ರಾಜ್ಯ ಸರ್ಕಾರದ ವಿರುದ್ದ ಜೆಡಿಎಸ್ ಬಿಜೆಪಿ ಒಟ್ಟಾಗಿ ಹೋರಾಡಬೇಕೆನ್ನುವುದು ಜನರ ಬಯಕೆ : ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ, (ಸೆ.11): ಕಾಂಗ್ರೆಸ್ ಸರ್ಕಾರದ ದುರಾಡಳಿತ ಹೆಚ್ಚಾಗಿದೆ. ಅದರ ವಿರುದ್ದ ವಿರೋಧ ಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕೆಂಬುದು ರಾಜ್ಯದ ಜನರ ಅಪೇಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣ ನಿಂತ ನೀರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ಮತ್ತೊಂದು ಕಡೆ ಸಚಿವರುಗಳು ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ. ರಾಜ್ಯದಲ್ಲಿ ರಸ್ತೆಗೆ ಒಂದು ಹಿಡಿ ಮಣ್ಣನ್ನು ಹಾಕಲಾರದ ಸ್ಥಿತಿ ನಿರ್ಮಾಣ.ಈ ರೀತಿ ಆದರೆ ಇಡೀ ರಾಜ್ಯ ಅಧೋಗತಿ ಹೋಗುತ್ತದೆ. ಇದನ್ನು ನಿಲ್ಲಿಸುವ ಉದ್ದೇಶದಿಂದ ನಾವಂತೂ ಹೋರಾಟ ಮಾಡುತ್ತಿದ್ದೇವೆ. ಆಡಳಿತ ಪಕ್ಷದ ವಿರುದ್ಧ ಹೋರಾಟ ಮಾಡುವುದು ವಿರೋಧ ಪಕ್ಷದ ಜವಾಬ್ದಾರಿ ಇದೆ. ಈ ಹಿನ್ನಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹತ್ತಿರ ಬರುತ್ತಿವೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕುರಿತು ಮಾತುಕತೆ ನಡೆದಿದೆ. ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹಿಂದೆ ಕಾಂಗ್ರೆಸ್ ನವರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರಲ್ಲವೇ ಆಗ ಇಬ್ಬರೂ ಅಸಹಾಯಕರಿದ್ದರೆ ?   ಜೆಡಿಎಸ್ ಗೆ ಎಷ್ಟು ಸ್ಥಾನ ಕೊಡಬೇಕು ಅನ್ನುವುದನ್ನು ವಸ್ತು ಸ್ಥಿತಿ ಆಧಾರದ ಮೇಲೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದರು.

ಬರ ಘೋಷಣೆಗೆ ನೆಪ: ರಾಜ್ಯದಲ್ಲಿ ಬರ ಘೋಷಣೆಗೆ ಕೇಂದ್ರ ಸರ್ಕಾರದ ಮಾನದಂಡಗಳು ಅಡ್ಡಿಯಾಗುತ್ತಿವೆ ಎಂದು ರಾಜ್ಯ ಸರ್ಕಾರ ಕುಂಟು ನೆಪ ಹೇಳುತ್ತಿದೆ. ಈ ಹಿಂದೆಯೂ ಇದೇ ನಿಯಮಗಳಿದ್ದವು. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬರ ಘೋಷಣೆ ಮಾಡಲಿಲ್ಲವೇ.?  ನಾವು ಸಹ ಕೇಂದ್ರ ಸರ್ಕಾರ ಕೊಡುವುದಕ್ಕಿಂತ ಹೆಚ್ಚಿನ ಹಣ ಕೊಟ್ಟಿದ್ದೇವು. ನಿಯಮ ಬದಲಾವಣೆಗಾಗಿ ನಾವು ಕಾದುಕೊಂಡು ಕುಳಿತಿದ್ದವೇ ಎಂದು ಪ್ರಶ್ನಿಸಿದರು.‌

ನಾವು ಬರ ಪರಿಹಾರದ ಎರಡು ಪಟ್ಟು ಮೊತ್ತ ಕೊಟ್ಟಿದ್ದೇವು.  ರಾಜ್ಯ ಸರ್ಕಾರಕ್ಕೆ ಜನರಿಗೆ ಸಹಾಯ ಮಾಡಬೇಕೆಂಬ ಮನಸಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣೆಯ  ಮೊದಲನೇ ಕಂತು ಈಗಾಗಲೇ ಬಂದಿದೆ. ಇವರಿಗೆ ರೈತರ ಸಂಕಷ್ಟ ಪರಿಹಾರ ಮಾಡೋ ಮನಸ್ಸಿಲ್ಲ. ರಾಜ್ಯ ಸರ್ಕಾರ ತನ್ನ ಅಧಿಕಾರ ಬಳಸಿ ಕೂಡಲೇ ಬರ ಘೋಷಣೆ ಮಾಡಬೇಕು ಎಂದರು.

ಖಾಸಗಿ ಬಸ್ ಮಾಲೀಕರ ಬೇಡಿಕೆ ಈಡೇರಿಸಬೇಕು: ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದಿರುವುದರಿಂದ ಖಾಸಗಿ ವಾಹನಗಳ ಮಾಲೀಕರು ಸಮಸ್ಯೆಗೆ ಸಿಲುಕಿದ್ದಾರೆ. ಸರ್ಕಾರ  ಖಾಸಗಿ ಬಸ್ ಮಾಲೀಕರ ಸಮಸ್ಯೆ ಬಗೆಹರಿಸುತ್ತೇವೆ  ಅಂತ ಹೇಳುತ್ತಲೇ ಬಂದಿದ್ದಾರೆ. ಸುಮ್ಮನೆ ಸಭೆ  ಮಾಡಿದರು, ಈಗ ಖಾಸಗಿ ಬಸ್ ಮಾಲೀಕರ ವಿಶ್ವಾಸ ಕಳೆದುಕೊಂಡಿದ್ದಾರೆ. ಈಗಲಾದರೂ ಸರ್ಕಾರ ಎಚ್ಚೆತ್ತು ಖಾಸಗಿ ಬಸ್ ಮಾಲೀಕರ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು. 

ಇನ್ನು ಹಾವೇರಿಯ ಹೊಸರಿತ್ತಿ ಲಾಕಪ್ ಡೆತ್ ಪ್ರಕರಣ ಕುರಿತು ಮಾಹಿತಿ ತೆಗೆದುಕೊಳ್ಳುತ್ತೇನೆ. ಈ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರೆ ಖಂಡಿತ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ ಎಂದು ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಬಿಹಾರದ ‘ವೋಟ್ ಅಧಿಕಾರ ಯಾತ್ರೆ’ ದೇಶದ ಪಾಲಿನ ಗೇಮ್ ಚೇಂಜರ್: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಹಾರದ ‘ವೋಟ್ ಅಧಿಕಾರ ಯಾತ್ರೆ’ ದೇಶದ ಪಾಲಿನ ಗೇಮ್ ಚೇಂಜರ್: ಡಿಸಿಎಂ ಡಿ.ಕೆ.

"ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ 'ವೋಟ್ ಅಧಿಕಾರ ಯಾತ್ರೆ' ದೇಶದ ಪಾಲಿನ ಗೇಮ್ ಚೇಂಜರ್" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಬಣ್ಣಿಸಿದ್ದಾರೆ

[ccc_my_favorite_select_button post_id="113065"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!