ಸಾಮಾಜಿಕ ಪಿಡುಗಾಗಿ ಕಾಡುತ್ತಿರುವ ಸಮಸ್ಯೆ, ಬಾಲ್ಯದಲ್ಲಿ ಆಟವಾಡುತ್ತ, ತನ್ನ ಜೊತೆಗಾರರೊಂದಿಗೆ ಶಾಲೆಗೆ ಹೋಗಿ ಕಲಿಯಬೇಕಾದ ಮಕ್ಕಳು ಹಲವಾರು ಕಾರಣಗಳಿಂದ ಹಾಗೂ ಸಮಸ್ಯೆಗಳಿಂದ ಬಾಲ ಕಾರ್ಮಿಕರಾಗಿ ದುಡಿಯುತ್ತಿರುವುದಾಗಿದೆ.
ಕಟ್ಟಡಗಳ ಕೆಲಸಗಳಲ್ಲಿ, ಅಂಗಡಿ ಮಳಿಗೆಗಳಲ್ಲಿ, ಗಾರ್ಮೆಂಟ್ಸ್ಗಳಲ್ಲಿ, ಬೇಕರಿ, ಗ್ಯಾರೇಜ್, ಹೊಟೇಲ್, ಕಾರ್ಖಾನೆಗಳಲ್ಲಿ, ದೊಡ್ಡ ಮನೆಗಳಲ್ಲಿ ಕೆಲಸದಾಳುಗಳಾಗಿ ಇನ್ನಿತರ ಪ್ರಮುಖ ಸ್ಥಳಗಳಲ್ಲಿ ತಮ್ಮ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯಕ್ಕೆ ಕಷ್ಟವಾಗುವಂಥ ಕೆಲಸಗಳನ್ನು ಮಾಡುತ್ತಿದ್ದಾರೆ. ಇದರಿಂದ ಅವರು ಶಿಕ್ಷಣ ವಂಚಿತರಾಗುತ್ತಿದ್ದಾರೆ.
ಪೌಷ್ಟಿಕ ಆಹಾರ ಕೊರತೆಯಿಂದಾಗಿ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಕೆಲವೊಮ್ಮ ತಮ್ಮ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು, ಬಾಲ ಕಾರ್ಮಿಕ ಪದ್ಧತಿಯಿಂದ ಉಂಟಾಗುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್ 12 ರಂದು ಭಾರತ ಸೇರಿದಂತೆ ವಿಶ್ವದಾದ್ಯಂತ ಬಾಲ ಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.
ಬಾಲಕಾರ್ಮಿಕರ ರಕ್ಷಣೆಗಾಗಿ ಜಗತ್ತಿನ ಗಮನ ಸೆಳೆಯಲು ವಿಶ್ವ ಕಾರ್ಮಿಕ ಸಂಘಟನೆಯು 2002ರಲ್ಲಿ ಜೂನ್ 12 ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಎಂದು ಘೋಷಿಸಿತು. ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳು ಈ ಕೆಟ್ಟ ವ್ಯವಸ್ಥೆಯಿಂದ ಹೊರಬಂದು ತಮ್ಮ ಹಕ್ಕುಗಳ ಕುರಿತು ಜಾಗೃತಿ ಹೊಂದಿ ದೇಶದ ಉತ್ತಮ ನಾಗರಿಕರಾರಬೇಕು ಎಂಬುದು ಈ ದಿನದ ಉದ್ದೇಶವಾಗಿದೆ. ಅರ್ಹತೆಗಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ದುಡುಸಿಕೊಳ್ಳುವುದು ಕಾನೂನು ಬಾಹಿರ. ಆದರೂ ಕಾನೂನಿನ ಕಣ್ಣು ತಪ್ಪಿಸಿ ಚಿಕ್ಕ ಮಕ್ಕಳನ್ನು ದುಡಿಸಿಕೊಳ್ಳಲಾಗುತ್ತಿದೆ.
ಐಎಲ್ಒನ ಮಾಹಿತಿಯ ಪ್ರಕಾರ, ವಿಶ್ವದಾದ್ಯಂತ ಲಕ್ಷಾಂತರ ಹುಡುಗಿಯರು ಮತ್ತು ಹುಡುಗರಿಗೆ ತಮ್ಮ ಶಿಕ್ಷ ಣದ ಹಕ್ಕು, ಆರೋಗ್ಯ ಮತ್ತು ಮೂಲಭೂತ ಸ್ವಾತಂತ್ರ್ಯಗಳನ್ನು ಪಡೆಯುವಲ್ಲಿ ವಂಚಿತರಾಗಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.
ಈ ಮಕ್ಕಳಲ್ಲಿ, ಅರ್ಧಕ್ಕಿಂತ ಹೆಚ್ಚು ಬಾಲ ಕಾರ್ಮಿಕರ ಕಾನೂನು ಬಾಹಿರ ಚಟುವಟಿಕೆಗಳಿಗೆ ಬಲಿಯಾಗುತ್ತಿದ್ದಾರೆ.
ಅಪಾಯಕಾರಿ ಪರಿಸರದಲ್ಲಿ ಕೆಲಸ, ಗುಲಾಮಗಿರಿ ಅಥವಾ ಬಲವಂತದ ದುಡಿತಕ್ಕೆ ಒಳಗಾಗುವುದು, ಮಾದಕವಸ್ತು ಕಳ್ಳಸಾಗಣೆ ಮತ್ತು ವೇಶ್ಯಾವಾಟಿಕೆ ಮತ್ತು ಸಶಸ್ತ್ರ ಸಂಘರ್ಷಕ್ಕೆ ಬಲಿಯಾಗುತ್ತಿದ್ದಾರೆ.
ಬಾಲ ಕಾರ್ಮಿಕ ಪದ್ಧತಿಯಿಂದ ಉಂಟಾಗುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್ 12 ರಂದು ಭಾರತ ಸೇರಿದಂತೆ ವಿಶ್ವದಾದ್ಯಂತ ಬಾಲ ಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….