ಬೆಂಗಳೂರು, (ಸೆ.03): ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಸಂಸದ ಬಚ್ಚೇಗೌಡ ಅವರಿಗೆ ಈ ಬಾರಿ ಲೋಕಸಭೆ ಚುನಾವಣೆ ಟಿಕೆಟ್ ಕೈತಪ್ಪುವುದು ನಿಶ್ಚಿತವಾಗಿದ್ದು, ಇವರ ಸ್ಥಾನಕ್ಕೆ ಬಿಜೆಪಿ ರಾಜ್ಯ ಯುವಮೋರ್ಚಾ ಉಪಾಧ್ಯಕ್ಷ ವಸಂತ್ ಕುಮಾರ್ ಗೌಡ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.
ಯಲಹಂಕ ತಾಲೂಕು ಮೂಲಕ ವಸಂತ್ ಕುಮಾರ್ ಗೌಡ ಅವರು ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರಾಗಿ ಲೋಕಸಭೆ ಕ್ಷೇತ್ರದಲ್ಲಿ ಚಿರಪರಿಚಿತರಾಗಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ದೊಡ್ಡಬಳ್ಳಾಪುರದಿಂದ ಕಣಕ್ಕಿಳಿಯಲು ಸಿದ್ಧತೆ ನಡೆಸಿ, ಅಂತಿಮ ಹಂತದಲ್ಲಿ ಲೋಕಸಭೆ ಟಿಕೆಟ್ ನೀಡುವ ಕುರಿತು ಭರವಸೆ ಹಿನ್ನೆಲೆಯಲ್ಲಿ ಹಿಂದೆ ಸರಿದಿದ್ದರು ಎನ್ನಲಾಗಿದೆ.
ಚಿಕ್ಕಬಳ್ಳಾಪುರ ಲೋಕಸಭೆ ವ್ಯಾಪ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ 03, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 04, ಬೆಂಗಳೂರು ಉತ್ತರ ತಾಲೂಕಿನ ಯಲಹಂಕ ವಿಧಾನಸಭೆ ಕ್ಷೇತ್ರ ಒಳಪಡುತ್ತದೆ.
ಚುನಾವಣೆಗೆ ಇನ್ನೂ 09 ತಿಂಗಳ ಅವಧಿ ಉಳಿದಿದ್ದು, ಪಕ್ಷದಲ್ಲಿ ಸಿದ್ದತೆ ಆರಂಭವಾಗಿದೆ. ಪ್ರಸ್ತುತ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ರಾಜ್ಯ ಮತ್ತು ಕೇಂದ್ರ ನಾಯಕರುಗಳ ಅತ್ಯಾಪ್ತವಲಯದಲ್ಲಿ ಗುರುತಿಸಿಕೊಂಡಿರುವ ಹಾಗೂ ಪ್ರಬಲ ಒಕ್ಕಲಿಗ ಸಮುದಾಯಕ್ಕೆ ಸೇರಿದ ವಸಂತ್ ಕುಮಾರ್ ಗೌಡ ಹೆಸರು ಮುಂಚೂಣಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.
ಉಳಿದಂತೆ ವಸಂತ್ ಕುಮಾರ್ ಗೌಡ ಅವರನ್ನು ಚುನಾವಣೆ ಸ್ಪರ್ಧೆ ಕುರಿತಂತೆ ಪ್ರಶ್ನಿಸಿದಾಗ ಪಕ್ಷದ ಸೂಚನೆಗೆ ಬದ್ದನಾಗಿರುವುದಾಗಿ ಹರಿತಲೇಖನಿಗೆ ತಿಳಿಸಿದ್ದು, ಪರೋಕ್ಷವಾಗಿ ಚುನಾವಣೆಗೆ ಸಿದ್ದವಾಗಿರುವಂತೆ ಕಂಡುಬರುತ್ತಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….