ಭಾರತ್ ಜೋಡೋ’ ಎಂದವರಿಂದ ‘ಭಾರತ’ಕ್ಕೆ ವಿರೋಧ: ಡಾ.ಕೆ.ಸುಧಾಕ‌ರ್

ಚಿಕ್ಕಬಳ್ಳಾಪುರ, (ಸೆ.08): ನಮ್ಮ ದೇಶ ಸಾವಿರಾರು ವರ್ಷಗಳಿಂದಲೂ ಭಾರತ ಎಂಬ ಹೆಸರಿದೆ, ಮೊಘಲರು, ಬ್ರಿಟಿಷರು, ಪೋರ್ಚುಗೀಸರು ಮುಂತಾದ ವಿದೇಶಿಯರು ಭಾರತಕ್ಕೆ, ಇಂಡಿಯಾ, ಹಿಂದೂಸ್ತಾನ ಹೀಗೆ ಕಾಲಕಾಲಕ್ಕೆ ಅನೇಕ ಹೆಸರುಗಳನ್ನು ಇಟ್ಟಿದ್ದಾರೆ. ಆದರೆ ಕನ್ನಡ, ಹಿಂದಿ, ತೆಲುಗು ಸೇರಿದಂತೆ ಭಾರತೀಯ ಭಾಷೆಗಳಲ್ಲಿ ಅನೇಕ ಶತಮಾನಗಳಿಂದ ಭಾರತ ಎಂಬ ಪದ ಬಳಕೆ ಇದೆ. ಹಾಗಾಗಿ ಭಾರತ ಎಂಬ ಪದಪ್ರಯೋಗಕ್ಕೆ ಆಕ್ಷೇಪಣೆ ವ್ಯಕ್ತಪಡಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್‌ಟೀಕಿಸಿದರು.

ನಗರದ ಒಕ್ಕಲಿಗರ ಕಲ್ಯಾಣ ಮಂಟಪದ ಹಿಂಭಾಗದ ತಮ್ಮ ಸ್ವಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಭಾರತ ಹೆಸರಿಗೆ ಕಾಂಗ್ರೆಸ್‌ ನಾಯಕರು ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ಡಾ.ಕೆ.ಸುಧಾಕ‌ರ್ ಆಕ್ರೋಶ ವ್ಯಕ್ತಪಡಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂಡಿಯಾ ಎಂದು ಕರೆಯುವುದು ನಿಜ. ಆದರೆ ನಮ್ಮ ದೇಶಕ್ಕೆ ಹಿಂದಿನಿಂದಲೂ ಭರತ ವರ್ಷ, ಭರತ ಖಂಡ ಎಂಬ ಹೆಸರಿದೆ. ರಾಷ್ಟ್ರಕವಿ ಕುವೆಂಪು ಅವರು ರಚಿಸಿರುವ ನಾಡಗೀತೆಯಲ್ಲಿ ಭಾರತ ಜನನಿಯ ತನುಜಾತ ಎಂದೇ ಇದೆ, ರವೀಂದ್ರನಾಥ ತ್ಯಾಗೋರರು ಬರೆದ ರಾಷ್ಟ್ರಗೀತೆಯಲ್ಲಿ ಭಾರತ ಭಾಗ್ಯ ವಿದಾತ ಎಂದು ಇದೆ, ನಮ್ಮ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿಗೆ ಭಾರತ ರತ್ನ ಎಂಬ ಹೆಸರಿದೆ.

ನೆಹರೂ-ಗಾಂಧಿ ಪರಿವಾರದ ಮೂರು ಜನ ಈ ಪ್ರಶಸ್ತಿ ಪಡೆದಿದ್ದಾರೆ. ಭಾರತ ರತ್ನ ಪ್ರಶಸ್ತಿ ಬದಲು ಇಂಡಿಯಾ ರತ್ನ ಅಂತ ಏಕೆ ಹೆಸರಿಡಲಿಲ್ಲಾ ಕಾಂಗ್ರೆಸ್‌ಗೆ ಪ್ರಶ್ನಿಸಿದರು.

ನಮ್ಮ ದೇಶಕ್ಕೆ ಸಾವಿರಾರು ವರ್ಷಗಳಿಂದಲೂ ಭಾರತ ಎಂಬ ಹೆಸರಿದೆ. ಮೊಘಲರು, ಬ್ರಿಟಿಷರು, ಪೋರ್ಚುಗೀಸರು ಮುಂತಾದ ವಿದೇಶಿಯರು ಭಾರತಕ್ಕೆ ಇಂಡಿಯಾ, ಹಿಂದೂ ಸ್ತಾನ ಹೀಗೆ ಕಾಲಕಾಲಕ್ಕೆ ಅನೇಕ ಹೆಸರುಗಳನ್ನು ಇಟ್ಟಿದ್ದಾರೆ. ಇನ್ನು ಭಾರತೀಯ ಭಾಷೆಗಳಲ್ಲಿ ಅನೇಕ ಶತಮಾನಗಳಿಂದಲೂ ‘ಭಾರತ’ ಎಂಬ ಪದ ಬಳಕೆಯಲ್ಲಿದೆ. ಹಾಗಾಗಿ ಭಾರತ ಎಂಬ ಪದಪ್ರಯೋಗಕ್ಕೆ ಆಕ್ಷೇಪಣೆ ವ್ಯಕ್ತಪಡಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಟೀಕಿಸಿದರು.

ನಮ್ಮದೇಶಕ್ಕೆ ಹಿಂದಿನಿಂದಲೂ ಭರತವರ್ಷ, ಭರತ ಖಂಡ ಎಂಬ ಹೆಸರಿದೆ. ಕಾಂಗ್ರೆಸ್ ತಮ್ಮ ಯಾತ್ರೆಗೆ ‘ಭಾರತ್ ಜೋಡೋ’ ಪಾದಯಾತ್ರೆ ಎಂದಿದ್ದರು. ಇದರಲ್ಲೂ ಕಾಂಗ್ರೆಸ್‌ನವರು ರಾಜಕೀಯ ಲಾಭ ಹುಡುಕುತ್ತಿರುವುದು ಸ್ಪಷ್ಟವಾಗಿದೆ ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರರು ಭಾರತ ಮಾತೆಗೆ ಜೈ ಎಂದರೇ ಹೊರತು ಇಂಡಿಯಾ ಮಾತೆಗೆ ಜೈ ಎನ್ನಲಿಲ್ಲ. ಈಗ ಇದನ್ನ ವಿರೋಧಿಸುವಕಾಂಗ್ರೆಸ್‌ ನಾಯಕರು ಒಂದು ವರ್ಷದ ಹಿಂದೆ ತಮ್ಮ ಯಾತ್ರೆಗೆ ಭಾರತ್ ಜೋಡೋ’ ಎಂಬ ಹೆಸರನ್ನೇ ಇಟ್ಟಿದ್ದರು. ಕಾಂಗ್ರೆಸ್‌ ಸಂಸದರು, ಶಾಸಕರು, ಮುಖ್ಯಮಂತ್ರಿಗಳು, ಮಂತ್ರಿಗಳು ಸ್ವೀಕರಿಸಿರುವ ಪ್ರಮಾಣ ವಚನದಲ್ಲಿ ಸಹ ಭಾರತದ ಸಂವಿಧಾನಕ್ಕೆ ಬದ್ಧರಾಗಿರುತ್ತೇವೆ ಎಂಬ ಪದಪ್ರಯೋಗ ಇದೆ. ಆದರೆ ಈಗ ಕೇಂದ್ರ ಸರ್ಕಾರ ಭಾರತ ಎಂಬ ಹೆಸರಿಗೆ ಆದ್ಯತೆ ನೀಡಿದ್ದಕ್ಕೆ ವಿರೋಧ ವ್ಯಕ್ತವಾಗುತ್ತಿದೆ ಎಂದರೆ, ಇದರಲ್ಲೂ ಕಾಂಗ್ರೆಸ್‌ ನಾಯಕರು ರಾಜಕೀಯ ಲಾಭ ಹುಡುಕುತ್ತಿರುವುದು ಸ್ಪಷ್ಟವಾಗಿದೆ ಎಂದರು.

ಕಾಂಗ್ರೆಸ್‌ ಸೇರಿದಂತೆ ವಿರೋಧ ಪಕ್ಷಗಳ ಒಕ್ಕೂಟ ಇಂಡಿಯಾ ಎಂಬ ಹೆಸರನ್ನು ಇಟ್ಟುಕೊಂಡಿದೆ. ಈ ಹೆಸರಿಗೆ ಬಿಜೆಪಿ ಹೆದರಿದೆ ಎಂದುಕೊಳ್ಳುವುದು ಮೂರ್ಖತನ. ವಿರೋಧ ಪಕ್ಷಗಳ ಈ ಮೈತ್ರಿಕೂಟದಲ್ಲಿರುವ ನಾಯಕರೇ ಪರಸ್ಪರ ಭಿನ್ನಾಭಿಪ್ರಾಯ ಹೊಂದಿದ್ದು, ಅವರ ನಡುವೆಯೇ ಸಮಸ್ಯೆಗಳು ಬಗೆಹರಿದಿಲ್ಲ.

ಹಿಂದಿನ ಯುಪಿಎ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದಿಂದ ಮುಖ ತೋರಿಸಿಕೊಳ್ಳಲಾಗದೆ ಯುಪಿಎ ಹೆಸರನ್ನು ಬಿಟ್ಟು ಇಂಡಿಯಾ ಹೆಸರನ್ನು ಅಂಟಿಸಿಕೊಂಡಿದೆ. ಯಾವುದೇ ಟೀಕೆ ಬಾರದಿರಲಿ ಎಂಬ ಹೆದರಿಕೆಯಿಂದಲೇ ಈ ಕೂಟಕ್ಕೆ ಇಂಡಿಯಾ ಎಂಬ ಹೆಸರಿಡಲಾಗಿದೆ. ಪರಿಸ್ಥಿತಿ ಹೀಗಿರುವಾಗ ಬಿಜೆಪಿ ಈ ದುಷ್ಟರ ಕೂಟಕ್ಕೆ ಅಂಜುವ ಅಗತ್ಯವಿಲ್ಲ ಎಂದರು.

ಸನಾತನ ಧರ್ಮದ ನಿರ್ಮೂಲನೆಯ ಇಂಡಿಯಾ ಕೂಟದ ಗುರಿ ಸವಾತನ ಧರ್ಮವನ್ನು ನಿರ್ಮೂಲನೆ ಮಾಡುವುದೇ ಇಂಡಿಯಾಮೈತ್ರಿಕೂಟದಗುರಿ ಎಂಬುದನ್ನು ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ಸ್ಪಷ್ಟಪಡಿಸಿದೆ. ಸನಾತನ ಧರ್ಮ ಈ ದೇಶದ ಪರಂಪರೆಯ ಬುನಾದಿಯಾಗಿದ್ದು, ಯಾರೇ ನಾಯಕರು ರಾಜಕೀಯ ಲಾಭಕ್ಕಾಗಿ ಧರ್ಮವನ್ನು ಟೀಕೆ ಮಾಡಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಮಾಡಬಾರದು. ರಾಜ್ಯದ ಕಾಂಗ್ರೆಸ್‌ ನಾಯಕರು ಕೂಡ ಸ್ಟಾಲಿನ್ ಅವರ ಹೇಳಿಕೆಗೆ ಬೆಂಬಲ ನೀಡಿ ಸನಾತನ ಧರ್ಮಕ್ಕೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ ಎಂದು ಡಾ.ಕೆ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದರು.

ಸ್ವತಂತ್ರ ಪೂರ್ವದ ಸಾವಿರಾರು ವರ್ಷಗಳಿಂದಲೂ ಸಾವಿರಾರು ರಾಜರು ಸಾಕಷ್ಟು ರಾಜ್ಯಗಳನ್ನು ಕಟ್ಟಿ ಕೊಂಡಿದ್ದರೂ ಸಹಾ ಆಗಲೂ ಭಾರತ ದೇಶ ವಾಗಿತ್ತು. ಮತ್ತು ಹಿಂದೂಸ್ಥಾನ ಎಂದು ಕರೆಸಿ ಕೊಳ್ಳುತ್ತಿತ್ತು. 1947ರಲ್ಲಿ ಸ್ವಾತಂತ್ರ್ಯಕ್ಕೂ ಮೊದಲು ಧರ್ಮದ ಆಧಾರದ ಮೇಲೆ ಪಾಕಿಸ್ತಾನ ವಿಭಜನೆಯಾಗಿ ಮುಸ್ಲಿಮರು ಬೇರೆಯಾದಾಗ ಹಿಂದುಸ್ತಾನ ಹಿಂದುಗಳಿಗಾಗಿಯೇ ಭಾರತವಾಗಿದೆ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!