ಹೈದರಾಬಾದ್, (ಆ.25): ವಿವಾಹಕ್ಕೆ ಸೂಕ್ತ ವಧುವನ್ನು ಹುಡುಕಲು ಸಾಧ್ಯವಾಗಿಲ್ಲ ಎಂದು ಮಗನೊಬ್ಬ ತಾಯಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು 45 ವರ್ಷದ ಮಹಿಳೆಯನ್ನು ಆಕೆಯ ಮಗನೇ, ವಿವಾಹಕ್ಕೆ ಸೂಕ್ತ ಜೋಡಿ ಹುಡುಕಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಮಹಿಳೆಯನ್ನು ಇಟ್ಟಿಗೆಯಿಂದ ಹೊಡೆದು ಕೊಂದಿದ್ದಾನೆ. ಬಳಿಕ ಆಕೆಯ ಕತ್ತು ಸೀಳಿ ಕಾಲುಗಳನ್ನು ಕತ್ತರಿಸಿದ್ದಾನೆ ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಬುಧವಾರ ಮಧ್ಯರಾತ್ರಿ ಜಿಲ್ಲೆಯ ಬಂಡಾ ಮೈಲಾರಂ ಗ್ರಾಮದ ನಿವಾಸದಲ್ಲಿ ಈ ಘಟನೆ ನಡೆದಿದೆ.
ಕೊಲೆಗೆ ಸಂಬಂಧಿಸಿದಂತೆ ಮಹಿಳೆಯ ಮಗ ಮತ್ತು ಇನ್ನೊಬ್ಬ ಸಂಬಂಧಿಯನ್ನು ಬಂಧಿಸಲಾಗಿದೆ. ಮಹಿಳೆಯ ಮಗಳು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆಯ ಸಂದರ್ಭದಲ್ಲಿ ಸಂತ್ರಸ್ತೆಯ ಮಗ ಮತ್ತು ಇನ್ನೊಬ್ಬ ಸಂಬಂಧಿ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….