ಬಡಜನರಿಗೂ ಅನ್ನ ನೀಡುವ ಸಾರ್ಥಕ ಉದ್ದೇಶದಿಂದ ರೂಪಿಸಿದ ಯೋಜನೆ ಅನ್ನಭಾಗ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಜೂ.26): ಬಡಜನರು ತುತ್ತು ಅನ್ನವನ್ನು ಇನ್ನೊಬ್ಬರ ಮನೆಯಿಂದ ಕೇಳಿ ಪಡೆಯುತ್ತಿದ್ದ ಕಷ್ಟ ಪರಿಸ್ಥಿತಿಯನ್ನು ಕಣ್ಣಾರೆ ನೋಡಿದ್ದ ಕಾರಣ, ತುತ್ತು ಅನ್ನಕ್ಕಾಗಿ ಬಡಜನರು ಇನ್ನೊಬ್ಬರ ಮನೆ ಬಾಗಿಲಿಗೆ ಹೋಗದಂತೆ ಮಾಡಬೇಕೇಂದು ಪಣತೊಟ್ಟೆ. ಬಡಜನರಿಗೂ ಅನ್ನ ನೀಡುವ ಸಾರ್ಥಕ ಉದ್ದೇಶದಿಂದಲೇ ರೂಪಿಸಿದ ಯೋಜನೆ ಅನ್ನಭಾಗ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನ್ನಭಾಗ್ಯ ಯೋಜನೆ ಹಿಂದಿನ ತಮ್ಮ ಅನುಭವವನ್ನು ಹಂಚಿಕೊಂಡರು.

16ನೇ ವಿಧಾನಸಭಾ ಅಧಿವೇಶನಕ್ಕೆ ಆಯ್ಕೆ ಆಗಿರುವ  ನೂತನ ಶಾಸಕರಿಗೆ ಇಂದು ಹಮ್ಮಿಕೊಳ್ಳಲಾಗಿದ್ದ ತರಬೇತಿ ಶಿಬಿರದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಳ್ಳಿಗಳಲ್ಲಿ ಕೇವಲ ಶೇ.25 ರಷ್ಟು ಮಾತ್ರ ಅನ್ನ ಬಳಸುತ್ತಿದ್ದು, ಇನ್ನುಳಿದ ಶೇ.75 ರಷ್ಟು ಮನೆಗಳಲ್ಲಿ ರಾಗಿ ಅಥವಾ ಜೋಳ ಬಳಸುತ್ತಿದ್ದರು. ಹಬ್ಬಹರಿದಿನಗಳಲ್ಲಿ ಮಾತ್ರ ಅನ್ನ ಬಳಸುತ್ತಿದ್ದರು. ಬಡವರು ಮತ್ತು ಜಮೀನುರಹಿತ ಜನರು ಆರೋಗ್ಯ ಹಾಳಾದರೆ ಅನ್ನ ಬಳಸುತ್ತಿದ್ದ ಮನೆಗಳಿಗೆ ಹೋಗಿ ಅನ್ನ ನೀಡುವಂತೆ ಕೋರುತ್ತಿದ್ದರು. ಪ್ರಣಾಳಿಕೆ ರಚನಾ ಸಮಿತಿಯಲ್ಲಿ ನಾನು ಸದಸ್ಯನಾಗಿದ್ದು, ನನ್ನ ಅನುಭವದ ಆಧಾರದಲ್ಲಿ ಅನ್ನಭಾಗ್ಯ ಕಾರ್ಯಕ್ರಮವನ್ನು ರೂಪಿಸಿದೆ.

ಜನಪರ ಯೋಜನೆಗಳು: ಬಡವರು, ದೀನದಲಿತರು, ಆಟೋಚಾಲಕರು, ಕೂಲಿಕಾರರು, ಹೀಗೆ ಬಡಜನರಿಗೆ ಅನುಕೂಲವಾಗಲೆಂದೇ ಇಂದಿರಾ ಕ್ಯಾಂಟೀನ್ ನ್ನು ಸ್ಥಾಪಿಸಲಾಯಿತು. ಕಲಿಕೆಯ ಸಮಯದಲ್ಲಿ ಹಾಸ್ಟೆಲ್ ವ್ಯವಸ್ಥೆ ದೊರೆಯದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದ್ಯಾಸಿರಿ ಕಾರ್ಯಕ್ರಮ ರೂಪಿಸಿ 1,500 ರೂ. ನೀಡಲಾಯಿತು. ಮಳೆಯನ್ನು ಆಶ್ರಯಸಿ ಬದುಕುವ ರೈತರ ಅನುಕೂಲಕ್ಕಾಗಿ ಕೃಷಿಭಾಗ್ಯ ಕಾರ್ಯಕ್ರಮ, ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಎಲ್ಲ ಮಕ್ಕಳಿಗೂ ಸಮವಸ್ತ್ರ ಹಾಗೂ ಶೂಗಳನ್ನು ನೀಡುವ ಶೂ ಭಾಗ್ಯ ಕಾರ್ಯಕ್ರಮವನ್ನು ಜಾರಿಗೆ ತರಲಾಯಿತು ಎಂದು  ರೂಪಿಸಿದ ಯೋಜನೆಗಳ ಹಿಂದಿನ ಉದ್ದೇಶವನ್ನು ತಿಳಿಸಿದರು.

ಜನರ ಜೊತೆ ಹಿಂದೆಯೂ ಇದ್ದೇನೆ, ಮುಂದೆಯೂ ಇರಲಿದ್ದೇನೆ: 7 ಕೋಟಿ ಜನರಿಗೂ ನಾನು ಮುಖ್ಯಮಂತ್ರಿ , ಯಾವುದೇ ತಾರತಮ್ಯವಿಲ್ಲದೇ ಎಲ್ಲ ಜನರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಜಾತ್ಯತೀತವಾದ, ಧರ್ಮಾತೀತವಾದ ಸಂವಿಧಾನವನ್ನು ಡಾ.ಅಂಬೇಡ್ಕರ್ ಅವರು ನೀಡಿದ್ದು,ಸಹಿಷ್ಣುತೆ, ಸಹಬಾಳ್ವೆ ಅದರ ಪ್ರಮುಖ ಅಂಶವಾಗಿದೆ. ಜನರ ನಡುವೆ ಇದ್ದು, ಅವರ ಕಷ್ಟಸುಖಗಳಿಗೆ ಸ್ಪಂದಿಸಿ, ಜನರ ಧ್ವನಿಯಾಗಿ ದುಡಿದರೆ ಜನ ನಮ್ಮನ್ನು ಕೈಹಿಡಿಯುತ್ತಾರೆ. ಜನರ ಜೊತೆ ಹಿಂದೆಯೂ ಇದ್ದೇನೆ, ಮುಂದೆಯೂ ಇರಲಿದ್ದೇನೆ. ಇದು ನನ್ನ ಕಡೆಯ ಚುನಾವಣೆಯಾಗಿದ್ದರೂ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಸೇವೆಗೆ ಸದಾ ಇರುತ್ತೇನೆ ಎಂದು ನುಡಿದರು.

ಅಸಮಾನತೆಯನ್ನು ನಿವಾರಿಸಲು ರಾಜಕೀಯ ಪ್ರವೇಶ: ರಾಜಕೀಯ ಕ್ಷೇತ್ರಕ್ಕೆ ಕಾಲಿಡಲು ಪ್ರೇರಣೆ. ನಾನು ಕಾನೂನು ವಿದ್ಯಾರ್ಥಿಯಾಗಿದ್ದಾಗ, ರೈತ ಸಂಘದ ಅಧ್ಯಕ್ಷರಾಗಿದ್ದ ನಂಜುಂಡಸ್ವಾಮಿಯವರ ಸಂಪರ್ಕ ಒದಗಿಬಂದಿತು. ಅವರಿಂದ ದೇಶ, ಜಗತ್ತಿನ ರಾಜಕಾರಣದ ಬಗ್ಗೆ ಅರಿವು ಮೂಡಿತು. ರಾಜಕೀಯ ಹಿನ್ನಲೆಯಿರದ ಕುಟುಂಬದಿಂದ ಬಂದ ನನ್ನ ರಾಜಕೀಯ ಜೀವನಕ್ಕೆ ಬರಲು ಪ್ರೊ.ನಂಜುಂಡಸ್ವಾಮಿಯವರೇ ಪ್ರೇರಣೆ. ರೈತ ಸಂಘದ ಕಾರ್ಯದರ್ಶಿಯಾಗಿ, ಅಧ್ಯಾಪಕನಾಗಿ ಸೇವೆ ಸಲ್ಲಿಸಿದ್ದನ್ನು ಸ್ಮರಿಸಿದರು. ಸಮಾಜದಲ್ಲಿನ ಅಸಮಾನತೆಯನ್ನು ನಿವಾರಿಸುವ ಗುರಿಯೇ ರಾಜಕೀಯ ಜೀವನದ ಪ್ರವೇಶಕ್ಕೆ ನಾಂದಿಯಾಯಿತು ಎಂದು ತಿಳಿಸಿದರು.

ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ.ಎಸ್.ಹೊರಟ್ಟಿ, ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಷರೀಪ್, ಕಾನೂನು, ನ್ಯಾಯ, ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ, ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಸುರೇಂದ್ರಕುಮಾರ್ ಸೇರಿದಂತೆ ನೂತನ ಶಾಸಕರುಗಳು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

"ಪಕ್ಷದ ಶಿಸ್ತನ್ನು ಎಲ್ಲಾ ಶಾಸಕರು ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಖ್ಯಮಂತ್ರಿಗಳೂ ಸಹ ಈಗಾಗಲೇ ಈ ವಿಚಾರದ ಬಗ್ಗೆ ಹೇಳಿದ್ದಾರೆ. ಮುಂದಕ್ಕೆ ಎಲ್ಲರ ಭವಿಷ್ಯ ಪಕ್ಷದಲ್ಲಿದೆಯೇ

[ccc_my_favorite_select_button post_id="120925"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]