ದೊಡ್ಡಬಳ್ಳಾಪುರ, (ಸೆ.11): ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಲಾಗಿದ್ದ ಬಂದ್‌ಗೆ ತಾಲೂಕಿನಲ್ಲಿ ಬೆಂಬಲ ದೊರಕಿಲ್ಲವಾಗಿದ್ದು, ವಾಹನ ಸಂಚಾರ ಸಾಮಾನ್ಯವಾಗಿದ್ದು, ಬೆಂಗಳೂರಿನಿಂದ ಬರಬೇಕಾದ ಖಾಸಗಿ ಬಸ್ಸುಗಳು ಮಾತ್ರ ಸಂಚಾರ ಸ್ಥಗಿತಗೊಂಡಿವೆ.
ಬಂದ್ ಕರೆ ನಡುವೆಯು, ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಸೇರಿ ವಿವಿಧ ಮಾದರಿಯ ಖಾಸಗಿ ಸಾರಿಗೆಯ ವಾಹನಗಳು ರಸ್ತೆಗೆ ಇಳಿದಿವೆ.
ಬಂದ್ ಹಿನ್ನಲೆಯಲ್ಲಿ ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದ ಒಂದರಲ್ಲೇ 250ಕ್ಕೂ ಹೆಚ್ಚು ಬಸ್ ನಿಂತಿವೆ
ಬೆಂಗಳೂರು ಮಾತ್ರವಲ್ಲದೇ ನೆರೆಯ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ. ಇದರ ಪರಿಣಾಮ ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಜನದಟ್ಟಣೆ ಹೆಚ್ಚಾಗಿದೆ.
ಶಕ್ತಿಯೋಜನೆ ಬಳಿಕ ಸರ್ಕಾರದ ಜೊತೆ ಮುಸುಕಿನ ಗುದ್ದಾಟ ನಡೆಸ್ತಿದ್ದ ಖಾಸಗಿ ಸಾರಿಗೆ ಒಕ್ಕೂಟ, ಇದೀಗ ತಮ್ಮ ಬೇಡಿಕೆಗಳ ಈಡೇರಿಕೆಗೆ ಬಂದ್ ಅಸ್ತ್ರ ಪ್ರಯೋಗಿಸಿವೆ. ಬೈಕ್ ಟ್ಯಾಕ್ಸಿ ನಿರ್ಬಂಧ, ಚಾಲಕರಿಗೆ ಸಹಾಯಧನ ಸೇರಿದಂತೆ ಸರ್ಕಾರದ ಮುಂದೆ ಹತ್ತು ಹಲವು ಬೇಡಿಕೆ ಇಟ್ಟಿದ್ದ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಇಂದು ಬೆಂಗಳೂರು ಬಂದ್’ಗೆ ಕರೆಕೊಟ್ಟಿವೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….