಿಲ್ಲ, ಸಂಕಟ ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 

ವಿದಾನಸಭಾ ಅಧಿವೇಶನದಲ್ಲಿ ಬಿಜೆಪಿ ಸದಸ್ಯರು ಸ್ಪೀಕರ್ ಮುಖಕ್ಕೆ ಪೇಪರ್ ಹರಿದು ಎಸೆದದ್ದು ಮತ್ತು ಸ್ಪೀಕರ್ ಪೀಠಕ್ಕೆ ಅವಮಾನಿಸಿದ್ದನ್ನು ವಿರೋಧಿಸಿ ಸದನದಲ್ಲಿ ಮಾತನಾಡಿದರು. 

ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ದಿನ. ನಮ್ಮ ಐದು ಗ್ಯಾರಂಟಿಗಳನ್ನು ನಾಡಿನ ಜನ‌ತೆ ಅತ್ಯಂತ ಹೃದಯಪೂರ್ವಕವಾಗಿ ಸ್ವಾಗತಿಸಿದ್ದು ಬಿಜೆಪಿ  ಶಾಸಕರ ಹೊಟ್ಟೆಗೆ ಬೆಂಕಿ ಬಿದ್ದಂತಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅರ್ಥಪೂರ್ಣ ವಿರೋಧ ಪಕ್ಷ ಇರಬೇಕು ಎನ್ನುವುದು ನನ್ನ ನಂಬಿಕೆ. ಈ ಕಾರಣಕ್ಕೇ ನಾವು ಬಿಜೆಪಿ ಮುಕ್ತ ಎನ್ನುವ ಮಾತನ್ನು ಯಾವತ್ತೂ ಆಡಿಲ್ಲ. ಇವರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಗೌರವ ಇಲ್ಲ. 

ಅಂಬೇಡ್ಕರ್, ಬುದ್ದ, ಬಸವ ಮುಂತಾದ ಮಹನೀಯರ ಪ್ರಜಾಪ್ರಭುತ್ವವಾದಿ ಮೌಲ್ಯಗಳ ಮುಂದುವರೆದ ಪರಂಪರೆಯ ಪ್ರಾತಿನಿಧಿಕ ಸಂಸ್ಥೆಯಾಗಿದ್ದ ವಿಧಾನಸಭೆಗೆ ಅಗೌರವ ಸಲ್ಲಿಸಿದ್ದಾರೆ. 

ಪ್ರಜಾಪ್ರಭುತ್ವ ಮಾದರಿಯಲ್ಲಿ ಮತ್ತು ಸದನದ ನಿಯಮಾವಳಿಗಳ ಆಧಾರದಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿಯವರಿಗೆ ಅವಕಾಶ ಇತ್ತು. ಆದರೆ ಸ್ಪೀಕರ್ ಮುಖಕ್ಕೆ ಪತ್ರ ಎಸೆಯುವುದು, ಸ್ಪೀಕರ್ ಪೀಠಕ್ಕೆ ಎಸೆಯುವುದು, ಅವಮಾನ ಮಾಡುವುದು ನಿಯಮ ಬಾಹಿರ. ಇದು ಅನಾಗರೀಕ ನಡವಳಿಕೆಯಲ್ಲವೇ ಎಂದು ಪ್ರಶ್ನಿಸಿದರು. 

ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ಸಂದರ್ಭದಲ್ಲೂ ಐಎಎಸ್ ಅಧಿಕಾರಿಗಳನ್ನೇ ಲೈಸನಿಂಗ್ ಅಧಿಕಾರಿಗಳನ್ನಾಗಿ ಮಾಡಿದ್ದರು. ಆದೆಲ್ಲಾ ಅವರಿಗೆ ಮರೆತುಹೋಯ್ತಾ..? 

ದಿವಂಗತ ಅನಂತ್ ಕುಮಾರ್ ಅವರು ಬದುಕಿದ್ದಾಗ ರಾಜ್ಯದಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಗೆ ಬರುವ ಬಿಜೆಪಿ ರಾಷ್ಟ್ರೀಯ ನಾಯಕರನ್ನು ರಾಜ್ಯದ ಅತಿಥಿಗಳನ್ನಾಗಿ ಘೋಷಿಸಿ ಆ ಶಿಷ್ಟಾಚಾರದಂತೆ ಕ್ರಮ ವಹಿಸಲು ನನ್ನ ಬಳಿ ಬಂದು ಮನವಿ ಮಾಡಿದ್ದರು. ಆಗ ನಾನು ಮುಖ್ಯಮಂತ್ರಿ ಆಗಿ ಬಿಜೆಪಿ ನಾಯಕರಿಗೆ ಶಿಷ್ಟಾಚಾರದ ಪ್ರಕಾರ ರಾಜ್ಯದ ಅತಿಥಿಗಳು ಎಂದು ಘೋಷಿಸಿ ಗೌರವ ನೀಡಿದ್ದೆವು. 

ಇದು ಬಿಜೆಪಿಯವರಿಗೆ ಸ್ಪಷ್ಟವಾಗಿ ಗೊತ್ತಿದ್ದೂ ಸುಳ್ಳು ಹೇಳುತ್ತಾ ನಕಲಿ ಪ್ರತಿಭಟನೆಯ ಡ್ರಾಮಾ  ಮಾಡಿದ್ದಾರೆ. ಅವತ್ತು ಬಿಜೆಪಿಯ ರಾಷ್ಟ್ರೀಯ ನಾಯಕರಿಗೆ ಯಾವ ರೀತಿ ನಡೆಸಿಕೊಂಡಿದ್ದೇವೋ ಈಗಲೂ ಅದೇ ರೀತಿ ನಡೆದುಕೊಂಡಿದ್ದೇವೆ. ಇದು ಹಿಂದಿನಿಂದ ನಡೆದುಕೊಂಡಿರುವ ಪದ್ಧತಿ. ಅದರಂತೆ ನಡೆಯುತ್ತಿದೆ. ಆದರೆ ಇವತ್ತು ಬಿಜೆಪಿ ಸದಸ್ಯರು ಅದನ್ನೆಲ್ಲಾ ಮರೆತರಂತೆ ಡ್ರಾಮಾ ಆಡುತ್ತಾ, ಅಮಾನವೀಯವಾಗಿ ವರ್ತಿಸಿದ್ದಾರೆ. ಸ್ಪೀಕರ್ ಜತೆ ಮತ್ತು ಅವರ ಪೀಠದ ಎದುರು ಅತ್ಯಂತ ಅಸಹ್ಯವಾಗಿ ಅಮಾನವೀಯವಾಗಿ ವರ್ತಿಸಿದ್ದಾರೆ. ನಾವೂ ವಿರೋಧ ಪಕ್ಷದಲ್ಲಿದ್ದೆವು. ಇಷ್ಟು ಅಸಹ್ಯವಾಗಿ ನಡೆದುಕೊಂಡಿದ್ದ ಸಣ್ಣ ಉದಾಹರಣೆಯಾದರೂ ಇದೆಯೇ ಎಂದು ಪ್ರಶ್ನಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!