ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾಸನ, (ಜೂ.27: ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40 % ಕಮಿಷನ್ , ಕರೋನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪೊಲೀಸ್ ಎಎಸ್ಐ ನೇಮಕಾತಿ ಹಗರಣದ ತನಿಖೆ ಹಾಗೂ ಬಿಟ್ ಕಾಯಿನ್ ಗಳ ಬಗ್ಗೆ ತನಿಖೆಯನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ  ಆಕ್ಷಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆಯನ್ನು  ಕೈಗೊಳ್ಳುವುದಾಗಿ ತಿಳಿಸಿದರು. ಅಂದಿನ ಆರೋಗ್ಯ ಸಚಿವ ಡಾ: ಸುಧಾಕರ್ ಅಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು. ಆದರೆ ಅಲ್ಲಿ ಸತ್ತಿರುವವರ ಸಂಖ್ಯೆ ಹೆಚ್ಚಿತ್ತು ಎಂದರು.

ಗ್ಯಾರಂಟಿ ಯೋಜನೆಯ ಬಗ್ಗೆ ವಿಪಕ್ಷಗಳ ಟೀಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿ ಮಾಡಿದ್ದೇವೆ. ನಾವು ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 15 ರ ನಂತರ ಜಾರಿ ಮಾಡಲಾಗುವುದು. ಈಗಾಗಲೇ ಅರ್ಜಿ ಕರೆದಿದ್ದು, ಅರ್ಜಿಗಳು ಸ್ವೀಕಾರವಾಗುತ್ತಿವೆ ಎಂದರು.

ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿ: ಅನ್ನಭಾಗ್ಯ ಕಾರ್ಯಕ್ರಮಕ್ಕೆ 5 ಕೆಜಿ ಅಕ್ಕಿ ನೀಡುತ್ತಿದ್ದೇವೆ. ಒಟ್ಟು 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದೆವು. 2.29 ಲಕ್ಷ ಮೆ.ಟನ್ ಅಕ್ಕಿ ಅಗತ್ಯವಿದೆ. ಅಷ್ಟು ಅಕ್ಕಿ ನಮಗೆ ದೊರೆಯುತ್ತಿಲ್ಲ. ಕೇಂದ್ರ ಸರ್ಕಾರದ ಅಧೀನದ ಎಫ್.ಸಿ. ಐ ಅಕ್ಕಿ ನೀಡುವುದಾಗಿ ಒಪ್ಪಿ ನಂತರ ಕೊಡಲಾಗುವುದಿಲ್ಲ ಎಂದು ಪತ್ರ ಬರೆಯುತ್ತಾರೆ. ಇದು ಕೇಂದ್ರ ಸರ್ಕಾರದ ಷಡ್ಯಂತ್ರ. ಅಕ್ಕಿಯ ದಾಸ್ತಾನು ಇದ್ದರೂ ಕೊಡುತ್ತಿಲ್ಲ. ಈ ಬಗ್ಗೆ ಆಹಾರ ಇಲಾಖೆ ಮೂಲಕ ಹೇಳಿ ಬರೆಸಿದ್ದಾರೆ. ನವದೆಹಲಿಗೆ ಭೇಟಿ ನೀಡಿದಾಗ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಗಮನಕ್ಕೆ ತರಲಾಗಿದೆ. ಬಡವರ ಮೇಲೆ ಗದಾ ಪ್ರಹಾರ ಮಾಡಲಾಗುತ್ತಿದೆ. ನಾವು ಘೋಷಣೆ ಮಾಡಿದಂತೆಯೇ ಅಕ್ಕಿ ಕೋರಿ ಪತ್ರ ಬರೆಯಲಾಗಿದೆ. ಅವರು ಒಪ್ಪಿ ಪತ್ರವನ್ನೂ ಬರೆದಿದ್ದಾರೆ. ನಾವು ಘೋಷಣೆ ಮಾಡುವ ಮುನ್ನ ಯಡಿಯೂರಪ್ಪ, ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಕೇಳಿ ಘೋಷಣೆ ಮಾಡಬೇಕಿತ್ತೇ ಎಂದು ಪ್ರಶ್ನಿಸಿದರು.

ಬಿಜೆಪಿ ಬಡವರ ವಿರೋಧಿ ಪಕ್ಷ. ಅಕ್ಕಿ ಪಡೆಯಲು ನಮ್ಮ ಪ್ರಯತ್ನ ಜಾರಿಯಲ್ಲಿದೆ. ನ್ಯಾಫೆಡ್, ಕೇಂದ್ರೀಯ ಭಂಡಾರ್, ಎನ್.ಸಿ.ಸಿಎಫ್ ಅವರೊಂದಿಗೆ ಮಾತುಕತೆ ನಡೆಯುತ್ತಿದ್ದು, ನಾಳೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಲಾಗುತ್ತದೆ. ಎಲ್ಲಿಯೂ ಅಗತ್ಯವಿರುಷ್ಟು ಅಕ್ಕಿ ದೊರೆಯುತ್ತಿಲ್ಲ. ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿಗೆ ತರಲಾಗುವುದು ಎಂದರು.

ಬಿಜೆಪಿಯವರು ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ: ಗ್ಯಾರಂಟಿ ಯೋಜನೆಗಳು ಜಾರಿಯಾಗದಿದ್ದರೆ ಹೋರಾಟ ಮಾಡುವುದಾಗಿ ಬಿಜೆಪಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬೀದಿಗಿಳಿದು ಹೋರಾಟ ಮಾಡಲು ಬಿಜೆಪಿಗೆ ಯಾವ ನೈತಿಕ ಹಕ್ಕಿದೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ರಾಜಕೀಯ ಗಿಮಿಕ್ ಮಾಡಲು ಹೊರಡಬಾರದು. ಅವರಿಗೆ ನಿಜವಾಗಿಯೂ ಬದ್ಧತೆಯಿದ್ದರೆ ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ ಎಂದರು. 

ಐದು ಗ್ಯಾರೆಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ: 2022-23 ನೇ ಸಾಲಿನಲ್ಲಿ ಯುವ ನಿಧಿ ಕಾರ್ಯಕ್ರಮದಡಿ ನಿರುದ್ಯೋಗಿ ಪದವೀಧರರು, ಡಿಪ್ಲೊಮಾ ಮಾಡಿದವರಿಗೆ 6 ತಿಂಗಳೊಳಗೆ  ಕೆಲಸ ದೊರೆಯದೇ ಹೋದರೆ, ಪದವೀಧರರಿಗೆ 3 ಸಾವಿರ ಹಾಗೂ ಡಿಪ್ಲೊಮಾ ಮಾಡಿದವರಿಗೆ  1500 ರೂ.ಗಳನ್ನು 24 ತಿಂಗಳು ನೀಡಲಾಗುವುದು. 2.50 ಲಕ್ಷ ಹುದ್ದೆಗಳನ್ನು ಒಂದೇ ಸಾರಿಗೆ ಭರ್ತಿ ಮಾಡಲಾಗುವುದಿಲ್ಲ. ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಐದು ಗ್ಯಾರೆಂಟಿಗಳನ್ನು ಈಡೇರಿಸಲು ವಾರ್ಷಿಕವಾಗಿ 59000 ಕೋಟಿ ರೂ.  ಬೇಕಾಗುವುದು. ಐದು ಗ್ಯಾರೆಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ ಎಂದರು.

ಕೆಂಪೇಗೌಡರು ಜನಪರ ಹಾಗೂ ಜಾತ್ಯಾತೀತ ದೊರೆ: ಕೆಂಪೇಗೌಡರು ಜನಪರ ಹಾಗೂ ಜಾತ್ಯಾತೀತ ದೊರೆಯಾಗಿದ್ದರು. ಇವರ ಕಾಲದಲ್ಲಿ ಎಲ್ಲರೂ ಸೌಹಾರ್ದತೆಯಿಂದಿದ್ದರು. ಇಂತಹ ಮಾದರಿ ನಾಡಪ್ರಭುವನ್ನು ಸ್ಮರಿಸುವ ಸಲುವಾಗಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರದ ವತಿಯಿಂದಲೇ ಕೆಂಪೇಗೌಡರ ಜಯಂತಿಯನ್ನು ಆಚರಿಸಲು ಆದೇಶ ನೀಡಲಾಗಿತ್ತು. ಕೆಂಪೇಗೌಡರ ಪ್ರತಿಮೆಯನ್ನೂ ನಮ್ಮ ಅವಧಿಯಲ್ಲಿಯೇ ಸ್ಥಾಪಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಕೆಂಪೇಗೌಡರು ಒಬ್ಬ ಪ್ರಗತಿಪರವಾದ, ಜಾತ್ಯಾತೀತವಾದ ದೊರೆಯನ್ನು ಸ್ಮರಿಸುವ ದಿನವಾಗಿದೆ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ; ಹೆಚ್.ಡಿ. ಕುಮಾರಸ್ವಾಮಿ

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ; ಹೆಚ್.ಡಿ.

ನನ್ನ ಸಂಪರ್ಕದಲ್ಲಿ ಯಾವೊಬ್ಬ ನಾಯಕರು ಇಲ್ಲ. ಒಂದು ವೇಳೆ ಸಂಪರ್ಕಕ್ಕೆ ಬಂದರೆ ನಮ್ಮ ಪಕ್ಷದ ಹಿರಿಯ ನಾಯಕನ ಜೊತೆ ಚರ್ಚಿಸಿ ಸಾಧಕ ಬಾಧಕಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120931"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]