ಬೆಂಗಳೂರು, (ಸೆ.08): ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರ ರಚಿಸುವ ಮೂಲಕ ಲೋಕಸಭೆ ಚುನಾವಣೆಯಲ್ಲಿಯೂ ಗೆಲುವಿ ಓಟ ಮುಂದುವರಿಸಲು ಸಿದ್ದವಾಗಿರುವ ರಾಜ್ಯ ಕಾಂಗ್ರೆಸ್ ಮಣಿಸಲು ಬಿಜೆಪಿ ಜೆಡಿಎಸ್ ಮೈತ್ರಿ ಕುರಿತಾದ ಊಹಾಪೋಹಗಳಿಗೆ ತೆರೆಬಿದ್ದಿದ್ದು, ಮೈತ್ರಿ ಪಕ್ಕಾ ಆಗಿದೆ. ಈ ಕುರಿತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಖುದ್ದು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿ ಜೆಡಿಎಸ್ ಮೈತ್ರಿಗೆ ಅಮಿತಾ ಶಾ ಒಪ್ಪಿಕೊಂಡಿದ್ದಾರೆ. ಇದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಹಕಾರಿಯಾಗಲಿದೆ. 4 ಸ್ಥಾನಗಳನ್ನು ಜೆಡಿಎಸ್ಗೆ ಬಿಟ್ಟುಕೊಡಲು ಅಮಿತ್ ಶಾ ಒಪ್ಪಿದ್ದಾರೆ, ಮೈತ್ರಿಯಿಂದ ಬಿಜೆಪಿ ಪಕ್ಷಕ್ಕೆ ಹೆಚ್ಚು ಶಕ್ತಿ ಬರಲಿದೆ ಎಂದಿದ್ದಾರೆ.
ಇನ್ನು ಮೈತ್ರಿ ಕುರಿತು ಮಾತನಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿಪಕ್ಷಗಳ ಮಧ್ಯೆ ಮೈತ್ರಿ ಮುಖ್ಯವಾಗಿದೆ. ಒಗ್ಗಟ್ಟಾಗಿ ಜನ ವಿರೋಧಿ ಸರ್ಕಾರದ ವಿರುದ್ಧ ಹೋರಾಡುತ್ತೇವೆ ಎಂದು ಬೊಮ್ಮಾಯಿ ತಿಳಿಸಿದರು.
ಮೂಲಗಳ ಮಾಹಿತಿಯಂತೆ ಹಾಸನ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ ಕೇಳಿದ್ದು ಇದಕ್ಕೆ ಒಪ್ಪಿಗೆ ಸಿಕ್ಕಿದೆ ಎಂದು ಹೇಳಲಾಗಿದೆ. ಇನ್ನೊಂದು ಕ್ಷೇತ್ರದ ಬಗ್ಗೆ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….