ರಾಷ್ಟ್ರೀಯ ಹೆದ್ದಾರಿಗೆ ಅಗತ್ಯ ಭೂಸ್ವಾಧೀನ ಮಾಡಿಕೊಡಲು ರಾಜ್ಯ ಸರ್ಕಾರಕ್ಕೆ ಮನವಿ: ಬಸವರಾಜ ಬೊಮ್ಮಾಯಿ

ಗದಗ, (ಸೆ.04): ಗದಗ ಬೈಪಾಸ್, ಇಳಕಲ್ ಕಾರವಾರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಅಗತ್ಯ ಭೂಸ್ವಾಧೀನ ಮಾಡಿಕೊಟ್ಟರೆ, ಕೇಂದ್ರ ಸರ್ಕಾರ ಯೋಜನೆಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. 

ಅವರು ಗದಗನಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಹೊಸ ಕಾಮಗಾರಿಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಸಭೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಹೊಸ ಕಾಮಗಾರಿಗಳ ಕುರಿತು ಚರ್ಚೆ ನಡೆಸಲಾಯಿತು. ಈಗ ನಡೆಯುತ್ತಿರುವ ಕಾಮಗಾರಿಗಳಿಗೆ ಇರುವ ಸಮಸ್ಯೆಗಳನ್ನು ಚರ್ಚೆ ಮಾಡಲಾಯಿತು.

ಬಾಗಲಕೋಟೆ ಜಿಲ್ಲೆಯ ಶಾಂತಗಿರಿಯಿಂದ ಬರುವ ರಾಷ್ಟ್ರೀಯ ಹೆದ್ದಾರಿ ಬಳಿ ಕೆಲಸ ನಿಂತಿತ್ರು ಅದನ್ನು ಪುನ ಆರಂಭ‌ ಮಾಡಿದ್ದೇವೆ. ಗಜೇಂದ್ರಗಢ ಬೈಪಾಸ್ ಕಾಮಗಾರಿ ಆರಭವಾಗಿದೆ. ಗದಗ ಬೈಪಾಸ್ ಡಿಪಿಆರ್ ಸಿದ್ದಪಡಿಸಲಾಗಿದ್ದು 473 ಕೋಟಿ ರೂ. ಅಂದಾಜು ಮಾಡಲಾಗಿದೆ. 73 ಕೋಟಿ ರೂ. ಭೂ ಸ್ವಾಧಿನಕ್ಕೆ ಬೇಕಾಗಿದೆ. ನಾನು ಸಿಎಂ ಇದ್ದಾಗ 38 ಕೋಟಿ ರೂ. ಮೀಸಲಿಡಲಾಗಿದೆ. ಶೀಘ್ರವೇ ಭೂ ಸ್ವಾಧೀನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ.

ರಾಜ್ಯ ಸರ್ಕಾರ ಕಾರ್ಯ ಚುರುಕುಗೊಳಿಸಿದರೆ  ಶೀಘ್ರವೇ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ನರಗುಂದ ಬೈಪಾಸ್ ಕಾಮಗಾರಿ ನಡೆಯುತ್ತಿದೆ. ಅದರ ಪ್ರಗತಿ ಮಾಡಬೇಕಿದೆ ಎಂದು ಹೇಳಿದರು.

ಇಳಕಲ್ ಕಾರವಾರ ರಾಷ್ಟ್ರೀಯ ಹೆದ್ದಾರಿ ಮಾಡಲು ಈಗಾಗಲೇ ಕೇಂದ್ರ ಹೆದ್ದಾರಿ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಮಾತನಾಡಿದ್ದೇನೆ. ಅವರು ಆದ್ಯತೆ ಮೇಲೆ ಮಾಡುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿಗಳೂ ಕೂಡ ನಿತಿನ್ ಗಡ್ಕರಿ ಅವರೊಂದಿಗೆ ಮಾತನಾಡಿದ್ದಾರೆ. ಹೊಸ ಪಟ್ಟಿಯಲ್ಲಿ ಸೇರಿಸುವುದು ವಿಳಂಬವಾಗುವ ಸಾಧ್ಯತೆ ಇರುವುದರಿಂದ ತ್ವರಿತಗತಿಯಲ್ಲಿ ಮೇಲ್ದರ್ಜೆಗೆ ಏರಿಸಲು ಬೇಕಾದ ಕ್ರಮ ಕೈಗೊಳ್ಳುವ ಪ್ರಯತ್ನ ನಡೆದಿದೆ ಎಂದು ಹೇಳಿದರು.

ರಾಜ್ಯ ಹೆದ್ದಾರಿಯಲ್ಲಿ ಬಹಳ ಕೆಟ್ಟು ಹೋಗಿರುವ ರಸ್ತೆಗಳನ್ನು ದುರಸ್ಥಿ ಮಾಡಲು ಕೆಎಸ್ ಎಸ್ ಡಿಪಿ ಅಡಿಯಲ್ಲಿ  20 ಕೋಟಿ ಹಾಗೂ ಬೇರೆ ಅನುದಾನದಲ್ಲಿ 5 ಕೋಟಿ ಮಂಜೂರಾಗಿದೆ. ಅದು ಸಾಕಾಗುವುದಿಲ್ಲ. ಬೇರೆ ಅನುದಾನ ಬಳಸಿ ರಸ್ತೆ ದುರಸ್ಥಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ಗದಗಿಗೆ ಕೇಂದ್ರಿಯ ವಿದ್ಯಾಲಯ ಮಂಜೂರಾಗಿದ್ದು, ನಾನು ಸಂಸದನಾದ ಮೇಲೆ 10 ಎಕರೆ ಮಂಜೂರಾಗಿದ್ದು ಮುಂದಿನ ವರ್ಷ ತಾತ್ಕಾಲಿಕ ಕಟ್ಟಡದಲ್ಲಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು.‌ ಇದರ ಜೊತೆಗೆ ಹಾವೇರಿ ಮತ್ತು ಗದಗ ರೈಲ್ವೆ ಯೋಜನೆಗಳ ಕುರಿತು ಮುಂದಿನ ತಿಂಗಳು ಅಧಿಕಾರಿಗಳ ಜೊತೆ ಸಭೆ ನಡೆಸಿ ಗದಗ ರೈಲು ನಿಲ್ದಾಣ, ರೈಲ್ವೆ ಮೇಲ್ಸೇತುವೆ ನಿರ್ಮಾಣದ ಕುರಿತು ಚರ್ಚೆ ನಡೆಸಲಾಗುವುದು. ಗದಗ ಯಲವಿಗಿ ರೈಲ್ವೆ ಯೋಜನೆಗೆ ಕೇಂದ್ರ ಬಜೆಟ್ ನಲ್ಲಿ 250 ಕೋಟಿ ರೂ. ಮೀಸಲಿಡಲಾಗಿದೆ. ನಮ್ಮ ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿದರೆ ಯೋಜನೆ ಜಾರಿಗೆ ಅನುಕೂಲವಾಗುತ್ತದೆ. ವರ್ಷದ ಆರಂಭದಲ್ಲಿ ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದರೆ ವರ್ಷಾಂತ್ಯದಲ್ಲಿ ಕೇಂದ್ರದ ಹಣ ಬಳಕೆ ಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದೇನೆ ಎಂದು ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!