ಬೆಂಗಳೂರು, (ಸೆ.11): ಚುನಾವಣೆಯಲ್ಲಿ ಸೋತರೆ ಪಕ್ಷ ವಿಸರ್ಜಿಸುತ್ತೇನೆ ಎಂದಿದ್ದರು, ಆದರೆ ಈಗ “ಜಾತ್ಯಾತೀತತೆ”ಯನ್ನು ವಿಸರ್ಜಿಸಲು ಹೊರಟಿದ್ದಾರೆ. ಜನತಾ ದಳ ಎಂಬ ಹೆಸರನ್ನು “ಕಮಲ ದಳ” ಎಂದು ಬದಲಿಸಿಕೊಂಡರೆ ಒಳಿತು ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿಯ ಮಾತುಗಳು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂತೆಯೇ, ಮೈತ್ರಿ ಕುರಿತು ಕೆಲ ದಿನಗಳ ಹಿಂದೆ ನಾನು ದೆಹಲಿಗೆ ಹೋಗಿದ್ದೂ ನಿಜ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೂ ನಿಜ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದ್ದರು.
ಹಾಗೆಯೇ, ಇನ್ನು ಕೆಲ ದಿನಗಳಲ್ಲಿಯೇ ಕರ್ನಾಟಕದಲ್ಲಿ ಹೊಸ ರಾಜಕೀಯ ಅಧ್ಯಾಯ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದರು. ಈ ಮೂಲಕ ಜೆಡಿಎಸ್ ಪಕ್ಷದ ಉಭಯ ವರಿಷ್ಠ ನಾಯಕರೂ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಬಗ್ಗೆ ಬಗ್ಗೆ ಕೆಲ ದಿನಗಳಿಂದ ಹಬ್ಬಿದ್ದ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದ್ದರು.
ಇದರ ಬೆನ್ನಲ್ಲೇ ಇಂದು ಎಕ್ಸ್ (ಈ ಮುಂಚೆ ಟ್ವಿಟರ್ ಎನ್ನಲಾಗುತ್ತಿತ್ತು) ಮಾಡಿರುವ ಕಾಂಗ್ರೆಸ್, ಚುನಾವಣೆಯಲ್ಲಿ ಸೋತರೆ ಪಕ್ಷ ವಿಸರ್ಜಿಸುತ್ತೇನೆ ಎಂದಿದ್ದರು, ಆದರೆ ಈಗ “ಜಾತ್ಯಾತೀತತೆ”ಯನ್ನು ವಿಸರ್ಜಿಸಲು ಹೊರಟಿದ್ದಾರೆ. ಜನತಾ ದಳ ಎಂಬ ಹೆಸರನ್ನು “ಕಮಲ ದಳ” ಎಂದು ಬದಲಿಸಿಕೊಂಡರೆ ಒಳಿತು.
ಇತ್ತ BJP Karnataka ಜೆಡಿಎಸ್ ಪಕ್ಷವನ್ನು ಫ್ಯಾಮಿಲಿ ಪಾರ್ಟಿ ಟೀಕಿಸುತ್ತಿತ್ತು, ಈಗ ಅದೇ ಫ್ಯಾಮಿಲಿಗೆ ನಾಲ್ಕು ಸೀಟು ಬಿಟ್ಟು ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡು ಅಲ್ಲವೇ ಎಂದು ಪ್ರಶ್ನಿಸಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….