ಬೆಂಗಳೂರು, (ಜುಲೈ.08): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್ನಲ್ಲಿ ಮದ್ಯದ ಮೇಲಿನ ತೆರಿಗೆ ಹೆಚ್ಚಳವಾಗಲಿದೆ ಎನ್ನುವ ಮೂಲಕ ಮದ್ಯಪ್ರಿಯರಿಗೆ ಶಾಕ್ ನೀಡಿದರು.
ಅವರು ಶುಕ್ರವಾರ ತಮ್ಮ 14ನೇ ಆಯವ್ಯಯ ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳಿಗೆ 13,500 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಹೆಚ್ಚಳ ಹಾಗೂ 8000 ಕೋಟಿ ರೂ. ಹೆಚ್ಚುವರಿ ಸಾಲದ ಮೂಲಕ ಮತ್ತು ಉಳಿದ ಸಂಪನ್ಮೂಲವನ್ನು ಯೋಜನೆಗಳ ಆದ್ಯತೆಯನ್ನು ನಿಗದಿಪಡಿಸುವ ಮೂಲಕ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ಈ ಯೋಜನೆಗಳ ಅನುಷ್ಠಾನಕ್ಕಾಗಿ ಬಡವರ-ಮಧ್ಯಮ ವರ್ಗದವರ ಮೇಲೆ ಯಾವುದೇ ತೆರಿಗೆ ಹಾಕಿಲ್ಲ, ಜನರಿಗೆ ಹೊರೆ ಆಗಬಾರದು ಎನ್ನುವ ಕಾರಣಕ್ಕೇ ಪೆಟ್ರೋಲ್ ಡೀಸೆಲ್ ಮೇಲೆ ತೆರಿಗೆ ಹಾಕಲಿಲ್ಲ, ಬೆಲೆ ಏರಿಕೆ ಮಾಡಿಲ್ಲ ಎಂದರು.
ವ್ಹಿಸ್ಕಿ ಮತ್ತು ಬಿಯರ್ ಮೇಲೆ ತೆರಿಗೆ ಹೆಚ್ಚಿಸಿದ್ದಕ್ಕೆ ಪತ್ರಕರ್ತರು, “ನೀವು ಮಹಿಳಾ ಪರ ಬಜೆಟ್ ಮಂಡಿಸಿ ಪುರುಷ ವಿರೋಧಿ ಆಗ್ತಿದ್ದೀರಿ” ಎಂದು ಹಾಸ್ಯ ಮಾಡಿದರು.
ಈ ವೇಳೆ ಹಾಸ್ಯದ ದಾಟಿಯಲ್ಲೇ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಡುಸ್ರು ಮಾತ್ರ ಕುಡಿಯೋದಾ ಎನ್ನುತ್ತಾ, ರಾಜ್ಯದ ಕಲ್ಯಾಣಕ್ಕಾಗಿ ಕುಡಿಯುವವರು ತಮ್ಮ ಪಾಲನ್ನೂ ಕೊಡಲಿ ಬಿಡಿ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….