ದೊಡ್ಡಬಳ್ಳಾಪುರ, (ಸೆ.07): ತಾಲೂಕಿನ ಕಲ್ಲುಕುಂಟೆ ಗ್ರಾಮದಲ್ಲಿ ಬುಧವಾರ ರಾತ್ರಿ 4ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ದೇವರ ವಿಗ್ರಹ ಸ್ಥಾಪನೆ, ವಿಶೇಷ ಅಲಂಕಾರ, ಪೂಜೆ ನೆರವೇರಿಸಲಾಯಿತು.
ತಾಲೂಕಿನಾದ್ಯಂತ ಶ್ರೀ ಕೃಷ್ಣಜನ್ಮಾಷ್ಟಮಿಯನ್ನು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.
ಸಾಂಪ್ರದಾಯಿಕ ಆಚರಣೆ ಮಾಡುವವರ ಮನೆಗಳಲ್ಲಿ ಶ್ರೀ ಕೃಷ್ಣನ ಪೂಜೆ ಮಾಡುವುದರೊಂದಿಗೆ, ಸಿಹಿ ಹಂಚಿ, ಮಕ್ಕಳಿಗೆ ಕೃಷ್ಣ ರಾಧೆ ವೇಷ ತೊಡಿಸಿ, ಸಂಭ್ರಮಿಸುತ್ತಿದ್ದ ದೃಶ್ಯ ಕಂಡು ಬಂದಿತು. ಶ್ರೀ ಕೃಷ್ಣ ಹಾಗೂ ವೇಣುಗೋಪಾಲ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ದೇವಾಲಯಗಳಲ್ಲಿ ವಿಶೇಷ: ನಗರದ ಗಾಂನಗರದ ಖಿಲ್ಲೇ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಅಂಗವಾಗಿ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….