ಧ್ವನಿ ಇಲ್ಲದವರಿಗೆ ಧ್ವನಿ ಕೊಡುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಜು.24): ಮಹಾತ್ಮಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. 

ಇವತ್ತಿನ ಬಹಳಷ್ಟು ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವುದು ನನ್ನ ಭಾವನೆ. ಪತ್ರಿಕಾ ವೃತ್ತಿಯ ಆಶಯಕ್ಕೆ ತಕ್ಕಂತೆ ಇದ್ದೇವಾ, ಇಲ್ಲವಾ ಎನ್ನುವ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ ಎಂದರು. 

ಸಮಾಜದಲ್ಲಿ ಇನ್ನೂ ಶೇ25 ರಷ್ಟು ಮಂದಿಗೆ ಶಿಕ್ಷಣ ಸಿಕ್ಕಿಲ್ಲ. ಆರ್ಥಿಕ ಅಸಮಾನತೆ ಇನ್ನೂ ಹೆಚ್ಚಾಗಿದೆ. ಹೀಗಾಗಿ ಅವಕಾಶ ವಂಚಿತರನ್ನು ಮುಖ್ಯವಾಹಿನಿಗೆ ತರುವ, ಸಮಾಜದ ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದ್ದೇನೆ. 

ಸಾಮಾಜಿಕ ಅಸಮಾನತೆ ಹಿಂದಿನಿಂದ ಸಾಂಪ್ರದಾಯಿಕವಾಗಿ ನಡೆದುಕೊಂಡು ಬಂದಿದೆ. ಹೀಗಾಗಿ ಸಮಾಜದ ಬಹುಪಾಲು ಮಂದಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಮತ್ತು ತಾರತಮ್ಯಕ್ಕೆ ಬಲಿಯಾಗಿದ್ದಾರೆ. 

ಇದಕ್ಕಾಗಿಯೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಅನುಷ್ಠಾನಗೊಳ್ಳುವ ಹಿಂದಿನ ದಿನ ತಾವು ಮಾಡಿದ ಐತಿಹಾಸಿಕ ಭಾಷಣದಲ್ಲಿ, “ಆರ್ಥಿಕ-ಸಾಮಾಜಿಕ ಸ್ವಾತಂತ್ರ್ಯ ಸಿಗದೆ ಕೇವಲ ದೇಶಕ್ಕೆ ಆಡಳಿತಾತ್ಮಕ, ರಾಜಕೀಯ ಸ್ವಾತಂತ್ರ್ಯ ಸಿಕ್ಕರೆ ಅಸಮಾನತೆಗೆ ಬಲಿಯಾದ ಜನ ಮುಂದೊಂದು ದಿನ ಈ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡಿಬಿಡಬಹುದು” ಎಂದಿದ್ದರು. 

ದುಡಿಯುವ ವರ್ಗಗಳು ಹಸಿವಿನಿಂದ ಮಲಗಿದರೂ ಪರ್ವಾಗಿಲ್ಲ, ಅನ್ನಭಾಗ್ಯ ಮಾತ್ರ ಜಾರಿ ಮಾಡಬಾರದು ಎನ್ನುವ ಹೊಟ್ಟೆ ತುಂಬಿದವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು.

ಜನರ ಜೇಬಿನಲ್ಲಿ ಹಣ ಇದ್ದರೆ ಮಾತ್ರ ದೇಶದ ಆರ್ಥಿಕತೆ ಬೆಳವಣಿಗೆ ಕಾಣುತ್ತದೆ. ಈ ಕಾರಣಕ್ಕೇ ನಮ್ಮ ಸರ್ಕಾರ ದುಡಿಯುವ ಜನರ ಜೇಬಿನಲ್ಲಿ ಹಣ ಇರುವ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಇದನ್ನು ವಿರೋಧಿಸುವ ಬಿಜೆಪಿಯವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು. ಹೀಗಾಗಿ ಪತ್ರಿಕಾ ವೃತ್ತಿಯಲ್ಲಿರುವವರು ಬಡವರ ಪರವಾದ, ಜನರ ಪರವಾದ ಯೋಜನೆಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದರು. 

ಹಿರಿಯ ಪತ್ರಕರ್ತೆ  ಡಾ.ಆರ್.ಪೂರ್ಣಿಮಾ ಅವರು ಪತ್ರಕರ್ತರ ಸಾಮಾಜಿಕ ಜವಾಬ್ದಾರಿ ಕುರಿತು ಉಪನ್ಯಾಸ ನೀಡಿದರು. ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್,  ಹಿರಿಯ ಪತ್ರಕರ್ತರು ಹಾಗೂ ಈ-ದಿನ‌ ಸುದ್ದಿ ಸಂಸ್ಥೆಯ ಮುಖ್ಯಸ್ಥರಾದ ಡಿ.ಉಮಾಪತಿ, ಸುವರ್ಣ ನ್ಯೂಸ್ ಪ್ರಧಾನ ಸಂಪಾದಕರಾದ ರವಿ ಹೆಗಡೆ, ವಾರ್ತಾ ಇಲಾಖೆ ಆಯುಕ್ತರಾದ ಡಾ.ಹೇಮಂತ್ ಎಂ ನಿಂಬಾಳ್ಕರ್ ಉಪಸ್ಥಿತರಿದ್ದರು. 

15 ಕ್ಕೂ ಹೆಚ್ಚು ಮಂದಿ ಹಿರಿಯ ಪತ್ರಕರ್ತರು ಮತ್ತು ಛಾಯಾಗ್ರಾಹಕರುಗಳನ್ನು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸನ್ಮಾನಿಸಿದರು. 

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಸೇರಿ ಪದಾಧಿಕಾರಿಗಳು ಕಾರ್ಯಕ್ರಮ ನಡೆಸಿಕೊಟ್ಟರು. 

ಸುಳ್ಳು ಬರೆದವರನ್ನೂ ನಾನು ಕೇಳಲ್ಲ: ಇವತ್ತು ಮಾಧ್ಯಮಗಳಲ್ಲಿ ಸತ್ಯ ನ್ಯಾಯ ಸಿಗತ್ತೆ ಎನ್ನುವ ಪರಿಸ್ಥಿತಿ ಈಗ ಇಲ್ಲ. ನನ್ನ ಬಗ್ಗೆ ಸುಳ್ಳು ಸುದ್ದಿ ಬರೆದರೂ ನಾನು ಯಾಕಪ್ಪಾ ಸುಳ್ಳು ಬರಿತೀಯ ಅಂತ ಕೇಳಲ್ಲ. ಜನ ಸಾಮಾನ್ಯರು ಇತರೆ ಮೂಲಗಳಿಂದ ಸತ್ಯ ತಿಳಿದುಕೊಳ್ಳುವಷ್ಟು ಸಮರ್ಥರಿದ್ದಾರೆ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ; ಹೆಚ್.ಡಿ. ಕುಮಾರಸ್ವಾಮಿ

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ; ಹೆಚ್.ಡಿ.

ನನ್ನ ಸಂಪರ್ಕದಲ್ಲಿ ಯಾವೊಬ್ಬ ನಾಯಕರು ಇಲ್ಲ. ಒಂದು ವೇಳೆ ಸಂಪರ್ಕಕ್ಕೆ ಬಂದರೆ ನಮ್ಮ ಪಕ್ಷದ ಹಿರಿಯ ನಾಯಕನ ಜೊತೆ ಚರ್ಚಿಸಿ ಸಾಧಕ ಬಾಧಕಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120931"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]