ಈ ದಿನದ ವಿಶೇಷ: ಖಾಸಗಿ ಸಾರಿಗೆ ಬಂದ್‌

ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ್ದು ಮಧ್ಯರಾತ್ರಿಯಿಂದಲೇ ಬಂದ್‌ ಬಿಸಿ ಶುರುವಾಗಿದೆ.

ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಸೇರಿ ವಿವಿಧ ಮಾದರಿಯ ಖಾಸಗಿ ಸಾರಿಗೆಯ ವಾಹನಗಳು ರಸ್ತೆಗೆ ಇಳಿಯುತ್ತಿಲ್ಲ. ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಒಕ್ಕೂಟ ಆಯೋಜಿಸಿದೆ.

ಬಂದ್ ಯಶಸ್ಸಿಗಾಗಿ ಖಾಸಗಿ ಸಾರಿಗೆ ಒಕ್ಕೂಟ ಪಣತೊಟ್ಟಿದೆ. ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದ ಒಂದರಲ್ಲೇ 250ಕ್ಕೂ ಹೆಚ್ಚು ಬಸ್ ಸ್ತಬ್ದವಾಗಲಿದೆ. 

ಕೇವಲ ಬೆಂಗಳೂರು ಮಾತ್ರವಲ್ಲದೇ ನೆರೆಯ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ. ಇದರ ಪರಿಣಾಮ ಬೆಂಗಳೂರು ಜನಜೀವನದ ಮೇಲೆ ಸ್ವಲ್ಪ ಮಟ್ಟಿಗೆ ಬೀರುವ ಸಂಭವ ಇದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

error: Content is protected !!