ದೇಶದ ಅಭಿವೃದ್ಧಿಗಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಬರಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಹಾರಾಷ್ಟ್ರ, (ಜೂ.25): ಭಾರತದ ದೀನದಲಿತರ ಹಾಗೂ ಬಡವರ ಏಳಿಗೆಗಾಗಿ, ಭ್ರಷ್ಟಾಚಾರ ನಿಗ್ರಹಕ್ಕಾಗಿ ಹಾಗೂ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ನಡೆಸುವ ಸಲುವಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಬರಲೇಬೇಕು ಎಂದರು. ಬರುವ ಲೋಕಸಭೇಯಲ್ಲಿ ಎಲ್ಲರೂ ಒಗ್ಗಟ್ಟದಾಗಿ , ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದಂತೆ, ಬಿಜೆಪಿಯನ್ನು ಹೋಗಲಾಡಿಸಲು ಕಾಂಗ್ರೆಸ್ ಕಾರ್ಯಕರ್ತರು ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಅವರು ಇಂದು ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಮಹಾ ನಿರ್ಧಾರ ಸಮಾವೇಶವನ್ನು  ಉದ್ಘಾಟಿಸಿ ಮಾತನಾಡಿದರು.

ಅಚ್ಛೇ ದಿನ್ ಆಯೆಂಗೆ ಎಂಬ ಮಾತು ಸುಳ್ಳಾಯಿತು: 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ನೋಡಿರಲಿಲ್ಲ. ಚುನಾವಣೆಯ ಸಂದರ್ಭದಲ್ಲಿ ವಿದೇಶದಲ್ಲಿ ಕಪ್ಪುಹಣವನ್ನು ತಂದು, ದೇಶದ ಪ್ರತಿ ಯೊಬ್ಬರಿಗೂ 15 ಲಕ್ಷ ನೀಡುತ್ತೇವೆಂಬ ಅವರ ಮಾತು ಸುಳ್ಳಾಯಿತು.

9 ವರ್ಷದಲ್ಲಿ 18 ಕೋಟಿ ಉದ್ಯೋಗ ಸೃಷ್ಟಿಸಬೇಕು. ಹೊಸ ಉದ್ಯೋಗ ಸೃಷ್ಟಿಸುವ ಬದಲು ಇರುವ ಉದ್ಯೋಗವನ್ನು ಯುವಕರು ಕಳೆದುಕೊಳ್ಳುತ್ತಿದ್ದಾರೆ. ಅವರ ಅಚ್ಛೇ ದಿನ್ ಆಯೆಂಗೆ ಎಂಬ ಮಾತು ಹೇಳಿದ್ದರು. ಇಂದು ಪೆಟ್ರೋಲ್, ಡೀಸೆಲ್, ಗ್ಯಾಸ್, ಗೊಬ್ಬರ,ಕಬ್ಬಿಣ, ಸಿಮೆಂಟು, ಆಹಾರ ಪದಾರ್ಥಗಳೂ ಸೇರಿದಂತೆ ಎಲ್ಲದರ ಬೆಲೆ ಹೆಚ್ಚಾಗಿದೆ. ನರೇಂದ್ರ ಮೋದಿಯವರು ನ ಖಾವೋಂಗ್ , ನ ಖಾನೆ ದೂಂಗ ಎಂದರು. ಆದರೆ ಕರ್ನಾಟಕದಲ್ಲಿ 40 % ಭ್ರಷ್ಟಾಚಾರ ರಾರಾಜಿಸಿತು. ಆ ಮಾತು ಏನಾಯಿತು.

ಕಾಂಗ್ರೆಸ್‍ನವರು ಸಂವಿಧಾನ ರಕ್ಷಣೆಯ ಹೋರಾಟಕ್ಕೆ ಸಿದ್ಧರಾಗಬೇಕು: ಸಾಂಗ್ಲಿ ಜಿಲ್ಲೆ ಕಾಂಗ್ರೆಸ್ ನ ಭದ್ರ ಕೋಟೆಯಾಗಿದ್ದು, ಪ್ರಮುಖ ರಾಷ್ಟ್ರನಾಯಕರನ್ನು  ದೇಶಕ್ಕೆ ನೀಡಿದೆ. ಅಂಬೇಡ್ಕರ್ ಅವರು ಭಾರತದ ಸಂವಿಧಾನದ ಕರ್ತೃ. ಈ ಸಂವಿಧಾನವಿರದಿದ್ದರೆ ಸಮಾಜದ ಶೋಷಿತರು, ದೀನದಲಿತರು, ಅಲ್ಪಸಂಖ್ಯಾತರೂ  ದೇಶದ ರಾಜಕಾರಣದಲ್ಲಿ, ಸಾಮಾಜಿಕವಾಗಿ ಆರ್ಥಿಕವಾಗಿ ಮುಂದೆ ಬರಲು ಸಾಧ್ಯವಾಗುತ್ತಿರಲಿಲ್ಲ. ಎಲ್ಲರಿಗೂ ಸಮಾನತೆಯನ್ನು ಬೋಧಿಸುವ ಸಂವಿಧಾನ ಸಮಸಮಾಜದ ನಿರ್ಮಾಣಕ್ಕೆ ಒತ್ತು ನೀಡುತ್ತದೆ. ಸಾಮಾಜಿಕ ನ್ಯಾಯ, ಸರ್ವರಿಗೂ ಸಮಪಾಲು, ಸಮಬಾಳು ನಮ್ಮ ಸಂವಿಧಾನ ಒದಗಿಸಿಕೊಟ್ಟಿದೆ. ಕಾಂಗ್ರೆಸಿಗರು ಸಂವಿಧಾನವನ್ನು ಬದಲಾಯಿಸಲು ಬಿಡಬಾರದು ಎಂಬ ಶಪಥ ಮಾಡಬೇಕು. ಸಂವಿಧಾನ ಉಳಿದರೆ ಮಾತ್ರ ನಾವೆಲ್ಲರೂ ಉಳಿಯಬಹುದು. ಸಂವಿಧಾನದ ರಕ್ಷಣೆಗೆ ಕಾಂಗ್ರೆಸ್ ನವರು ಎಲ್ಲ ಹೋರಾಟಗಳಿಗೂ ಸಿದ್ಧರಾಗಬೇಕಿದೆ ಎಂದರು.

ಭಾಜಪ ಎಂದಿಗೂ ಬಡವರಪರ ಕೆಲಸವನ್ನು ಮಾಡಿಲ್ಲ: ಕೋಮುವಾದಿ ಭಾರತೀಯ ಜನತಾ ಪಕ್ಷ ಸಂವಿಧಾನವನ್ನು ವಿರೋಧಿಸುತ್ತದೆ. ಸಾರ್ವಕರ್, ಗೋಲ್ವಕರ್ ಅವರು ಸಂವಿಧಾನವನ್ನು ಅಂದೇ ವಿರೋಧಿಸಿದ್ದರು. ಧರ್ಮಗಳ ನಡುವೆ ಸಂಘರ್ಷಗಳಿಂದ ರೈತರು, ದೀನದಲಿತರು, ಅಲ್ಪಸಂಖ್ಯಾತರು ಆತಂಕದಲ್ಲಿ ಬದುಕುವಂತಾಗಿದೆ. ಸಂಘ ಪರಿವಾರದವರು ಈಕೆಲಸವನ್ನು ಮಾಡುತ್ತಿದ್ದಾರೆ. ಭಾರತದಲ್ಲಿ ಹಾಗೂ ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ ಆಡಳಿತದಲ್ಲಿದ್ದು, ಅವರನ್ನು ಕಿತ್ತೊಗೆಯಬೇಕಾದ ಜವಾಬ್ದಾರಿ ಕಾಂಗ್ರೆಸ್‍ನ  ಮೇಲಿದೆ. ಪ್ರಜಾತಂತ್ರದ ರಕ್ಷಣೆಗಾಗಿ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ನಾವೆಲ್ಲರೂ ಸಿದ್ದಗೊಳ್ಳಬೇಕಿದೆ. ಆಪರೇಷನ್ ಕಮಲ ಮೂಲಕ 2008 ಹಾಗೂ 2018 ರಲ್ಲಿ ಅಧಿಕಾರಕ್ಕೆ ಬಂದಿತು. ಭಾಜಪ ಎಂದರೆ ಭ್ರಷ್ಟಾಚಾರ. ಕರ್ನಾಟಕದಲ್ಲಿ ಗುತ್ತಿಗೆದಾರರ ಸಂಘ 40% ಭ್ರಷ್ಟಾಚಾರದ ಸರ್ಕಾರ ಎಂದು ಕರೆಯಿತು. ಭಾಜಪ ಎಂದಿಗೂ ಬಡವ ಪರ ಕೆಲಸವನ್ನೆಂದೂ ಮಾಡಿಲ್ಲ ಎಂದರು.

ಅಕ್ಕಿ ನೀಡಲು ಒಪ್ಪದೇ, ಕೇಂದ್ರ ಸರ್ಕಾರ ದ್ವೇಷದ ರಾಜಕಾರಣವನ್ನು ಮಾಡುತ್ತಿದೆ: ಕಾಂಗ್ರೆಸ್ ಪಕ್ಷ ಕರ್ನಾಟಕದ ಜನರಿಗೆ 5 ಗ್ಯಾರೆಂಟಿಗಳನ್ನು ನೀಡಿದ್ದು, ಅಧಿಕಾರಕ್ಕೆ ಬಂದ ದಿನವೇ 5 ಗ್ಯಾರೆಂಟಿಗಳನ್ನು ಜಾರಿಗೊಳಿಸುವ ತೀರ್ಮಾನವನ್ನು ಮಾಡಲಾಯಿತು. ರಾಜ್ಯದೊಳಗೆ ಎಲ್ಲ ಮಹಿಳೆಯರು ಸರ್ಕಾರಿ ಬಸ್‍ನಲ್ಲಿ ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದೆ. ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಜ್ಯೋತಿ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಅನ್ನಭಾಗ್ಯ ಯೋಜನೆಯಡಿ ಏಳು ಕೆಜಿ ಅಕ್ಕಿಯನ್ನು ನೀಡಲಾಗುತ್ತಿತ್ತು. ಈ ಬಾರಿಯೂ ರಾಜ್ಯದ ಬಿಪಿಎಲ್ ಕಾರ್ಡ ಹಾಗೂ ಅಂತ್ಯೋದಯ ಕಾರ್ಡ್‍ದಾರರಿಗೆ 10 ಕೆಜಿ ಅಕ್ಕಿಯನ್ನು ನೀಡುವ ಅನ್ನಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಲಿದೆ.

ಅನ್ನಭಾಗ್ಯಯೋಜನೆಗೆ ಎಫ್ ಸಿ ಐ ಅಕ್ಕಿಯನ್ನು ನೀಡುವುದಾಗಿ ಮೊದಲು ಒಪ್ಪಿತ್ತು. ನಂತರ ಕೇಂದ್ರ ಸರ್ಕಾರದ ನೀತಿಯಿಂದ ಕಾಂಗ್ರೆಸ್ ಸರ್ಕಾರಕ್ಕೆ ಅಕ್ಕಿ ನೀಡಬಾರದು ಎಂದು ಸೂಚನೆ ನೀಡಿತು. ಅಕ್ಕಿ ದಾಸ್ತಾನಿದ್ದರೂ ಅಕ್ಕಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣವನ್ನು ಮಾಡಿದ್ದಾರೆ. ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದರೂ, ಕರ್ನಾಟಕಕ್ಕೆ ಅಕ್ಕಿ ನೀಡಲು ಒಪ್ಪುತ್ತಿಲ್ಲ. ಈ ಮೂಲಕ ಭಾರತೀಯ ಜನತಾ ಪಕ್ಷದವರು ಬಡವರ ವಿರೋಧಿಗಳು ಎಂಬುದು ನಿರೂಪಿತವವಾಗುತ್ತದೆ ಎಂದರು.

ನರೇಂದ್ರ ಮೋದಿಯವರ ಜನಪ್ರಿಯತೆ ಮಸುಕ್ಕಾಗುತ್ತಿದೆ: ಕರ್ನಾಟಕದಲ್ಲಿರುವ ನಿರುದ್ಯೋಗಿ ಪದವೀಧರ ಯುವಕರಿಗೆ ತಿಂಗಳಿಗೆ 3 ಸಾವಿರ ರೂ ಹಾಗೂ ಡಿಪ್ಲೊಮಾ ಪದವೀಧರರಿಗೆ 1,500 ರೂ.ಗಳನ್ನು 24 ತಿಂಗಳವರೆಗೆ ನೀಡುವ ಯುವಶಕ್ತಿ ಯೋಜನೆಯನ್ನು ಜಾರಿಗೊಳಿಸಲಾಗುವುದು. ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಲು ಪ್ರಧಾನಿ ಮೋದಿಯವರು ಹಾಗೂ ಕೇಂದ್ರ ಮಂತ್ರಿಮಂಡಲದ ಅನೇಕರು ರಾಜ್ಯಕ್ಕೆ ಭೇಟಿ ನೀಡಿದರು. ಆದರೂ ಕರ್ನಾಟಕದಲ್ಲಿ ಭಾಜಪ ಸೋತಿರುವುದು ನರೇಂದ್ರ ಮೋದಿಯವರ ಜನಪ್ರಿಯತೆ ಮಸುಕ್ಕಾಗುತ್ತಿದೆ ಎಂಬುದನ್ನು ಸಂಕೇತಿಸುತ್ತಿದೆ. ರಾಜ್ಯದ ಭಾಜಪ ಭ್ರಷ್ಟದಾಚಾರದಲ್ಲಿ ಮುಳುಗಿ, ಜನವಿರೋಧಿಯಾಗಿತ್ತು. ಕೇವಲ ಪ್ರಧಾನಿ ಮೋದಿಯವರನ್ನು ನಂಬಿ ಚುನಾವಣೆ ಗೆಲ್ಲಬಹುದೆಂಬ ಭಾಜಪದ ನಂಬಿಕೆ ಹುಸಿಯಾಯಿತು ಎಂದರು.

ಕಾರ್ಯ್ರಕ್ರಮದಲ್ಲಿ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾನಾ ಪಟೋಲೆ, ಶಾಸಕಾಂಗ ಪಕ್ಷದ ನಾಯಕ ಬಾಳಾ ಸಾಹೇಬ್ ತೋರತ್, ಕೇಂದ್ರದ ಮಾಜಿ ಸಚಿವ ಪೃಥ್ವಿರಾಜ್ ಚೌಹಾಣ್, ಶಾಸಕರಾದ ವಿಕ್ರಂ ಸಾವಂತ್, ವಿಶ್ವಜಿತ್ ಕದಂ ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

"ಪಕ್ಷದ ಶಿಸ್ತನ್ನು ಎಲ್ಲಾ ಶಾಸಕರು ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಖ್ಯಮಂತ್ರಿಗಳೂ ಸಹ ಈಗಾಗಲೇ ಈ ವಿಚಾರದ ಬಗ್ಗೆ ಹೇಳಿದ್ದಾರೆ. ಮುಂದಕ್ಕೆ ಎಲ್ಲರ ಭವಿಷ್ಯ ಪಕ್ಷದಲ್ಲಿದೆಯೇ

[ccc_my_favorite_select_button post_id="120925"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]