ಉತ್ತರಕಾಶಿ, (ಆ.21): ಬಸ್ ಕಂದಕಕ್ಕೆ ಉರುಳಿದ ಪರಿಣಾಮ 8 ಯಾತ್ರಿಗಳು ಸಾವನ್ನಪ್ಪಿದ್ದು, 27 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಭೀಕರ ಘಟನೆ ಉತ್ತರಕಾಶಿ ಜಿಲ್ಲೆಯ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ (ಆಗಸ್ಟ್ 20) ರಂದು ನಡೆದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸಾವನ್ನಪ್ಪಿದ ಯಾತ್ರಿಗಳು ಗುಜರಾತ್ ಮೂಲದವರು ಎಂದು ತಿಳಿದು ಬಂದಿದೆ.
22-33 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ 50 ಮೀಟರ್ ಆಳದ ಕಂದಕಕ್ಕೆ ಬಿದ್ದಿದೆ. 27 ಪ್ರಯಾಣಿಕರನ್ನ ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಗಿದ್ದು ಅವರಲ್ಲಿ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಘಟನೆ ಬಗ್ಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಕೂಡ ಪ್ರತಿಕ್ರಿಯಿಸಿದ್ದು ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವ ಕುರಿತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಧಾ ರತೂರಿ ಅವರಿಗೆ ಸೂಚನೆ ನೀಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….