ದೊಡ್ಡಬಳ್ಳಾಪುರ, (ಏ.26): ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿ ನಗರ ಅಧ್ಯಕ್ಷ ಹೆಚ್.ಎಸ್.ಶಿವಶಂಕರ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿಜೆಪಿ ನಗರ ಅಧ್ಯಕ್ಷರಾಗಿ ಕೆ.ಬಿ.ಮುದ್ದಪ್ಪ ಹಾಗೂ ಗ್ರಾಮಾಂತರ ಅಧ್ಯಕ್ಷರಾಗಿ ನಾಗೇಶ್ ಅವರನ್ನು ನೇಮಿಸಲಾಗಿದೆ.
ಈ ಕುರಿತಂತೆ ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ ಆದೇಶಿಸಿದ್ದು, ಮುದ್ದಪ್ಪ ಮತ್ತು ನಾಗೇಶ್ ಅವರನ್ನು ದೊಡ್ಡಬಳ್ಳಾಪುರ ನಗರ ಬಿಜೆಪಿ ಹಾಗೂ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….