ಈ ದಿನದ ವಿಶೇಷ: ರಾಷ್ಟ್ರೀಯ ವೈದ್ಯರ ದಿನ

ಪ್ರತಿ ವರ್ಷ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಣೆ ಮಾಡಲಾಗುತ್ತದೆ. ವೈದ್ಯೋ ನಾರಾಯಣೋ ಹರಿಃ ಎಂಬುದು ನಮ್ಮ ಕಡೆ ಇರುವ ಮಾತು. ಅಂದರೆ ವೈದ್ಯರನ್ನು ನಾವು ಸಾಕ್ಷಾತ್‌  ದೇವರೆಂದೇ ಕಾಣುತ್ತೇವೆ. 

ಮನುಷ್ಯನಿಗೆ ಆರೋಗ್ಯವೇ ಭಾಗ್ಯ ಎಂಬುದು ಸರ್ವಕಾಲಿಕ ಮಾತು. ಇದು ಅಷ್ಟೇ ಸತ್ಯವೂ ಕೂಡ. ಆರೋಗ್ಯವನ್ನು ರಕ್ಷಿಸುವುದು, ಅನಾರೋಗ್ಯಕ್ಕೆ ಮದ್ದು ನೀಡಿ, ಗುಣ ಪಡಿಸುವುದು ವೈದ್ಯರ ಕರ್ತವ್ಯವಾಗಿದೆ. ವೈದ್ಯೋ ನಾರಾಯಾಣ ಹರಿ ಎನ್ನುವುದು ಅದಕ್ಕೆ ಸಾಕ್ಷಿಯಾಗಿದೆ. ಅದಕ್ಕಾಗಿ ವೈದ್ಯರನ್ನ ದೇವರಿಗೆ ಹೊಲಿಸಲಾಗುತ್ತದೆ. ಈ ಪದ್ಧತಿಯೂ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ.

ಭಾರತದಲ್ಲಿ ಜುಲೈ.1 ರಂದು ರಾಷ್ಟ್ರೀಯ ವೈದ್ಯರ ದಿನ ಆಚರಿಸಲಾಗುತ್ತದೆ. ಅದಕ್ಕೊಂದು ಕಾರಣವೂ ಇದೆ. ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿಯಾಗಿದ್ದ ಡಾ.ಬಿದಾನ್ ಚಂದ್ರ ರಾಯ್ ಅವರ ನೆನಪಲ್ಲಿ ಜುಲೈ.1ನ್ನು ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಿಸಲಾಗುತ್ತದೆ. 

ಅವರೊಬ್ಬ ಅಸಾಧಾರಣ ವೈದ್ಯರಾಗಿದ್ದವರು. ಅವರ ಗಣನೀಯ ಸೇವೆಯನ್ನು ಪರಿಗಣಿಸಿ 1961ರ ಫೆಬ್ರವರಿ 4ರಂದು ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿತ್ತು. ಕುತೂಹಲಕರ ವಿಚಾರವೆಂದರೆ ಅವರು ಜನಿಸಿದ್ದು 1882, ಜು.1. ತೀರಿಕೊಂಡಿದ್ದು, 1962 ಜುಲೈ.1. ಅವರು ಜನಿಸಿದ ದಿನ ಮತ್ತು ತೀರಿಕೊಂಡ ದಿನ ಒಂದೇ ಆಗಿದೆ. 

ಒಬ್ಬ ಮಾದರಿ ವೈದ್ಯರಾಗಿ ತಮ್ಮ ಬದುಕು ಸವೆಸಿದ ಅವರ ನೆನಪಿನಲ್ಲೇ ರಾಷ್ಟ್ರೀಯ ವೈದ್ಯರ ದಿನ ಆಚರಿಸಬೇಕು ಎಂದು ನಿರ್ಧರಿಸಿದ ಭಾರತ ಸರ್ಕಾರ 1991ರಲ್ಲಿ ಜುಲೈ 1ನ್ನು ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಿಸಲು ಕರೆಕೊಟ್ಟಿತು. 

ರಾಯ್ ಅವರು ಅಪ್ರತಿಮ ವೈದ್ಯರಾಗಿದ್ದರು. ತಮ್ಮ ದೂರದೃಷ್ಟಿ ನಿಲುವುಗಳಿಂದ ವೈದ್ಯಲೋಕಕ್ಕೆ ಅಪರೂಲದ ಕೊಡುಗೆ ಕೊಟ್ಟವರು. ಮೇಲು ಕೀಳು ನೋಡದೆ, ಭೇದಭಾವ ಮಾಡದೆ ಎಲ್ಲರನ್ನೂ ಒಂದೇ ರೀತಿ ನೋಡಿದ ಜನಮೆಚ್ಚಿದ ವೈದ್ಯರಾಗಿದ್ದ ರಾಯ್, ಹೊಸತನದ ಆಲೋಚನೆಗಳನ್ನು ಹೊಂದಿದ್ದರು. 

1905ರಲ್ಲಿ ಅವರು ಕೋಲ್ಕತಾ ವಿವಿಯಲ್ಲಿ ಓದುತ್ತಿರುವಾಗ ಬಂಗಾಳ ವಿಭಜನೆಯಾಯಿತು. ಸ್ವಾತಂತ್ರ್ಯ ಹೋರಾಟದಲ್ಲೂ ಭಾಗಿಯಾಗಿದ್ದ ರಾಯ್ ಅವರು ಕೆಲ ಕಾಲ ಮಹಾತ್ಮ ಗಾಂಧೀಜಿಯ ವೈದ್ಯರೂ ಆಗಿದ್ದರು ಎನ್ನುವುದು ವಿಶೇಷ. ಅವರು ವೈದ್ಯರಾಗಿದ್ದೂ ಅಲ್ಲದೆ ಆಡಳಿತದಲ್ಲೂ ಮುಂದೆ ನಿಂತು ಕೆಲಸ ಮಾಡಿದ್ದು, ಅಚ್ಚರಿ ತರುವಂತಹದ್ದು. 

ಅನೇಕ ದೊಡ್ಡ ಆಸ್ಪತ್ರೆಗಳು ಅವರ ಕಾಲದಲ್ಲಿ ಸ್ಥಾಪನೆಯಾಗಿದೆ. ಸುಮಾರು 14 ವರ್ಷಗಳ ಕಾಲ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದ ಅವರು ಆ ಸಮಯದಲ್ಲೂ ರೋಗಿಗಳ ಶುಶ್ರೂಷೆ ಮಾಡುತ್ತಿದ್ದರು. ಆ ಕಾರಣಕ್ಕೆ ಜನರ ಒಲವು ಗಳಿಸಿದ್ದರು. ಇಂತಹ ಮಹತ್ವದ ವೈದ್ಯರ ನೆನಪಿನಲ್ಲಿ ಭಾರತದಲ್ಲಿ ಜು.1ರಂದು ರಾಷ್ಟ್ರೀಯ ವೈದ್ಯರ ದಿನ ಆಚರಿಸಲಾಗುತ್ತದೆ. 

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!