ಬೆಂಗಳೂರು, (ಸೆ.11): ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಖಾಸಗಿ ಸಾರಿಗೆ ಒಕ್ಕೂಟಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಸ್ಥಗಿತಗೊಳಿಸಿವೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಪ್ರತಿಭಟನಾ ಸ್ಥಳಕ್ಕೆ ತೆರಳಿ ಹೋರಾಟ ನಿರತರ ಮನವಿ ಅಲಿಸಿ, ಭರವಸೆ ನೀಡಿದ ಹಿನ್ನೆಲೆಯಲ್ಲಿ ಸಂಘಟನೆಗಳು ಬೆಂಗಳೂರು ಬಂದ್ ಅನ್ನು ಹಿಂಪಡೆದಿರುವುದಾಗಿ ತಿಳಿಸಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಖಾಸಗಿ ಸಾರಿಗೆ ಒಕ್ಕೂಟದ ಮುಖಂಡರಾದ ನಟರಾಜ್ ಶರ್ಮಾ, ನಾವು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಸ್ವತಃ ಸಾರಿಗೆ ಸಚಿವರೇ ಆಗಮಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ.
ನಾಳೆಯಿಂದಲೇ ನಮ್ಮ ಬೇಡಿಕೆಗಳನ್ನು ಈಡೇರಿಸಲು ಮುಂದಾಗುವುದಾಗಿ ಹೇಳಿದ್ದಾರೆ. ಹೀಗಾಗಿ ನಾವು ಬಂದ್ ವಾಪಸ್ ಪಡೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಚಾಲಕರ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಮುಖ್ಯಮಂತ್ರಿಗ ಜತೆ ಚರ್ಚೆ ಮಾಡಿದ್ದೇನೆ. ನಿಗಮ ಮಂಡಳಿಯನ್ನು ಮಾಡೇ ಮಾಡ್ತವೆ. ಅವರ ಸಮಸ್ಯೆಗಳು ಈ ಸರ್ಕಾರ ಬಂದಾಗಿನಿಂದ ಒರೋದಲ್ಲ ಹಿಂದಿನಿಂದಲೂ ಇದೆ. ಓಲಾ-ಊಬರ್, ಬೈಕ್ ಟ್ಯಾಕ್ಸಿ ಕುರಿತ ಕೇಸ್ಗಳು ಇವೆ. ವಕೀಲರೊಂದಿಗೆ ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲಿ ಬಗೆಹರಿಸುವ ಪ್ರಯತ್ನ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿರುವುದಾಗಿ ಅವರು ತಿಳಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….